ಕೇಂದ್ರ ಸಚಿವ ನಿತಿನ್ ಜೈರಾಂ ಗಡ್ಕರಿ ಶಿವಮೊಗ್ಗ ಭೇಟಿ, ಫೆಬ್ರವರಿ 22ಕ್ಕೆ ವಿದ್ಯಾನಗರ ರೈಲ್ವೇ ಮೇಲ್ಸೇತುವೆ ಉದ್ಘಾಟನೆ

ಕೇಂದ್ರ ಸಚಿವ ನಿತಿನ್ ಜೈರಾಂ ಗಡ್ಕರಿ ಶಿವಮೊಗ್ಗ ಭೇಟಿ, ಫೆಬ್ರವರಿ 22ಕ್ಕೆ ವಿದ್ಯಾನಗರ ರೈಲ್ವೇ ಮೇಲ್ಸೇತುವೆ ಉದ್ಘಾಟನೆ

ಶಿವಮೊಗ್ಗ | 19 ಫೆಬ್ರವರಿ 2024 | ಡಿಜಿ ಮಲೆನಾಡು.ಕಾಂ

ರಾಷ್ಟ್ರೀಯ ಹೆದ್ದಾರಿ ದಕ್ಷಿಣ ವಲಯದ 18 ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮ ಶಿವಮೊಗ್ಗ ನೆಹರು ಕ್ರೀಡಾಂಗಣದಲ್ಲಿ ಫೆಬ್ರವರಿ 22ಕ್ಕೆ ಹಮ್ಮಿಕೊಂಡಿದ್ದು, ಕೇಂದ್ರ ಸಚಿವ ನಿತಿನ್‌ ಜೈರಾಂ ಗಡ್ಕರಿ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ ಎಂದು ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 139.41 ಕೋಟಿ ರೂ. ವೆಚ್ಚದ ಕಾಮಗಾರಿಗಳು ಲೋಕಾರ್ಪಣೆ ಆಗಲಿದ್ದು, ವಿದ್ಯಾನಗರದ ರೈಲ್ವೇ ಮೇಲ್ಸೇತುವೆ ಉದ್ಘಾಟನೆ ಆಗಲಿದೆ. 2138.30 ಕೋಟಿ ರೂ. ವೆಚ್ಚದ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Click on below this picture, Like & Follow Facebook Page ” Digi Malenadu “

ಲೋಕಾರ್ಪಣೆ ಆಗುತ್ತಿರುವ ಕಾಮಗಾರಿಗಳು: ಬೈಂದೂರು ರಾಣೆಬೆನ್ನೂರು ಮಾರ್ಗದಲ್ಲಿ 19.77 ಕೋಟಿ ರೂ. ವೆಚ್ಚದಲ್ಲಿ 7 ಕಿರುಸೇತುವೆಗಳ ನಿರ್ಮಾಣ. 43.90 ಕೋಟಿ ರೂ. ವೆಚ್ಚದಲ್ಲಿ ವಿದ್ಯಾನಗರದಲ್ಲಿ ರೈಲ್ವೇ ಮೇಲ್ಸೇತುವೆ ನಿರ್ಮಾಣ. 20.12 ಕೋಟಿ ರೂ. ವೆಚ್ಚದಲ್ಲಿ ತುಂಗಾ ನದಿಗೆ ಸೇತುವೆ ನಿರ್ಮಾಣ. 55.62 ಕೋಟಿ ರೂ. ವೆಚ್ಚದಲ್ಲಿ ತೀರ್ಥಹಳ್ಳಿಯಲ್ಲಿ ತುಂಗಾ ನದಿಗೆ ಸೇತುವೆ ಹಾಗೂ ಬೈಪಾಸ್‌ ರಸ್ತೆ ನಿರ್ಮಾಣ.

ಶಂಕುಸ್ಥಾಪನೆ ಕಾಮಗಾರಿಗಳು: 313.56 ಕೋಟಿ ರೂ. ವೆಚ್ಚದಲ್ಲಿ ಹೊಸನಗರ ವ್ಯಾಪ್ತಿಯಲ್ಲಿ ಬೈಪಾಸ್‌ ರಸ್ತೆ ಹಾಗೂ ಸೇತುವೆಗಳ ನಿರ್ಮಾಣ. 653 ಕೋಟಿ ರೂ. ವೆಚ್ಚದಲ್ಲಿ ಸಿಂಹಧಾಮದಿಂದ ಆನಂದಪುರದವರೆಗೆ 4 ಪಥದ ರಸ್ತೆ ನಿರ್ಮಾಣ. 198.58 ಕೋಟಿ ರೂ. ವೆಚ್ಚದಲ್ಲಿ ತಾಳಗುಪ್ಪ ಬಳಿ ರೈಲ್ವೇ ಮೇಲ್ಸೇತುವೆ ಹಾಗೂ ಬೈಪಾಸ್‌ ರಸ್ತೆ.

39.50 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ ನಗರದಿಂದ ಹರಕೆರೆವರೆಗೆ ನಾಲ್ಕು ಪಥದ ರಸ್ತೆ ನಿರ್ಮಾಣ. 394.95 ಕೋಟಿ ರೂ. ವೆಚ್ಚದಲ್ಲಿ ಬೈಂದೂರಿನಿಂದ ನಾಗೋಡಿವರೆಗೆ ದ್ವಿಪಥದ ರಸ್ತೆ ನಿರ್ಮಾಣ. ನೆಲ್ಲಿಸರದಿಂದ ತೀರ್ಥಹಳ್ಳಿವರೆಗೆ 538.71 ಕೋಟಿ ರೂ. ವೆಚ್ಚದಲ್ಲಿ ನಾಲ್ಕು ಪಥದ ರಸ್ತೆ ನಿರ್ಮಾಣ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಪ್ರಮುಖರಾದ ಶಿವರಾಜ್‌, ದೀನದಯಾಳ್‌, ವಿನ್ಸೆಂಟ್‌, ಮೋಹನರೆಡ್ಡಿ, ಮಂಜುನಾಥ್‌, ಕೆ.ವಿ.ಅಣ್ಣಪ್ಪ, ಚಂದ್ರಶೇಖರ್‌ ಸುದ್ದಿಗೋಷ್ಠಿಯಲ್ಲಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!