ಅರ್ಹ ಮತದಾರರು ತಪ್ಪದೇ ಮತ ಚಲಾಯಿಸಿ, ಮತದಾನ ಪ್ರತಿಯೊಬ್ಬ ಮತದಾರರ ಹಕ್ಕು
ಶಿವಮೊಗ್ಗ | 25 ಏಪ್ರಿಲ್ 2024 | ಡಿಜಿ ಮಲೆನಾಡು.ಕಾಂ
ಮತದಾನ ಮಾಡುವುದು ನಮ್ಮೆಲ್ಲರ ಕರ್ತವ್ಯ. ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡಬೇಕು ಎಂದು ಜೆಸಿ ಶಿವಮೊಗ್ಗ ಭಾವನಾ ಅಧ್ಯಕ್ಷೆ ಅನಿಶಾ ಅನಂತ ಕಾತರಿಕಿ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ನಗರದ ಶಿವಮೊಗ್ಗ ಮಹಿಳಾ ಪಾಲಿಟೆಕ್ನಿಕ್ನಲ್ಲಿ ಜೆಸಿಐ ಶಿವಮೊಗ್ಗ ಭಾವನಾ ವತಿಯಿಂದ ಆಯೋಜಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಸದೃಢ ದೇಶ ನಿರ್ಮಾಣ ಮಾಡಲು ಪ್ರತಿಯೊಬ್ಬ ಭಾರತೀಯರು ಮತದಾನ ಮಾಡಬೇಕು. ಉತ್ತಮ ನಾಯಕರನ್ನು ಆಯ್ಕೆ ಮಾಡುವ ಮೂಲಕ ಶಕ್ತಿಯುತ ಭಾರತ ನಿರ್ಮಾಣ ಮಾಡಬೇಕು ಎಂದು ತಿಳಿಸಿದರು.
ಸ್ವೀಪ್ ವಿಭಾಗದ ಸಂಪನ್ಮೂಲ ವ್ಯಕ್ತಿ ನವೀದ್ ಮಾತನಾಡಿ, ಮತದಾನ ಮಾಡುವುದು ನಮ್ಮೆಲ್ಲರ ಹಕ್ಕು. ಮತದಾನವನ್ನು ಹಬ್ಬವನ್ನಾಗಿ ಆಚರಿಸೋಣ. ಎಲ್ಲ ವಿದ್ಯಾರ್ಥಿಗಳು ಮತದಾನದ ಅರ್ಹರು ತಾವು ಮತದಾನ ಮಾಡುವ ಜತೆಯಲ್ಲಿ ಪಾಲಕರಿಂದ ಕಡ್ಡಾಯವಾಗಿ ಮತದಾನ ಮಾಡಿಸಬೇಕು ಎಂದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಸ್ವೀಪ್ ಸಮಿತಿ ವತಿಯಿಂದ ನಿರಂತರ ಜಾಗೃತಿ ಮೂಡಿಸಲಾಗುತ್ತಿದೆ. ಶೇ. 100 ಮತದಾನ ಪ್ರಮಾಣ ಆಗುವಂತೆ ಎಲ್ಲರೂ ಪ್ರಯತ್ನ ನಡೆಸಬೇಕು ಎಂದು ಹೇಳಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ :[email protected]
ಮೊದಲ ಬಾರಿ ಮತದಾನ ಮಾಡುವ ವಿದ್ಯಾರ್ಥಿಗಳಿಗೆ ಜಿಲ್ಲಾ ಪಂಚಾಯಿತಿ ಸ್ವೀಪ್ ವಿಭಾಗದ ವತಿಯಿಂದ ಮತದಾನದ ಮಹತ್ವದ ಬಗ್ಗೆ ವಿವರಿಸಲಾಯಿತು. ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ 200ಕ್ಕೂ ಅಧಿಕ ವಿದ್ಯಾರ್ಥಿಗಳು ಹಾಗೂ ಕಾಲೇಜು ಪ್ರಾಚಾರ್ಯರು, ಸಿಬ್ಬಂದಿ ವರ್ಗ ಭಾಗವಹಿಸಿದ್ದರು. ಜೆಸಿಐ ಶಿವಮೊಗ್ಗ ಭಾವನಾ ಐಪಿಪಿ ಪೂರ್ಣಿಮಾ ಸುನಿಲ್, ಜೆಸಿಐ ಶಿವಮೊಗ್ಗ ಭಾವನಾ ಕಾರ್ಯದರ್ಶಿ ವಂದನಾ ದಿನೇಶ್, ನಿರ್ದೇಶಕರಾದ ಕನ್ನಿಕಾ, ಯಶೋಧ ಪಾಲ್ಗೊಂಡಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/