ಉದ್ಯಮ ಕ್ಷೇತ್ರದಲ್ಲಿ ಪರಿಣಿತರಾಗಲು ಕೌಶಲ್ಯ ಅಗತ್ಯ

ಉದ್ಯಮ ಕ್ಷೇತ್ರದಲ್ಲಿ ಪರಿಣಿತರಾಗಲು ಕೌಶಲ್ಯ ಅಗತ್ಯ

ಶಿವಮೊಗ್ಗ | 13 ಫೆಬ್ರವರಿ 2024 | ಡಿಜಿ ಮಲೆನಾಡು.ಕಾಂ

ಮಹಿಳೆಯರು ಉದ್ಯಮ ಕ್ಷೇತ್ರದಲ್ಲಿ ಪರಿಣಿತರಾಗಲು ಅಗತ್ಯವಿರುವ ಕೌಶಲ್ಯ ಕಲಿಯಲು ಸೂಕ್ತ ಸಮಯ ಮೀಸಲಿಡಬೇಕು ಎಂದು ಸರ್ಜಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ. ಧನಂಜಯ ಸರ್ಜಿ ಅಭಿಪ್ರಾಯಪಟ್ಟರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ನಗರದ ಮಥುರಾ ಪಾರಾಡೈಸ್‌ನಲ್ಲಿ ಸ್ವೇದ ಮಹಿಳಾ ಉದ್ಯಮಿಗಳ ಸಂಘದಿಂದ ಆಯೋಜಿಸಿದ್ದ “ಜೆಡ್” ಯೋಜನೆ ಕುರಿತು ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡುತ್ತಿದ್ದು, ನಿಮ್ಮ ಆಯ್ಕೆಯ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸಬೇಕು. ಈಗಾಗಲೇ ಸಾಧನೆ ಮಾಡಿರುವವರ ಬಗ್ಗೆ ಅಧ್ಯಯನ ನಡೆಸಬೇಕು. ಪ್ರಸ್ತುತ ಇರುವ ಸ್ಥಿತಿಗಿಂತ ಉತ್ತಮ ಹಂತಕ್ಕೆರಲು ನಿರಂತರ ಪರಿಶ್ರಮ ವಹಿಸಲು ಕೆಲಸ ಮಾಡಬೇಕು ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ಮಾರುಕಟ್ಟೆ ವ್ಯವಸ್ಥೆಯಲ್ಲಿ ಪ್ರಗತಿ ಹೊಂದಲು ಅಗತ್ಯವಿರುವ ಪ್ರಮಾಣಪತ್ರ ಹಾಗೂ ತರಬೇತಿ ಪಡೆಯುವುದು ಮುಖ್ಯ ಎಂದು ಹೇಳಿದರು.

ಸ್ವೇದ ಮಹಿಳಾ ಉದ್ಯಮಿಗಳ ಸಂಘದ ಅಧ್ಯಕ್ಷೆ ಡಾ. ಲಕ್ಷ್ಮೀದೇವಿ ಗೋಪಿನಾಥ್ ಮಾತನಾಡಿ, ಮಹಿಳೆಯರು ಉದ್ಯಮ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಅಗತ್ಯವಿರುವ ಕೌಶಲ್ಯಗಳನ್ನು ಮಹಿಳಾ ಉದ್ಯಮಿಗಳಿಗೆ ನಿರಂತರವಾಗಿ ತರಬೇತಿ ನೀಡುವ ಕೆಲಸವನ್ನು ನಮ್ಮ ಸಂಸ್ಥೆಯು ಮಾಡುತ್ತಿದ್ದು, ಎಂಎಸ್‌ಎಂಇ, ಜೆಇಡಿ ಪ್ರಮಾಣ ಪತ್ರದ ಬಗ್ಗೆ ಅರಿವು ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಎಂಎಸ್‌ಎಂಇ ಜಿಲ್ಲಾ ಸಂಯೋಜಕ ಬಿ.ಟಿ.ಹನುಮಂತಯ್ಯ ಮಾತನಾಡಿ, ಜೆಡ್ ಸರ್ಟಿಫಿಕೇಟ್‌ನಿಂದ ಬ್ಯಾಂಕಿನಿಂದ ಕಡಿಮೆ ಬಡ್ಡಿ ದರದಲ್ಲಿ ಸಾಲ, ಸರ್ಕಾರದ ಮಾರುಕಟ್ಟೆ ಅಭಿವೃದ್ಧಿ ಯೋಜನೆಗಳಲ್ಲಿ ಸಹಾಯ ಮೊದಲಾದ ಹಲವು ಉಪಯುಕ್ತತೆಗಳಿದೆ ಎಂದು ಮಾಹಿತಿ ನೀಡಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ನಿವೃತ್ತ ಪ್ರಾಚಾರ್ಯ ಡಾ. ಧನಂಜಯ್, ಸ್ವೇದ ಮಹಿಳಾ ಉದ್ಯಮಿಗಳ ಸಂಘದ ಕಾರ್ಯದರ್ಶಿ ಶಿಲ್ಪಾ ಗೋಪಿನಾಥ್, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್, ಸಹನಾ ಚೇತನ್ ಮತ್ತಿತರರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!