ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡರಿಗೆ ಅಭಿನಂದನೆ
ಶಿವಮೊಗ್ಗ | 29 ಜನವರಿ 2024 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ನಗರದ ಸರ್ಜಿ ಕನ್ವೆನ್ಷನ್ ಹಾಲ್‌ನಲ್ಲಿ ಆಯೋಜಿಸಿದ್ದ ಅಮೃತಮಯಿ ಕಾರ್ಯಕ್ರಮದಲ್ಲಿ ಕೈಗಾರಿಕೋದ್ಯಮಿ, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ದಂಪತಿಗೆ ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸನ್ಮಾನಿಸಿ ಅಭಿನಂದಿಸಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi

ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡರ ಕುರಿತ “ದಿ ಐರನ್ ಮ್ಯಾನ್” ಕೃತಿ ಲೋಕಾರ್ಪಣೆ ನಡೆಸಲಾಯಿತು. ವಿಧಾನ ಪರಿಷತ್ ಮಾಜಿ ಸಭಾಪತಿ ಬಿ.ಎಲ್. ಶಂಕರ್ ಅಭಿನಂದನಾ ನುಡಿಗಳನ್ನಾಡಿದರು.

Click on below this picture, Like & Follow Facebook Page ” Digi Malenadu “
ಹಿರಿಯ ನಾಯಕ ಡಿ.ಎಚ್. ಶಂಕರಮೂರ್ತಿ ಮೌಲ್ಯಾಧಾರಿತ ರಾಜಕಾರಣ ವಿಷಯ ಕುರಿತು ಮಾತನಾಡಿದರು. ಪರಿಸರ ಪ್ರಜ್ಞೆಯೇ ಸಮಾಜಸೇವೆ ವಿಷಯ ಕುರಿತು ಅದಮ್ಯಚೇತನ ಫೌಂಡೇಷನ್ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಮಾತನಾಡಿದರು. ಇದೇ ಸಂದರ್ಭದಲ್ಲಿ ಶ್ರೀ ಬಸವ ಪ್ಲೇಟ್ ಬ್ಯಾಂಕ್ ಲೋಕಾರ್ಪಣೆಯನ್ನು ಎಸ್.ರುದ್ರೇಗೌಡ ಅಭಿನಂದನಾ ಸಮಿತಿ ಗೌರವಾಧ್ಯಕ್ಷ ಬಿ.ವೈ.ರಾಘವೇಂದ್ರ ನಡೆಸಿಕೊಟ್ಟರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : digimalenadu@gmail.com
ಅಭಿನಂದನಾ ಕಾರ್ಯಕ್ರಮದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಮಾಜಿ ಸಂಸದ ಆಯನೂರು ಮಂಜುನಾಥ್, ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಪಟ್ಟಾಭಿರಾಮ್, ಭಾನುಪ್ರಕಾಶ್, ಉದ್ಯಮಿ ಬಿ.ಸಿ.ನಂಜುಂಡ ಶೆಟ್ಟಿ, ಶಾಂತಲಾ ಇಂಡಸ್ಟ್ರೀಸ್ ಸಂಸ್ಥಾಪಕ ನಿರ್ದೇಶಕಿ ಶಾಂತಮ್ಮ ಡಿ.ಜಿ. ಶಿವಣ್ಣಗೌಡ್ರು, ಐಐಎಫ್ ಅಧ್ಯಕ್ಷ ಡಿ.ಎಸ್.ಚಂದ್ರಶೇಖರ್, ಎನ್.ಗೋಪಿನಾಥ್, ಅಭಿನಂದನಾ ಸಮಿತಿ ಅಧ್ಯಕ್ಷ ಡಿ.ಜಿ.ಬೆನಕಪ್ಪ, ಪ್ರಧಾನ ಕಾರ್ಯದರ್ಶಿ ಡಾ. ಧನಂಜಯ ಸರ್ಜಿ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/

