ಬರ ನಿರ್ವಹಣೆ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ
ಶಿವಮೊಗ್ಗ | 16 ಮೇ 2024 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ಜಿಲ್ಲೆಯಲ್ಲಿ ಬರ ನಿರ್ವಹಣೆ ಸಂಬಂಧಿಸಿ ಎಲ್ಲ ತಾಲೂಕಿನ ತಹಸೀಲ್ದಾರ್, ಇಒ ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಇಂಜಿನಿಯರ್‍ಗಳು ಸಮನ್ವಯ ಸಾಧಿಸಿ ಕಾರ್ಯ ನಿರ್ವಹಿಸಬೇಕು. ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚಿಸಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳೊಂದಿಗೆ ಬರ ನಿರ್ವಹಣೆ ಕುರಿತು ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರತಿ ತಾಲೂಕುಗಳ ಪ್ರಗತಿ ಪರಿಶೀಲಿಸಿ, ತಾಲೂಕುಗಳಲ್ಲಿ ಈಗಾಗಲೇ ಅನುಮೋದನೆ ಪಡೆದಿರುವ ಕುಡಿಯುವ ನೀರು ಸರಬರಾಜು ಟ್ಯಾಂಕರ್‍ಗಳಿಗೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸಬೇಕು. ಅಳವಡಿಸದೇ ಇರುವ ಟ್ಯಾಂಕರ್‍ಗಳಿಗೆ ಜಿಪಿಎಸ್ ಅಳವಡಿಸಬೇಕು. ಪ್ರತಿ 15 ದಿನಗಳಿಗೆ ಒಮ್ಮೆ ತಾಲೂಕುಗಳ ತಹಸೀಲ್ದಾರ್, ಇಒ ಮತ್ತು ಎಇಇ ಬಿಲ್‍ಗಳನ್ನು ದೃಢೀಕರಿಸಿ ಕಳುಹಿಸಿಕೊಡಬೇಕು ಎಂದು ತಿಳಿಸಿದರು.
ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಇಂಜಿನಿಯರ್‍ಗಳು ನೀರು ಸರಬರಾಜು ಸಮರ್ಪಕವಾಗಿ ಆಗುತ್ತಿದೆಯೇ ಎನ್ನುವುದನ್ನು ಪರಿಶೀಲಿಸಬೇಕು. ನೀರಿನ ಗುಣಮಟ್ಟವನ್ನು ಪರೀಕ್ಷಿಸಲು ವಾರಕ್ಕೊಮ್ಮೆ ನೀರಿನ ಪರೀಕ್ಷೆ ಮಾಡಿಸಬೇಕು ಎಂದು ಸೂಚಿಸಿದರು. ಈಗ ಟ್ಯಾಂಕರ್‍ಗಳಲ್ಲಿ ನೀರು ಸರಬರಾಜು ಮಾಡಲು ಅನುಮೋದನೆ ಪಡೆದ ಪ್ರದೇಶಗಳನ್ನು ಬಿಟ್ಟು ಬೇರೆ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದರೆ, ಹೆಚ್ಚುವರಿ ನೀರಿನ ಬೇಡಿಕೆ ಇದ್ದರೆ ಕೂಡಲೇ ಅವುಗಳನ್ನು ಗುರುತಿಸಿ, ಅನುಮೋದನೆ ಪಡೆದು ಕ್ರಮ ವಹಿಸಬೇಕು ಎಂದು ಹೇಳಿದರು.
ಪ್ರಸ್ತುತ ಸೊರಬ, ಸಾಗರ, ತೀರ್ಥಹಳ್ಳಿ ಮತ್ತು ಕೆಲವೆಡೆ ಮಳೆ ಬಂದಿದೆ. ಸಮಸ್ಯೆ ಸ್ವಲ್ಪ ಕಡಿಮೆ ಇರಬಹುದು. ಆದರೆ ಮುಂದಿನ ವಾರದಲ್ಲಿ ಮಳೆ ಬಾರದಿದ್ದರೆ ಸಮಸ್ಯೆ ಆಗಬಹುದು. ಆದ್ದರಿಂದ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಬಹುದಾದ ಪ್ರದೇಶಗಳನ್ನು ಗುರುತಿಸಿ ಈಗಲೇ ಕುಡಿಯುವ ನೀರು ಸರಬರಾಜಿಗೆ ಸಿದ್ಧತೆ ಮಾಡಿಟ್ಟುಕೊಳ್ಳಬೇಕು.
| ಗುರುದತ್ತ ಹೆಗಡೆ, ಶಿವಮೊಗ್ಗ ಜಿಲ್ಲಾಧಿಕಾರಿ
ಜಿಪಂ ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ ಮಾತನಾಡಿ, ಗ್ರಾಮಗಳಲ್ಲಿ ಕುಡಿಯುವ ನೀರಿನ ಅವಶ್ಯಕತೆ, ಬೇಡಿಕೆ ಇದ್ದಲ್ಲಿ ಗುರುತಿಸಿ ಅನೋದನೆ ಪಡೆದುಕೊಳ್ಳಬೇಕು. ಬಾಕಿ ಇರುವ ಬಿಲ್ ಕಳುಹಿಸಿಕೊಡಬೇಕು. ಎಲ್ಲ ಗ್ರಾಪಂಗಳಲ್ಲಿ ಸಾಕಷ್ಟು ಅನುದಾನ ಇರುವುದಿಲ್ಲ. ಆದ್ದರಿಂದ ಎನ್‍ಡಿಆರ್‍ಎಫ್ ಅಡಿಯಲ್ಲಿ ಬಿಲ್ ಭರಿಸಲು ಕ್ರಮ ವಹಿಸಬೇಕು ಎಂದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಕಾರ್ಯಪಾಲಕ ಅಭಿಯಂತರ ರಾಜೇಂದ್ರ, ತಹಸೀಲ್ದಾರರು, ಇಒಗಳು, ಎಇಇ, ಇತರೆ ಅಧಿಕಾರಿಗಳು ಹಾಜರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/