ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವುದು ಅವಶ್ಯಕ
ಶಿವಮೊಗ್ಗ | 4 ಮಾರ್ಚ್ 2024 | ಡಿಜಿ ಮಲೆನಾಡು.ಕಾಂ
ಮಗು ಮೊದಲು ತನ್ನಲ್ಲಿ ತಾನು ಆತ್ಮವಿಶ್ವಾಸ ಮೂಡಿಸಿಕೊಳ್ಳುವುದು ಅತ್ಯವಶ್ಯಕ. ತನ್ನ ಕಲಿಕೆ ತನ್ನ ಏಳಿಗೆ ಎಂಬ ಅರಿವು ಮೂಡಿದರೆ ಕಲಿಕೆಯ ಶ್ರಮ ಸಾರ್ಥಕವಾಗುತ್ತದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಶ್ರೀ ಆದಿಚುಂಚನಗಿರಿ ಶಾಖಾ ಮಠದ ವತಿಯಿಂದ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಶಾರದಾ ಪೂಜೆ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದರು.
Click on below this picture, Like & Follow Facebook Page ” Digi Malenadu “
ಮೊಬೈಲ್ ಬಳಕೆ ಅತಿಯಾದರೆ ನಮ್ಮ ಜೀವನವನ್ನೇ ಹಾಳು ಮಾಡುತ್ತದೆ. ಅದನ್ನು ಹಿತಮಿತವಾಗಿ ಬಳಸಿದರೆ ಸಹಾಯ ಆಗುತ್ತದೆ. ಪರೀಕ್ಷೆ ಮುಗಿಯುವ ತನಕ ಮೊಬೈಲ್ ಮುಟ್ಟದೇ ಪುಸ್ತಕದ ಅಧ್ಯಯನ ಮಾಡಬೇಕು ಎಂದು ತಿಳಿಸಿದರು.
ಓದಲು ಕೂರುವ ಸ್ಥಳದಲ್ಲಿ ವೇಳಾ ಪಟ್ಟಿ, ದಿನಚರಿ ಪಟ್ಟಿಯನ್ನು ಸದಾ ಕಣ್ಣಿಗೆ ಕಾಣುವಂತೆ ಇರಿಸಿಕೊಳ್ಳಬೇಕು. ಓದುವಾಗ ಏಕಾಗ್ರತೆ ಹೆಚ್ಚಲು ಸಕಾರತ್ಮಾಕ ಅಂಶಗಳನ್ನು ಹೇಳಿಕೊಂಡು ಓದಲು ಕೂರಬೇಕು ಎಂದರು.
ಡಿಜಿಮಲೆನಾಡು.ಕಾಂ | ಇ-ಮೇಲ್ :[email protected]
ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನಿರ್ದೇಶಕ ಸತೀಶ್ ಡಿ.ವಿ., ಭದ್ರಾವತಿ ಶಾಖೆ ಆಡಳಿತಾಧಿಕಾರಿ ಜಗದೀಶ್ ಬಿ., ಆದಿಚುಂಚನಗಿರಿ ಸಂಯುಕ್ತ ಆಂಗ್ಲ ಮಾಧ್ಯಮ ಶಾಲೆ ಮತ್ತು ಬಿಜಿಎಸ್ ವಸತಿಯುತ ಆಂಗ್ಲ ಮಾಧ್ಯಮ ಶಾಲೆಯ ಪ್ರಾಚಾರ್ಯೆ ಹೇಮಾ, ಗುರುಪುರ ಬಿಜಿಎಸ್ ಆಂಗ್ಲ ಮಾಧ್ಯಮ ಶಾಲೆ ಮತ್ತು ಕಾಲೇಜಿನ ಪ್ರಾಚಾರ್ಯ ಸುರೇಶ್ ಎಸ್. ಹೆಚ್., ಆದಿಚುಂಚನಗಿರಿ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ರಮೇಶ್, ಆದಿಚುಂಚನಗಿರಿ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ವೀಣಾ, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/