ಡೆಂಘೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಸೂಚನೆ

ಡೆಂಘೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಸೂಚನೆ

ಶಿವಮೊಗ್ಗ | 26 ಮೇ 2024 | ಡಿಜಿ ಮಲೆನಾಡು.ಕಾಂ

ಜಿಲ್ಲೆಯಲ್ಲಿ ಡೆಂಘೆ ಪ್ರಕರಣಗಳು ಹೆಚ್ಚುತ್ತಿದ್ದು, ಡೆಂಘೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರತಿಯೊಬ್ಬ ಅಧಿಕಾರಿಗಳು ಆದ್ಯತೆ ನೀಡಿ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚಿಸಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ವತಿಯಿಂದ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮೀಣ ಮಟ್ಟದ ಅಧಿಕಾರಿ ಮತ್ತು ಆಶಾ ಕಾರ್ಯಕರ್ತರಿಗೆ  ಡೆಂಘೆ ನಿಯಂತ್ರಣ ಕ್ರಮಗಳ ತರಬೇತಿ ನೀಡಬೇಕು. ಇದು ಪ್ರತಿಯೊಂದು ಗ್ರಾಮಗಳನ್ನು ತಲುಪಬೇಕು. ಶಾಲೆಗಳಲ್ಲಿ ಮಕ್ಕಳಿಗೆ ಸೊಳ್ಳೆಗಳ ನಿಯಂತ್ರಣದ ಬಗ್ಗೆ ಅರಿವು ಕಾರ್ಯಕ್ರಮ ನಡೆಸಬೇಕು ಎಂದು ತಿಳಿಸಿದರು.

ಮಾನ್ಸೂನ್ ಇರುವ ಕಾರಣ ಮುಂದಿನ ದಿನಗಳಲ್ಲಿ ಸೊಳ್ಳೆ ಹೆಚ್ಚಾಗದಂತೆ ನೋಡಿಕೊಳ್ಳಬೇಕು. ತೋಟ ಮತ್ತು ಕೃಷಿ ಭೂಮಿಯಲ್ಲಿ ಬಿದ್ದಿರುವ ತ್ಯಾಜ್ಯಗಳಲ್ಲಿ ನೀರು ಶೇಖರಣೆ ಆಗದಂತೆ ವಿಲೆವಾರಿ ಮಾಡಿಸಬೇಕು. ಸಾರ್ವಜನಿಕ ತೊಟ್ಟಿ, ತೆರೆದ ಟ್ಯಾಂಕ್‌ ಮತ್ತು ಚರಂಡಿಗಳನ್ನು ಸರಿಯಾದ ರೀತಿ ಸ್ವಚ್ಛ ಮಾಡಬೇಕು ಎಂದರು.

ತಂಬಾಕು ನಿಯಂತ್ರಣಕ್ಕೆ ಸೂಕ್ತವಾದ ಕ್ರಮ ತೆಗೆದುಕೊಳ್ಳಬೇಕು. ಘೋಷಣೆ ಮತ್ತು ಪ್ರತಿಜ್ಞೆ ಮೂಲಕ ಹೆಚ್ಚು ಅರಿವು ಕಾರ್ಯಕ್ರಮವನ್ನು ಜಿಲ್ಲಾದ್ಯಂತ ಮಾಡಬೇಕು. ತಾಲೂಕು ಮತ್ತು ಗ್ರಾಪಂ ವ್ಯಾಪ್ತಿಯಲ್ಲಿ ಅರಿವು ಕಾರ್ಯಕ್ರಮಗಳನ್ನು ಹೆಚ್ಚಿಸಬೇಕು. ಜಿಲ್ಲಾ ಮಟ್ಟದಲ್ಲಿ  ತಂಬಾಕು ನಿಯಂತ್ರಣಕ್ಕೆ ನಿಗಾ ವಹಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಕಡ್ಡಾಯವಾಗಿ ತಡೆಯಬೇಕು. ಹುಕ್ಕ ಬಾರ್‌ಗಳಿದ್ದರೆ ಶೀಘ್ರವೇ ಮುಚ್ಚಿಸಬೇಕು ಎಂದು ತಿಳಿಸಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ದಾಸೆಗೌಡ, ಡಿಎಚ್‌ಒ ಡಾ. ನಾಗರಾಜ್, ಆರ್.ಸಿ.ಎಚ್.ಒ ಡಾ. ನಾಗರಾಜ್ ನಾಯ್ಕ್, ಮಲೇರಿಯಾ ಆಫೀಸರ್ ಡಾ. ಗುಡದಪ್ಪ, ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!