ಎಟಿಎನ್‌ಸಿ ಕಾಲೇಜಿನಲ್ಲಿ ‘ಆಚಾರ್ಯ ಅದ್ವಿತೀಯ’
ಶಿವಮೊಗ್ಗ | 19 ಮೇ 2024 | ಡಿಜಿ ಮಲೆನಾಡು.ಕಾಂ
ಮೊಬೈಲ್ ಎಂಬ ಅಂಧತ್ವದಿಂದ ಹೊರಬಂದು ಸಮಾಜದ ವಾಸ್ತವತೆಯ ಜ್ಞಾನ ಪಡೆದುಕೊಳ್ಳಬೇಕು ಎಂದು ಕುವೆಂಪು ವಿಶ್ವವಿದ್ಯಾಲಯ ಕುಲಪತಿ ಡಾ. ಶರತ್ ಅನಂತಮೂರ್ತಿ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ವತಿಯಿಂದ ಶನಿವಾರ ಕಾಲೇಜಿನ ಚಂದನ ಸಭಾಂಗಣದಲ್ಲಿ ಏರ್ಪಡಿಸಿದ್ದ ‘ಆಚಾರ್ಯ ಅದ್ವಿತೀಯ’ ರಾಜ್ಯಮಟ್ಟದ ಸಾಂಸ್ಕೃತಿಕ ಮತ್ತು ನಿರ್ವಹಣಾ ಉತ್ಸವ ಉದ್ಘಾಟಿಸಿ ಮಾತನಾಡಿದರು.
ಯುವ ಸಮೂಹ ಮೊಬೈಲ್ ಎಂಬ ಯುನಿವರ್ಸಿಟಿಗೆ ಸೀಮಿತರಾಗಿದ್ದಾರೆ. ಅಲ್ಲಿ ಬರುವ ವಿಷಯಗಳೇ ಸತ್ಯ ಎಂದು ನಂಬಿದ್ದಾರೆ. ಅಂತಹ ಮನಸ್ಥಿತಿಗಳಿಂದ ಹೊರಬಂದು ಸಮಾಜದ ವಾಸ್ತವತೆಯ ಜ್ಞಾನ ಪಡೆಯಬೇಕು. ಶೈಕ್ಷಣಿಕ ಕಲಿಕೆಯ ಜತೆಗೆ ಕೌಶಲ್ಯ ಸಹಿತ ಜ್ಞಾನಾರ್ಜನೆ ನಿಮ್ಮದಾಗಬೇಕು ಎಂದು ತಿಳಿಸಿದರು.
ಕಲೆ, ಸಾಹಿತ್ಯ ಸಾಂಸ್ಕೃತಿಕ ಚಿಂತನೆಗಳು ಸದಾ ನಮ್ಮನ್ನು ಬಲಗೊಳಿಸುತ್ತದೆ. ಬದುಕಿನ ಅದ್ವಿತೀಯಕ್ಕೆ ವಿದ್ಯಾರ್ಥಿ ದೆಸೆಯಿಂದಲೇ ಸದಭಿರುಚಿ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ನಾವೀನ್ಯಯುತ ಯೋಜನೆಗಳನ್ನು ರೂಪಿಸುವಾಗ ಇಂತಹ ಯೋಚನೆ ಸಮಾಜಕ್ಕೆ ಮಾರಕವೋ ಪೂರಕವೋ ಎಂಬ ಜವಾಬ್ದಾರಿಯುತ ನಡೆ ನಿಮ್ಮಲಿರಬೇಕು ಎಂದರು.
ಕುವೆಂಪು ವಿವಿ ಕುಲಸಚಿವ ಎ.ಎಲ್.ಮಂಜುನಾಥ, ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್, ಪ್ರಾಚಾರ್ಯ ಪ್ರೊ. ಮಮತಾ, ಎನ್ಇಎಸ್ ಸಹ ಕಾರ್ಯದರ್ಶಿ ಡಾ. ಪಿ.ನಾರಾಯಣ್, ನಿರ್ದೇಶಕ ಮಧುರಾವ್, ಎನ್.ಟಿ.ನಾರಾಯಣರಾವ್, ಎಚ್.ಸಿ.ಶಿವಕುಮಾರ್, ಕುಲಸಚಿವ ಪ್ರೊ. ಎನ್.ಕೆ.ಹರಿಯಪ್ಪ, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಪ್ರಾಧ್ಯಾಪಕ ಪ್ರೊ. ಎಸ್.ಜಗದೀಶ್, ಪ್ರೊ. ಕೆ.ಎಂ.ನಾಗರಾಜ, ಪ್ರೊ. ಎನ್.ಮಂಜುನಾಥ, ಸಹ ಪ್ರಾಧ್ಯಾಪಕಿ ಟಿ.ಗಾಯತ್ರಿ, ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಉಪಸ್ಥಿತರಿದ್ದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ಬಿಕಾಂ ಮತ್ತು ಬಿಬಿಎ ವಿಭಾಗಗಳಲ್ಲಿ ರ‍್ಯಾಂಕ್ ಪಡೆದ ಕಾಲೇಜಿನ 10 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿವಿಧ ಪದವಿ ಕಾಲೇಜುಗಳ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/