ವಿಪ್ರ ಸ್ನೇಹ ಬಳಗದಿಂದ ಬಿಎಸ್‌ವೈಗೆ ಅಭಿನಂದನಾ ಸಮಾರಂಭ ಮಾರ್ಚ್ 9ಕ್ಕೆ

ವಿಪ್ರ ಸ್ನೇಹ ಬಳಗದಿಂದ ಬಿಎಸ್‌ವೈಗೆ ಅಭಿನಂದನಾ ಸಮಾರಂಭ ಮಾರ್ಚ್ 9ಕ್ಕೆ

ಶಿವಮೊಗ್ಗ | 7 ಮಾರ್ಚ್‌ 2024 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ನಗರದ ಶ್ರೀ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಮಾರ್ಚ್‌ 9ರಂದು ಸಂಜೆ 6.30ಕ್ಕೆ ವಿಪ್ರ ಸ್ನೇಹ ಬಳಗದ ವತಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಹಾಗೂ ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸ್ನೇಹ ಬಳಗದ ನಟರಾಜ್‌ ಭಾಗವತ್‌ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ನಗರದ 40ಕ್ಕೂ ಹೆಚ್ಚು ಬ್ರಾಹ್ಮಣ ಸಂಘ ಸಂಸ್ಥೆಗಳ ಒಕ್ಕೂಟದ “ವಿಪ್ರ ಸ್ನೇಹ ಬಳಗ” ವತಿಯಿಂದ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಿಲ್ಲೆಯ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ ಇಬ್ಬರಿಗೂ ವಿಶೇಷ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Click on below this picture, Like & Follow Facebook Page ” Digi Malenadu “

ವಿಪ್ರ ಸ್ನೇಹ ಬಳಗದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ್‌ ಹಾರನಹಳ್ಳಿ, ಶಿವಮೊಗ್ಗ ನಗರ ಶಾಸಕ ಎಸ್.ಎನ್‌.ಚನ್ನಬಸಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಶಿಕ್ಷಣ ತಜ್ಞ ಎ.ಜೆ.ರಾಮಚಂದ್ರ ಅಧ್ಯಕ್ಷತೆ ವಹಿಸುವರು ಎಂದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ :digimalenadu@gmail.com

ವಿಪ್ರ ಸ್ನೇಹ ಬಳಗದ ಎ.ಜೆ.ರಾಮಚಂದ್ರ, ಎಂ.ಶಂಕರ್‌, ವೆಂಕಟೇಶರಾವ್‌, ಬಿ.ಆರ್.ಮಧುಸೂದನ್‌, ಸುಬ್ರಹ್ಮಣ್ಯ ಭಟ್‌, ಶ್ರೀನಾಥ್‌ ನಗರಗದ್ದೆ, ಎಸ್‌.ಜಿ.ಆನಂದ್‌, ನಾಗೇಶ್‌, ಸುರೇಖಾ ಮುರಳೀಧರ್‌, ಚಂದ್ರಶೇಖರ್‌ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!