ಡೆಂಘೆ ರಕ್ಷಣೆಗೆ ಸುರಕ್ಷಿತ ಕ್ರಮ ಪಾಲನೆ ಅಗತ್ಯ
ಶಿವಮೊಗ್ಗ | 18 ಮೇ 2024 | ಡಿಜಿ ಮಲೆನಾಡು.ಕಾಂ
ಬರ ನಿರ್ವಹಣೆ, ಡೆಂಘೆ ಮತ್ತು ಮಾನ್ಸೂನ್ ಬಗ್ಗೆ ನಿರ್ಲಕ್ಷ್ಯ ಮಾಡುವಂತಿಲ್ಲ. ಕುಡಿಯುವ ನೀರಿನ ಬಗ್ಗೆ ಪ್ರತಿ ಇಲಾಖೆಗಳು ಗಮನ ವಹಿಸಬೇಕು. ಅಂಗನವಾಡಿ, ಶಾಲೆ ಮತು ಹಾಸ್ಟೆಲ್‍ಗಳಲ್ಲಿ ನೀರಿನ ಟ್ಯಾಂಕ್‍ಗಳನ್ನು ಸ್ವಚ್ಚ ಮಾಡಿ ಬಳಸಬೇಕು ಎಂದು ತಹಸೀಲ್ದಾರ್ ಎಂ.ಎನ್.ಗೀರಿಶ್ ಸೂಚಿಸಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಬರ ಪರಿಹಾರ ಕೆಲಸದಲ್ಲಿ ರೈತರು ಕಚೇರಿಗೆ ಭೇಟಿ ನೀಡಿದಾಗ ಸಮಾಧಾನ ಮತ್ತು ಸಂಯಮಯಿಂದ ಕೆಲಸ ಮಾಡಿಕೊಡಬೇಕು. ಪ್ರತಿಯೊಂದು ಇಲಾಖೆ ಅಧಿಕಾರಿಗಳು ನಿರ್ವಹಿಸಿದ ಕೆಲಸವನ್ನು ನಿಷ್ಠೆ ಮತ್ತು ಜವಾಬ್ದಾರಿಯಿಂದ ಮಾಡಬೇಕು ಎಂದು ತಿಳಿಸಿದರು.
ಶಾಲೆ ಮತ್ತು ಅಂಗನವಾಡಿಗಳಲ್ಲಿ ಕಡ್ಡಾಯವಾಗಿ ಕುಡಿಯುವ ನೀರಿನ ಪರೀಕ್ಷೆ ಮಾಡಿಸಿ ಬಳಕೆ ಮಾಡಬೇಕು. ಶೌಚಗೃಹಗಳನ್ನು ಶುಚಿತ್ವದಿಂದ ಕಾಪಾಡಿಕೊಂಡು ಮಕ್ಕಳನ್ನು ಆರೋಗ್ಯವಂತರಾಗಿ ಇಡುವುದು ನಮ್ಮ ಕರ್ತವ್ಯವಾಗಿದೆ. ಎಲ್ಲರು ಡೆಂಘೆಯಿಂದ ರಕ್ಷಣೆಗೆ ಸುರಕ್ಷಿತ ಕ್ರಮವನ್ನು ತೆಗೆದುಕೂಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ಟಿಎಚ್‌ಒ ಜಿ.ಬಿ.ಚಂದ್ರಶೇಖರ್ ಮಾತನಾಡಿ, ಡೆಂಘೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಬಾರಿ 8 ಡೆಂಘೆ ಪ್ರಕರಣಗಳು ಇದ್ದು, ಈ ಬಾರಿ 55 ಕ್ಕೆ ಏರಿಕೆಯಾಗಿದೆ. ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗಳಿಗೆ ಹೋಗಿ ಚಿಕಿತ್ಸೆ ಪಡೆದುಕೊಳ್ಳುವಂತೆ ಹಾಗೂ ಸಹಾಯವಾಣಿ 08182279312 ಕರೆಮಾಡಿ ಮಾಹಿತಿ ನೀಡಬೇಕು ಎಂದು ಹೇಳಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ತಾಲೂಕಿನ ಇಒ ಸಿ.ಅವಿನಾಶ್, ಪೊಲೀಸ್ ಉಪಾಧೀಕ್ಷಕರು, ತಾಲೂಕು ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ಎಲ್ಲ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/