ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಎನ್ಎನ್ಎಸ್ ಸಹಕಾರಿ
ಶಿವಮೊಗ್ಗ | 20 ಮೇ 2024 | ಡಿಜಿ ಮಲೆನಾಡು.ಕಾಂ
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಳ್ಳುವಲ್ಲಿ ಎನ್‌ಎಸ್‌ಎಸ್ ಮಹತ್ತರ ಪಾತ್ರ ವಹಿಸುತ್ತದೆ ಎಂದು ರಾಜ್ಯ ಎನ್‌ಎಸ್‌ಎಸ್ ಪ್ರಶಸ್ತಿ ಪುರಸ್ಕೃತ, ಎಟಿಎನ್‌ಸಿ ಕಾಲೇಜಿನ ಪ್ರೊ. ಕೆ.ಎಂ.ನಾಗರಾಜು ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ರಾಜೇಂದ್ರ ನಗರದಲ್ಲಿರುವ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಎನ್‌ಎಸ್‌ಎಸ್‌ನಲ್ಲಿ ಪಾಲ್ಗೊಳ್ಳುವುದರಿಂದ ಧೈರ್ಯ, ವಿಶ್ವಾಸ ಹಾಗೂ ಮನೋಸಾಮಾರ್ಥ್ಯ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.
ಎನ್‌ಎಸ್‌ಎಸ್ ಶಿಬಿರಗಳಲ್ಲಿ ಭಾಗವಹಿಸುವುದರಿಂದ ಗ್ರಾಮೀಣ ಬದುಕಿನ ಜನರ ಜೀವನಶೈಲಿ, ಗ್ರಾಮೀಣ ಕ್ರೀಡೆ, ಕಲೆ ಪ್ರಕಾರಗಳ ಬಗ್ಗೆ ಪರಿಚಯ ಆಗುತ್ತದೆ. ಕಾಲೇಜು ಅವಧಿಯಲ್ಲಿ ವಿದ್ಯಾಭ್ಯಾಸದ ಜತೆಯಲ್ಲಿ ವಿದ್ಯಾರ್ಥಿಗಳು ಎನ್‌ಎಸ್‌ಎಸ್‌ನಲ್ಲಿ ತೊಡಗಿಸಿಕೊಳ್ಳಬೇಕು. ಎನ್‌ಎಸ್‌ಎಸ್ ಜೀವನದ ಉತ್ತಮ ಅವಕಾಶವಾಗಿದೆ ಎಂದು ಅಭಿಪ್ರಾಯಪಟ್ಟರು.
ದೇಶದ ಅಭಿವೃದ್ಧಿಯಲ್ಲಿ ಎನ್‌ಎಸ್‌ಎಸ್ ಪಾತ್ರ ತುಂಬಾ ದೊಡ್ಡದು. ಎನ್‌ಎಸ್‌ಎಸ್ ಶಿಬಿರ ನಡೆಯುತ್ತಿರುವ ಗ್ರಾಮಾಂತರ ಪ್ರದೇಶದಲ್ಲಿ ಸ್ಥಳೀಯರು ಕೈಜೋಡಿಸಿ ಸಹಕಾರ ನೀಡಬೇಕು. ಸಂಘ ಸಂಸ್ಥೆಗಳ ಸಹಕಾರವು ಉತ್ತಮ ಸೇವೆ ಸಲ್ಲಿಸುವಲ್ಲಿ ಸಹಕಾರಿಯಾಗುತ್ತದೆ ಎಂದು ಹೇಳಿದರು.
ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ಸಮಿತಿಯು ವಿದ್ಯಾಭ್ಯಾಸದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಪ್ರೋತ್ಸಾಹ ನೀಡಿಕೊಂಡು ಬರುತ್ತಿದೆ. ಎನ್‌ಎಸ್‌ಎಸ್‌ನಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಸ್ಥಾನ ತಲುಪಿ ಸಮಾಜದ ಸೇವೆ ಸಲ್ಲಿಸುತ್ತಿದ್ದಾರೆ ಎಂದು ತಿಳಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ವಸಂತ ಹೋಬಳಿದಾರ್, ನಿವೃತ್ತ ಅಧಿಕಾರಿ ಚಂದ್ರಶೇಖರಯ್ಯ, ಡಾ. ಪರಮೇಶ್ವರ ಶಿಗ್ಗಾವ್, ಅರುಣ್ ದೀಕ್ಷಿತ್, ನಿವೃತ್ತ ಪ್ರಾಚಾರ್ಯ ಡಾ. ಧನಂಜಯ, ಪ್ರದೀಪ್ ಎಲಿ, ಕೇಶವಪ್ಪ, ಸಂತೋಷ್, ಕಾರ್ಯದರ್ಶಿ ಕಿಶೋರ್ ಕುಮಾರ್, ಗಣೇಶ್ ಎಂ.ಅಂಗಡಿ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/