ಸುಧಾರಿತ ಜೈವಿಕ ಇಂಧನದಿಂದ ಶೂನ್ಯ ಇಂಗಾಲ ವಾತಾವರಣ ಸಾಧ್ಯ
ಶಿವಮೊಗ್ಗ | 5 ಮಾರ್ಚ್ 2024 | ಡಿಜಿ ಮಲೆನಾಡು.ಕಾಂ
ಸುಧಾರಿತ ಜೈವಿಕ ಇಂಧನಗಳ ಬಳಕೆಯಿಂದ ಭಾರತದಲ್ಲಿ 2070ರ ವೇಳೆಗೆ ಶೂನ್ಯ ಇಂಗಾಲ ಹೊರಸೂಸುವಿಕೆಯ ವಾತಾವರಣ ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಎಂದು ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಬಯೋ ಡೀಸೆಲ್ ಕಾರ್ಯ ತಂಡದ ಸದಸ್ಯ ಡಾ. ವೈ.ಬಿ.ರಾಮಕೃಷ್ಣ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಶಿವಮೊಗ್ಗ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಜಿಲ್ಲಾ ಜೈವಿಕ ಇಂಧನ ಸಂಶೋಧನೆ ಮತ್ತು ಪ್ರಾತ್ಯಕ್ಷಿಕೆ ಕೇಂದ್ರ, ಕಾಲೇಜಿನ ರಸಾಯನ ವಿಜ್ಞಾನ ವಿಭಾಗ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಆಶ್ರಯದಲ್ಲಿ ಆಯೋಜಿಸಿದ್ದ ಸುಸ್ಥಿರ ಶಕ್ತಿ ಮತ್ತು ವಸ್ತು ವಿಜ್ಞಾನದಲ್ಲಿ ನಾವೀನ್ಯತೆ ಕುರಿತ ಎರಡು ದಿನಗಳ ಅಂತರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
Click on below this picture, Like & Follow Facebook Page ” Digi Malenadu “
ಸುಧಾರಿತ ಜೈವಿಕ ಇಂಧನಗಳಿಗಾಗಿ ಭಾರತದಲ್ಲಿ ಸುಸ್ಥಿರ ಶಕ್ತಿ ಮತ್ತು ಉದಯೋನ್ಮುಖ ಪರಿಸರ ನೀತಿಯುಳ್ಳ ವ್ಯವಸ್ಥೆ ಅತ್ಯವಶ್ಯಕವಾಗಿದೆ. ನಾವೀನ್ಯತೆಯ ಸಹಯೋಗದಲ್ಲಿ ಸುಧಾರಿತ ಜೈವಿಕ ಇಂಧನ ಕುರಿತು ಸಂಶೋಧನಾರ್ಥಿಗಳು ಹೆಚ್ಚು ಕೇಂದ್ರಿಕರಿಸಬೇಕಿದೆ ಎಂದು ತಿಳಿಸಿದರು.
ಭಾರತವು ಪ್ರತಿ ವರ್ಷ ಶತಕೋಟಿ ಟನ್‌ಗಳಷ್ಟು ಕೃಷಿ ಅವಶೇಷಗಳನ್ನು ಉತ್ಪಾದಿಸುತ್ತಿದ್ದು, ಅದರಿಂದ ಎಥೆನಾಲ್, ಜೈವಿಕ ಡೀಸೆಲ್ ಮತ್ತು ಜೈವಿಕ ಅನಿಲವನ್ನು ಉತ್ಪಾದಿಸುವ ಮೂಲಕ ತ್ಯಾಜ್ಯವನ್ನು ಸಂಪತ್ತಾಗಿ ಪರಿವರ್ತಿಸುವ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಿದೆ. ಪೆಟ್ರೋಲಿಯಂ ಸಚಿವಾಲಯವು ಸುಸ್ಥಿರ ಇಂಧನಗಳನ್ನು ಉತ್ಪಾದಿಸಲು 12 ಮೆಗಾ ವಾಣಿಜ್ಯ ಸ್ಥಾವರಗಳನ್ನು ಸ್ಥಾಪಿಸಿದ್ದು, ಮುಂದಿನ ದಿನಗಳಲ್ಲಿ ಜೈವಿಕ ಅನಿಲವನ್ನು ಉತ್ಪಾದಿಸಲು ಭಾರತದಾದ್ಯಂತ 5000 ವಾಣಿಜ್ಯ ಸ್ಥಾವರಗಳನ್ನು ಸ್ಥಾಪಿಸಲು ಯೋಜಿಸಿದೆ ಎಂದರು.
ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಹಿರಿಯ ಅಭಿಯಂತರ ಅನಿಲ್.ಆರ್.ನಾಯಕ್ ಮಾತನಾಡಿ, ಸುಸ್ಥಿರ ಶಕ್ತಿ ಮತ್ತು ವಸ್ತು ವಿಜ್ಞಾನದಲ್ಲಿ ನವೀನ ತಂತ್ರಜ್ಞಾನಗಳ ಕುರಿತು ಹೆಚ್ಚೆಚ್ಚು ಯೋಜನೆಯ ಪ್ರಸ್ತಾವನೆಗಳನ್ನು ಮಂಡಳಿಗೆ ಸಲ್ಲಿಸಲು ಯುವ ಸಂಶೋಧಕರು ಮತ್ತು ವಿದ್ಯಾರ್ಥಿಗಳಿಗೆ ತಿಳಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ :[email protected]
ಜೆ.ಎನ್.ಎನ್.ಸಿ ಕಾಲೇಜಿನ ಪ್ರಾಚಾರ್ಯ ಡಾ. ವೈ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಹಿರಿಯ ಮಾರುಕಟ್ಟೆ ವ್ಯವಸ್ಥಾಪಕ ಡಾ.ದಯಾನಂದ ಜಿ.ಎನ್, ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಕಾಲೇಜಿನ ಶೈಕ್ಷಣಿಕ ಡೀನ್ ಡಾ.ಪಿ.ಮಂಜುನಾಥ, ರಸಾಯನ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ಎಂ.ಹೆಚ್.ಮೊಯಿನುದ್ದಿನ್ ಖಾನ್, ಸಹ ಪ್ರಾಧ್ಯಾಪಕ ಡಾ.ಚೇತನ್.ಎಸ್.ಜಿ, ಡಾ.ಸಚಿನ್, ಸಹ ಪ್ರಾಧ್ಯಾಪಕಿ ಬಿಂದು ಪವನ್ ಮತ್ತು ಲುಬನಾ ಅಫರೋಜ್ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/