ಸಂಗಮೇಶ್ವರ್‌ಗೆ ಶಿವಮೊಗ್ಗ ಜಿಲ್ಲಾ ಗಾಣಿಗ ಸಂಘದಿಂದ ಸನ್ಮಾನ
ಶಿವಮೊಗ್ಗ | 6 ಮಾರ್ಚ್ 2024 | ಡಿಜಿ ಮಲೆನಾಡು.ಕಾಂ
ಕರ್ನಾಟಕ ರಾಜ್ಯ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ಅಭಿನಂದನೆ ಸ್ವೀಕರಿಸಿ ಮಾತನಾಡಿ, ನನ್ನನ್ನು ಗೆಲ್ಲಿಸಿದ ಕ್ಷೇತ್ರದ ಜನರ ಆಶೀರ್ವಾದದಿಂದ ಉನ್ನತ ಸ್ಥಾನ ಲಭಿಸಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸೇವೆ ಸಲ್ಲಿಸುವೆ. ಕ್ಷೇತ್ರಗಳು ಅಭಿವೃದ್ಧಿ ಹೊಂದಲು ಸಾರ್ವಜನಿಕರ ಸಹಕಾರ ಅತ್ಯಮೂಲ್ಯ ಎಂದು ಅನಿಸಿಕೆ ವ್ಯಕ್ತಪಡಿಸಿದರು.

Click on below this picture, Like & Follow Facebook Page ” Digi Malenadu “
ಸೂಡಾ ಮಾಜಿ ಅಧ್ಯಕ್ಷ ಎಸ್ ಎಸ್ ಜ್ಯೋತಿ ಪ್ರಕಾಶ್ ಮಾತನಾಡಿ, ಬಿ ಕೆ ಸಂಗಮೇಶ್ವರ ಅವರಿಗೆ ಮಂತ್ರಿ ಸ್ಥಾನ ಸಿಗಬೇಕಾಗಿತ್ತು. ಬರುವ ದಿನಗಳಲ್ಲಿ ಬೇಗನೆ ಮಂತ್ರಿಯಾಗಿ ಹೆಚ್ಚಿನ ಸೇವೆ ಸಲ್ಲಿಸಲು ಅವಕಾಶ ಸಿಗಲಿ ಎಂದು ಆಶಿಸಿದರು.
ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜಿ ವಿಜಯಕುಮಾರ್ ಮಾತನಾಡಿ, ಸಂಗಮೇಶ್ವರ ಅವರು ಜನರೊಂದಿಗೆ ಪ್ರೀತಿ, ವಿಶ್ವಾಸದಿಂದ ಇದ್ದು, ಪ್ರಸ್ತುತ ಉನ್ನತ ಸ್ಥಾನ ಲಭಿಸಿದೆ ಎಂದರು.
ಡಿಜಿಮಲೆನಾಡು.ಕಾಂ | ಇ-ಮೇಲ್ :digimalenadu@gmail.com
ಸಮಾಜ ಸೇವಕ ಬಿ.ಕೆ.ಜಗನ್ನಾಥ್, ಬಿ.ಕೆ.ಗಣೇಶ್, ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಕಿರಣ್ ಕುಮಾರ್, ಪದಾಧಿಕಾರಿಗಳಾದ ರವಿಕುಮಾರ್, ಮಲ್ಲಿಕಾರ್ಜುನ ಕಾನೂರ್, ಎಂ ವಿ ಸಜ್ಜನ್ ಶೆಟ್ಟರ್, ಪ್ರೊ. ನೀಲಗುಂದ್, ಚಂದ್ರಶೇಖರ, ರುದ್ರಪ್ಪ, ಭದ್ರಾವತಿ ತಾಲ್ಲೂಕು ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆನಂದಕುಮಾರ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/

