ಶಿವಮೊಗ್ಗದಲ್ಲಿ ಐದು ದಿನಗಳ ರಾಷ್ಟ್ರಮಟ್ಟದ ವಾಲಿಬಾಲ್ ಕ್ರೀಡಾಕೂಟ ಪ್ರಾರಂಭ
ಶಿವಮೊಗ್ಗ | 30 ಜನವರಿ 2024 | ಡಿಜಿ ಮಲೆನಾಡು.ಕಾಂ
ವ್ಯಕ್ತಿಯ ಬೌದ್ಧಿಕ ಮತ್ತು ಮಾನಸಿಕ ವಿಕಾಸಕ್ಕೆ ಕ್ರೀಡೆಗಳು ಸಹಕಾರಿಯಾಗಿವೆ. ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಯ ಅನಾವರಣಗೊಳಿಸಲು ವೇದಿಕೆಗಳನ್ನು ಒದಗಿಸುವುದು ಅತ್ಯಂತ ಮುಖ್ಯ ಎಂದು ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಎಸ್.ಬಂಗಾರಪ್ಪ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಆಶ್ರಯದಲ್ಲಿ ಶಿವಮೊಗ್ಗ ನಗರದ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ “ಸ್ಕೂಲ್ ಗೇಮ್ಸ್ ಆಫ್ ಇಂಡಿಯಾ 67ನೇ ರಾಷ್ಟ್ರ ಮಟ್ಟದ 19 ವರ್ಷ ವಯೋಮಿತಿಯೊಳಗಿನ ಬಾಲಕಿಯರ ವಾಲಿಬಾಲ್ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
Click on below this picture, Like & Follow Facebook Page ” Digi Malenadu “
ಸಾನಿಧ್ಯ ವಹಿಸಿದ್ದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಕ್ರೀಡಾಕೂಟದ ಯಶಸ್ಸಿಗೆ ಶುಭಹಾರೈಸಿದರು. ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೆಗೌಡ ಮಾತನಾಡಿದರು. ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ವಿಶೇಷ ಸಾಧನೆ ಮಾಡಿದ ಮಹಿಳಾ ಕ್ರೀಡಾಪಟು ಹನಿ ಅವರನ್ನು ಗುರುತಿಸಿ ಗೌರವಿಸಲಾಯಿತು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ದೇಶಕಿ ಸಿಂಧು ಬಿ.ರೂಪೇಶ್, ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ, ಜಿಪಂ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗರೆಡ್ಡಿ, ಮಾಯಣ್ಣಗೌಡ, ಬಿ.ಕೃಷ್ಣಪ್ಪ, ಅನಿಲ್‌ಭೂಮರೆಡ್ಡಿ, ಗುಬ್ಬಿಗೂಡು ರಮೇಶ್, ಸಂಜಯ್ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/