ವಿದ್ಯಾರ್ಥಿ ಹಂತದಲ್ಲಿ ಜ್ಞಾನದ ಜೊತೆಗೆ ಕೌಶಲ್ಯ ಮುಖ್ಯ

ವಿದ್ಯಾರ್ಥಿ ಹಂತದಲ್ಲಿ ಜ್ಞಾನದ ಜೊತೆಗೆ ಕೌಶಲ್ಯ ಮುಖ್ಯ

ಶಿವಮೊಗ್ಗ | 21 ಫೆಬ್ರವರಿ 2024 | ಡಿಜಿ ಮಲೆನಾಡು.ಕಾಂ

ಶಿಕ್ಷಣದಿಂದ ಕಲಿಯುವ ಜ್ಞಾನದ ಜೊತೆಗೆ ಸಮಾಜದಲ್ಲಿ ಅವಶ್ಯಕತೆಯಿರುವ ಕೌಶಲ್ಯತೆಗಳನ್ನು ವಿದ್ಯಾರ್ಥಿ ಜೀವನದಲ್ಲಿಯೇ ಅಳವಡಿಸಿಕೊಳ್ಳಬೇಕು ಎಂದು ಶಾಂತಲಾ ಸ್ಪೆರೋಕ್ಯಾಸ್ಟ್ ವ್ಯವಸ್ಥಾಪಕ ನಿರ್ದೇಶಕ ಎ.ಎಲ್. ಚಂದ್ರಶೇಖರ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ವತಿಯಿಂದ ಬುಧವಾರ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಕಾರ್ಪೊರೇಟ್ ಕ್ಷೇತ್ರದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ಸದಾ ನೀಡಲಾಗುತ್ತಿದೆ. ಅಂತಹ ಅವಕಾಶಗಳನ್ನು ಬಳಸಿಕೊಂಡು ಮಹಿಳೆಯರು ಅನೇಕ ಸಾಧನೆಗಳನ್ನು ನಡೆಸುತ್ತಿರುವುದು ಅಭಿನಂದನಾರ್ಹ. ನಾವು ಮಾಡುವ ಕೆಲಸದ ಬಗ್ಗೆ ನಂಬಿಕೆ ಹಾಗೂ ಶಿಸ್ತು ಕಂಡಿತ ಕಷ್ಟದ ದಿನಗಳಲ್ಲಿ ನಮ್ಮನ್ನು ‌ಕಾಪಾಡಲಿದೆ ಎಂದು ಅಭಿಪ್ರಾಯಪಟ್ಟರು.

ಮ್ಯಾನೆಜ್‌ಮೆಂಟ್‌ ವಿದ್ಯಾರ್ಥಿಗಳು ದೇಶ ಹಾಗೂ ರಾಜ್ಯದಲ್ಲಿನ ಆರ್ಥಿಕ ವ್ಯವಸ್ಥೆ ಖರ್ಚು ಆದಾಯ ಬಜೆಟ್ ಎಲ್ಲದರ ಕುರಿತ ಜ್ಞಾನ ಹೊಂದಿರಬೇಕು. ಸಮಾಜದ ಅಭ್ಯುದಯಕ್ಕೆ ಬೇಕಾದ ಅವಶ್ಯಕ ಯೋಜನೆಗಳ ಕುರಿತು ಸಮೀಕ್ಷೆ ಮಾಡಿ. ಬದುಕು ಪ್ರತಿಯೊಬ್ಬರಿಗೂ ವಿಭಿನ್ನವಾಗಿದ್ದು, ಬದುಕಿನ ದಾರಿಯಲ್ಲಿ ಎದುರಾಗುವ ಸವಾಲುಗಳ ಎದುರಿಸಲು ಇಂದಿನಿಂದಲೇ ಸನ್ನದ್ದರಾಗಬೇಕು ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣರಾವ್, ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ನಿರ್ದೇಶಕ ಹೆಚ್.ಸಿ.ಶಿವಕುಮಾರ್, ಪ್ರಾಚಾರ್ಯ ಡಾ.ವೈ.ವಿಜಯಕುಮಾರ್, ಶೈಕ್ಷಣಿಕ ಡೀನ್ ಡಾ.ಪಿ.ಮಂಜುನಾಥ, ಎಂಬಿಎ ವಿಭಾಗದ ಮುಖ್ಯಸ್ಥ ಡಾ.ಶ್ರೀಕಾಂತ್, ಸಹ ಪ್ರಾಧ್ಯಾಪಕ ಡಾ.ಶ್ರೀನಿವಾಸಮೂರ್ತಿ, ವರ್ಷಾ ಮತ್ತು ತಂಡ, ಮತ್ತಿತರರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!