ಮತದಾನ ಪ್ರಮಾಣ ಹೆಚ್ಚಿಸುವಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಸಮನ್ವಯ ಟ್ರಸ್ಟ್ ಕೃತಜ್ಞತೆ

ಮತದಾನ ಪ್ರಮಾಣ ಹೆಚ್ಚಿಸುವಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಸಮನ್ವಯ ಟ್ರಸ್ಟ್ ಕೃತಜ್ಞತೆ

ಶಿವಮೊಗ್ಗ | 9 ಮೇ 2024 | ಡಿಜಿ ಮಲೆನಾಡು.ಕಾಂ

ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಶೇ. 78.31 ಮತದಾನ ಆಗುವ ಮೂಲಕ ಹೆಚ್ಚಿನ ಮತದಾನ ಆಗಿದ್ದು, ಮತದಾನ ಪ್ರಮಾಣ ಹೆಚ್ಚಿಸುವಲ್ಲಿ ಕೆಲಸ ಮಾಡಿದ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸ್ವೀಪ್ ಸಮಿತಿ, ಸಂಘ ಸಂಸ್ಥೆಗಳು ಹಾಗೂ ಸಮನ್ವಯ ಸ್ವಯಂ ಸೇವಕರಿಗೆ ಸಮನ್ವಯ ಟ್ರಸ್ಟ್ ಕೃತಜ್ಞತೆ ಸಲ್ಲಿಸಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಸಮನ್ವಯ ಟ್ರಸ್ಟ್ ಸ್ವಯಂ ಸೇವಕರು ಐಎಎಸ್ ಅಧಿಕಾರಿ ಕೆ.ಎ.ದಯಾನಂದ ಮಾರ್ಗದರ್ಶನದಲ್ಲಿ 2013ರ ಚುನಾವಣೆಗಳಿಂದಲೂ ಮತದಾನ ಜಾಗೃತಿ ಮೂಡಿಸುವ ಕಾಯಕದಲ್ಲಿ ನಿರತರಾಗಿದ್ದಾರೆ. ಪ್ರತಿ ಬಾರಿ ಶಿವಮೊಗ್ಗ ಕ್ಷೇತ್ರದಲ್ಲಿ ಮತದಾನ ಪ್ರಮಾಣ ಹೆಚ್ಚಾಗುತ್ತಿದೆ.

Click on below this picture, Like & Follow Facebook Page ” Digi Malenadu “

ಸಮನ್ವಯ ಟ್ರಸ್ಟ್ ವತಿಯಿಂದ ಪ್ರತಿ ಚುನಾವಣೆ ಸಂದರ್ಭದಲ್ಲಿ ನನ್ನ ಮತ ಮಾರಾಟಕ್ಕಿಲ್ಲ ಅಭಿಯಾನ ಹಾಗೂ ಮತದಾನ ಜಾಗೃತಿ ಕಾರ್ಯಕ್ರಮವನ್ನು ಸ್ವಯಂಸೇವಕರ ಮೂಲಕ ನಡೆಸಲಾಗುತ್ತಿದೆ. ಸ್ವಯಂ ಸೇವಕರಿಗೆ ತರಬೇತಿ ನೀಡಿ ನಂತರ ಕ್ಷೇತ್ರವ್ಯಾಪ್ತಿಯಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ.

ಸಮನ್ವಯ ಟ್ರಸ್ಟ್ ನ ವಿದ್ಯಾರ್ಥಿ ಸ್ವಯಂ ಸೇವಕರಿಗೆ ಶಿವಮೊಗ್ಗ ಜಿಲ್ಲೆಯ ಜನರಲ್ಲಿ ಮತದಾನ ಜಾಗೃತಿ ಮೂಡಿಸಲು ಅಗತ್ಯ ತರಬೇತಿ ನೀಡಲಾಗಿತ್ತು. ಸ್ವಯಂ ಸೇವಕ ವಿದ್ಯಾರ್ಥಿಗಳ ಮೂಲಕ ಶಿವಮೊಗ್ಗ ಜಿಲ್ಲೆಯ ಎಲ್ಲ ಕಡೆಗೂ ಜಾಗೃತಿ ಮೂಡಿಸಲಾಯಿತು ಎಂದು ಸಮನ್ವಯ ಟ್ರಸ್ಟ್ ನಿರ್ವಾಹಕ ನಿರ್ದೇಶಕ ಸಮನ್ವಯ ಕಾಶಿ ಅಭಿಪ್ರಾಯಪಟ್ಟರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ :[email protected]

ಪ್ರತಿ ಬಾರಿ ಸಮನ್ವಯ ಟ್ರಸ್ಟ್ ಚುನಾವಣಾ ದಿನಾಂಕ ಘೋಷಣೆ ದಿನದಿಂದ ಮತದಾನ ಆಗುವವರೆಗೂ ನಿರಂತರವಾಗಿ ಶಿವಮೊಗ್ಗ ಜಿಲ್ಲಾದ್ಯಂತ ಜಾಗೃತಿ ಮೂಡಿಸುವ ಕೆಲಸ ಮಾಡಿದೆ. ಮತದಾನ ಪ್ರಮಾಣ ಹೆಚ್ಚಾಗುವಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸ್ವೀಪ್ ಸಮಿತಿ ಹಾಗೂ ಸಮನ್ವಯದ ಎಲ್ಲ ಸ್ವಯಂ ಸೇವಕರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!