ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್‌ನಲ್ಲಿ ಗೆಲುವು ಸಾಧಿಸಿದ ಶಿವಮೊಗ್ಗದ ಸ್ನೇಹಾ
ಶಿವಮೊಗ್ಗ | 16 ಮೇ 2024 | ಡಿಜಿ ಮಲೆನಾಡು.ಕಾಂ
ಗುರುಪುರದ ಬಿಜಿಎಸ್ ಗುರುಕುಲ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಎಸ್.ಸ್ನೇಹ ಮಂಗಳೂರಿನಲ್ಲಿ ಏರ್ಪಡಿಸಿರುವ ಮಂಗಳಾ ಕಪ್ ರಾಷ್ಟ್ರೀಯ ಮುಕ್ತ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಗೆಲುವು ಸಾಧಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಮಂಗಳೂರಿನ ಯು. ಎಸ್. ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಟೂರ್ನಿಯಲ್ಲಿ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಬೆಂಗಳೂರಿನ ಸೆಲೆನೈಟ್ ಸ್ಪೋರ್ಟ್ಸ್ ಅಕಾಡೆಮಿಯ ಎಸ್.ಸ್ನೇಹ ಅವರು ಫೈನಲ್‌ನಲ್ಲಿ ಕನಕ ಕಲಕೋಟಿ ವಿರುದ್ಧ ಗೆಲುವಿನ ನಗೆ ಬೀರಿದರು. 15 ಸಾವಿರ ರೂ. ಮತ್ತು ಟ್ರೋಫಿಯನ್ನು ತಮ್ಮದಾಗಿಸಿಕೊಂಡರು. ಶಿವಮೊಗ್ಗದ ಪುರಲೆಯ ವೆಂಕಟೇಶ ನಗರ ನಿವಾಸಿ ಸುರೇಶ್ ಮತ್ತು ಶಕುಂತಲಾ ದಂಪತಿ ಪುತ್ರಿ.
ಸ್ನೇಹಾ ಪ್ರಸ್ತುತ ಬೆಂಗಳೂರಿನ ಸೆಲೆನೈಟ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ವಿನೋದ್ ಕುಮಾರ್ ಅವರ ಬಳಿ ತರಬೇತಿ ಪಡೆಯುತ್ತಿದ್ದಾರೆ. ಕ್ರೀಡೆಯ ಜತೆಗೆ ಓದಿನಲ್ಲೂ ಪ್ರತಿಭಾನ್ವಿತರು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ರಾಷ್ಟ್ರಮಟ್ಟ, ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಲೆಂದು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹಾಗೂ ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯ ಎಸ್. ಎಚ್. ಸುರೇಶ್, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಶುಭ ಹಾರೈಸಿದ್ದಾರೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/