ಕೌಶಲ್ಯ ತರಬೇತಿ ನೀಡಲು ಸ್ಕಿಲ್ ಅಕಾಡೆಮಿ, ಮಾನಸ ಟ್ರಸ್ಟ್ ಒಡಂಬಡಿಕೆ

ಕೌಶಲ್ಯ ತರಬೇತಿ ನೀಡಲು ಸ್ಕಿಲ್ ಅಕಾಡೆಮಿ, ಮಾನಸ ಟ್ರಸ್ಟ್ ಒಡಂಬಡಿಕೆ

ಶಿವಮೊಗ್ಗ | 8 ಮೇ 2024 | ಡಿಜಿ ಮಲೆನಾಡು.ಕಾಂ

ಕೌಶಲ್ಯ ತರಬೇತಿ ನೀಡುವ ಆಶಯದಿಂದ ಅಡ್ವಾನ್ಸ್ಡ್‌ ಸ್ಕಿಲ್ ಅಕಾಡೆಮಿ ಹಾಗೂ ಮಾನಸ ಟ್ರಸ್ಟ್ ಒಡಂಬಡಿಕೆ ಮಾಡಿಕೊಂಡಿದೆ. ಮಾನಸ ಸಮೂಹ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ಮತ್ತು ಆಸ್ಪತ್ರೆ ಸಿಬ್ಬಂದಿಗೆ ಕೌಶಲ್ಯ ವೃದ್ಧಿಗೆ ಅಗತ್ಯ ತರಬೇತಿ ನೀಡುವುದು ಒಡಂಬಡಿಕೆಯ ಪ್ರಮುಖ ಆಶಯವಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಮಾನಸ ಟ್ರಸ್ಟ್ ವತಿಯಿಂದ ಮ್ಯಾನೇಜಿಂಗ್ ಟ್ರಸ್ಟಿ ಡಾ. ರಜನಿ ಪೈ, ಪ್ರೀತಿ ವಿ ಶಾನಭಾಗ್ ಹಾಗೂ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಅಧ್ಯಕ್ಷ ಎನ್.ಗೋಪಿನಾಥ್, ಕಾರ್ಯದರ್ಶಿ ವಸಂತ ಹೋಬಳಿದಾರ್ ಒಡಂಬಡಿಕೆ ಸಹಿ ಹಾಕಿದರು.

Click on below this picture, Like & Follow Facebook Page ” Digi Malenadu “

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ಸ್ಕಿಲ್ ಅಕಾಡೆಮಿ ವತಿಯಿಂದ ಮಾನಸ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಿಗೆ ಅಗತ್ಯ ಕೌಶಲ್ಯಗಳನ್ನು ತರಬೇತಿ ನೀಡುವುದು ಹಾಗೂ ಆಸ್ಪತ್ರೆ ಸಿಬ್ಬಂದಿಗೆ ವೃತ್ತಿ ಕೌಶಲ್ಯ ಹೆಚ್ಚಿಸಿಕೊಳ್ಳಲು ಮಾರ್ಗದರ್ಶನ ನೀಡುವುದು ಪ್ರಮುಖ ಉದ್ದೇಶವಾಗಿದೆ. ಇದರಿಂದ ಉತ್ತಮ ಪರಿಣಾಮಗಳನ್ನು ವೃತ್ತಿಯಲ್ಲಿ ಕಾಣಬಹುದಾಗಿದೆ ಎಂದು ಹೇಳಿದರು.

ಸ್ಕಿಲ್ ಅಕಾಡೆಮಿಯು ಈಗಾಗಲೇ ವಿವಿಧ ಶಿಕ್ಷಣ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಯುಗಕ್ಕೆ ಪೂರಕವಾಗಿ ವೃತ್ತಿಗೆ ಅವಶ್ಯವಿರುವ ಕೌಶಲ್ಯಗಳನ್ನು ಕಲಿಸುತ್ತಿದೆ. ಇದರೊಂದಿಗೆ ಉದ್ಯೋಗ ನೀಡುವ ಸಂಸ್ಥೆಗಳೊಂದಿಗೆ ಸ್ಕಿಲ್ ಅಕಾಡೆಮಿ ಕಾರ್ಯ ನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಶಿಕ್ಷಣ ಪೂರೈಕೆ ನಂತರ ಉದ್ಯೋಗ ಅವಕಾಶ ಕಲ್ಪಿಸಿಕೊಡಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಮಾನಸ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಡಾ. ರಜನಿ ಪೈ ಅವರು ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಒಡಂಬಡಿಕೆಯು ಅನುಕೂಲವಾಗಲಿದೆ ಎಂದು ಅನಿಸಿಕೆ ವ್ಯಕ್ತಪಡಿಸಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ :[email protected]

ಒಡಂಬಡಿಕೆ ವೇಳೆಯಲ್ಲಿ ಸ್ಕಿಲ್ ಅಕಾಡೆಮಿ ಸಿಇಒ ಸವಿತಾ ಮಾಧವ್, ಕಟೀಲ್ ಅಶೋಕ್ ಪೈ ಮೆಮೋರಿಯಲ್ ಕಾಲೇಜ್ ಡಾ. ಸಂಧ್ಯಾ ಕಾವೇರಿ, ಮಾನಸ ಗ್ರೂಪ್ ಆಡಳಿತಾಧಿಕಾರಿ ಪ್ರೊ. ಆರ್.ಕೆ.ಬಾಳಿಗ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!