ಹೂ ಹಣ್ಣು ಮಾರುಕಟ್ಟೆ ಸಂಕೀರ್ಣ, ಸುಸಜ್ಜಿತ ವಾಹನ ನಿಲ್ದಾಣ ಕಟ್ಟಡ ಸೇರಿದಂತೆ ವಿವಿಧ ಯೋಜನೆಗಳ ಲೋಕಾರ್ಪಣೆ
ಶಿವಮೊಗ್ಗ | 29 ಜನವರಿ 2024 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ವತಿಯಿಂದ ಅನುಷ್ಠಾನಗೊಳಿಸಿರುವ ವಿವಿಧ ಯೋಜನೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಸೇರಿದಂತೆ ಜನಪ್ರತಿನಿಧಿಗಳು ಲೋಕಾರ್ಪಣೆಗೊಳಿಸಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಶಿವಮೊಗ್ಗ ಸ್ಪಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಿರ್ಮಿಸಿರುವ ತುಂಗಾ ರಿವರ್ ಫ್ರಂಟ್ ಯೋಜನೆ ಹಾಗೂ ಸಾರ್ವಜನಿಕ ಬೈಸಿಕಲ್ ಯೋಜನೆಯನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು.
Click on below this picture, Like & Follow Facebook Page ” Digi Malenadu “
ತುಂಗಾ ನದಿ ಉತ್ತರದಂಡೆ ಪಾದಚಾರಿ ಸೇತುವೆ, ವಾಯುವಿಹಾರ, ಸಾರ್ವಜನಿಕ ಬೈಸಿಕಲ್ ಯೋಜನೆಗಳನ್ನು ಸಾರ್ವಜನಿಕರು ಜವಾಬ್ದಾರಿಯಿಂದ ಸದುಪಯೋಗ ಮಾಡಿಕೊಂಡಲ್ಲಿ ಸಾರ್ಥಕವಾಗುತ್ತದೆ. ಸ್ಮಾರ್ಟ್‍ಸಿಟಿ ಯೋಜನೆಗಳ ಜವಾಬ್ದಾರಿ ನಮ್ಮೆಲ್ಲರ ಮೇಲೆ ಹಾಗೂ ಸಾರ್ವಜನಿಕರ ಮೇಲಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಸ್ಮಾರ್ಟ್‍ಸಿಟಿ ಕಾಮಗಾರಿಗಳು ಉತ್ತಮವಾಗಿ ಆಗಿದ್ದು, ಸಾರ್ವಜನಿಕರಿಗೆ ಮುಕ್ತಗೊಳಿಸುವ ಕಾರ್ಯ ನಡೆದಿದೆ. ಸ್ಪಾರ್ಟ್‍ಸಿಟಿ ಯೋಜನೆ ಮಂಜೂರಾತಿ ಮತ್ತು ಅನುಷ್ಟಾನದಲ್ಲಿ ಅನೇಕ ನಾಯಕರ ಪ್ರಯತ್ನ ಮತ್ತು ಶ್ರಮವಿದೆ ಎಂದರು.
ಶಿವಮೊಗ್ಗ ನಗರದ ಶಿವಪ್ಪನಾಯಕ ವೃತ್ತದಲ್ಲಿ ಪಾಲಿಕೆಗೆ ಹೊಂದಿಕೊಂಡಂತೆ ಹೂವು ಹಣ್ಣು ಮಾರುಕಟ್ಟೆಗಾಗಿ 118 ಮಳಿಗೆ, ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ ಕಟ್ಟಡದಲ್ಲಿ ಒಟ್ಟು 172 ಕಾರು ಮತ್ತು 78 ಬೈಕ್ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ವಿಧಾನ ಪರಿಷತ್ ಮಾಜಿ ಶಾಸಕ ಆಯನೂರು ಮಂಜುನಾಥ್, ಮಹಾನಗರ ಪಾಲಿಕೆ ಮಾಜಿ ಸದಸ್ಯ ಯೋಗೇಶ್, ಗನ್ನಿ ಶಂಕರ್, ಧೀರರಾಜ್ ಹೊನ್ನವಿಲೆ, ಶಬನಾ ಖಾನಂ, ಸ್ವತಂತ್ರ ನಿರ್ದೇಶಕಿ ಲಕ್ಷ್ಮಿ ಗೋಪಿನಾಥ್, ಸ್ಪಾರ್ಟ್ ಸಿಟಿ ಎಂಡಿ ಕೆ.ಮಾಯಾಣ್ಣಗೌಡ, ಮುಖ್ಯ ಇಂಜನಿಯರ್ ರಂಗನಾಥ ಮತ್ತು ಅಧಿಕಾರಿಗಳು ಸಿಬ್ಬಂದಿಗಳು ಇದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/