ಮಕ್ಕಳಿಗೆ ಪೊಲಿಯೋ ಲಸಿಕೆ ಹಾಕಿಸಲು ಸೂಚನೆ

ಮಕ್ಕಳಿಗೆ ಪೊಲಿಯೋ ಲಸಿಕೆ ಹಾಕಿಸಲು ಸೂಚನೆ

ಶಿವಮೊಗ್ಗ | 4 ಮಾರ್ಚ್‌ 2024 | ಡಿಜಿ ಮಲೆನಾಡು.ಕಾಂ

ಪೊಲಿಯೋ ಮುಕ್ತ ಭಾರತ ಆಗಿದ್ದರೂ ಇತರೆ ದೇಶಗಳಲ್ಲಿ ಇನ್ನೂ ಪೊಲಿಯೋ ಸಮಸ್ಯೆ ಇರುವುದರಿಂದ ಪೊಲಿಯೋ ಲಸಿಕೆ ಹಾಕಿಸುವ ಕಾರ್ಯಕ್ರಮ ದೇಶದಲ್ಲಿ ನಡೆಯುತ್ತಿದೆ ಎಂದು ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯ ಪಲ್ಸ್ ಪೊಲಿಯೋ ಅಧಿಕಾರಿ ಡಾ. ಅವಿನಾಶ್ ಅನಿಸಿಕೆ ವ್ಯಕ್ತಪಡಿಸಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ರಾಜೇಂದ್ರ ನಗರದ ರೋಟರಿ ಪೂರ್ವ ಶಾಲೆಯ ಸಭಾಂಗಣದಲ್ಲಿ ಮಾರ್ಚ್ 3 ರಿಂದ 6ವರೆಗೆ ನಡೆಯುವ ಪೊಲಿಯೋ ಲಸಿಕೆ ಹನಿ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ರೋಟರಿ ಸಂಸ್ಥೆಗಳು ಉತ್ತಮ ಕೆಲಸ ಮಾಡುತ್ತಿವೆ ಎಂದು ತಿಳಿಸಿದರು.

Click on below this picture, Like & Follow Facebook Page ” Digi Malenadu “

ಐಎಂಎ ಮಾಜಿ ಅಧ್ಯಕ್ಷ ಡಾ. ಪರಮೇಶ್ವರ ಶಿಗ್ಗಾವ್ ಹಾಗೂ ಡಾ.ಅರುಣ್ ಮಾತನಾಡಿ, ಪೊಲಿಯೋ ಲಸಿಕೆ ಬಗ್ಗೆ ಆತಂಕ ಬೇಡ, ಕಡ್ಡಾಯವಾಗಿ ವೈದ್ಯರ ಮಾರ್ಗದರ್ಶನಲ್ಲಿ ಮಕ್ಕಳಿಗೆ ಲಸಿಕೆ ಹಾಕಿಸಬೇಕು. ಈ ಬಾರಿ ತಪ್ಪದೇ ಲಸಿಕೆ ಹಾಕಿಸಬೇಕು. ನಗರದ ಎಲ್ಲ ಭಾಗಗಳಲ್ಲಿ ಲಸಿಕೆ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಮಾತನಾಡಿ, ಶಿವಮೊಗ್ಗದಲ್ಲಿ ನಡೆಯುವ ಪಲ್ಸ್ ಪೊಲಿಯೋ ಅಭಿಯಾನದ ಎಲ್ಲ ಬೂತ್‌ಗಳಲ್ಲಿ ರೋಟರಿ ಕ್ಲಬ್ ಸದಸ್ಯರು ಸಹಕಾರ ನೀಡುತ್ತಿದ್ದಾರೆ. ಅಭಿಯಾನ ಯಶಸ್ವಿಗೊಳಿಸಲು ಸಂಪೂರ್ಣ ಪ್ರಯತ್ನ ನಡೆಸಲಾಗುತ್ತಿದೆ ಎಂದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ :[email protected]

ರೋಟರಿ ಮಾಜಿ ಸಹಾಯಕ ಗವರ್ನರ ಜಿ.ವಿಜಯಕುಮಾರ್, ಗಣೇಶ್, ಜೆಸಿಐ ಸಹ್ಯಾದ್ರಿ ಅಧ್ಯಕ್ಷೆ ಡಾ. ಲಲಿತಾ ಭರತ್, ಕಾರ್ಯದರ್ಶಿ ಗಣೇಶ್, ಮಂಜುನಾಥ್ ಕದಂ, ಹಾಗೂ ರೋಟರಿ ಶಿವಮೊಗ್ಗ ಪೂರ್ವ ಸದಸ್ಯರು ಹಾಜರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!