ಕುವೆಂಪು ವಿಶ್ವವಿದ್ಯಾನಿಲಯ ಸಂಯೋಜನಾ ಅರ್ಜಿ ಆಹ್ವಾನ
ಶಿವಮೊಗ್ಗ | 27 ಮೇ 2024 | ಡಿಜಿ ಮಲೆನಾಡು.ಕಾಂ
ಕುವೆಂಪು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಿಂದ ಎಲ್ಲ ಸಂಯೋಜಿತ ಕಾಲೇಜುಗಳ ನವೀನ ಸಂಯೋಜನೆಗಾಗಿ ಯುಯುಸಿಎಂಎಸ್ ತಂತ್ರಾಂಶದ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ನೋಂದಾಯಿತ ಶೈಕ್ಷಣಿಕ ಸೊಸೈಟಿ, ಸಾರ್ವಜನಿಕ ಟ್ರಸ್ಟ್, ಸಂಸ್ಥೆಗಳಿಂದ ನವೀನ ಸಂಯೋಜನೆಗಾಗಿ ಅರ್ಜಿಗಳನ್ನು ಯುಯುಸಿಎಂಎಸ್ ತಂತ್ರಾಂಶದಲ್ಲಿ http://uucms.karnataka.gov.in ಮೂಲಕ ಸಲ್ಲಿಸಿ, ನಂತರ ಡೌನ್‌ಲೋಡ್ ಮಾಡಿಕೊಳ್ಳಬೇಕು.
ಪೂರಕ ದಾಖಲೆಗಳೊಂದಿಗೆ ದ್ವಿಪ್ರತಿಯಲ್ಲಿ ನಿರ್ದೇಶಕರು, ಕಾಲೇಜು ಅಭಿವೃದ್ಧಿ ಪರಿಷತ್ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ, ಜ್ಞಾನಸಹ್ಯಾದ್ರಿ, ಶಂಕರಘಟ್ಟ-577451 ಇವರಿಗೆ ಸಲ್ಲಿಸುವುದು.
ದಂಡಶುಲ್ಕವಿಲ್ಲದೆ ಮೇ 27 ರೊಳಗಾಗಿ ಹಾಗೂ 10,000 ರೂ. ದಂಡ ಶುಲ್ಕದೊಂದಿಗೆ ಮೇ 28 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಪರಿಷ್ಕೃತ ಸಂಯೋಜನೆ ಶುಲ್ಕವನ್ನು ಯುಯುಸಿಎಂಎಸ್ ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಹಣಕಾಸು ಅಧಿಕಾರಿಗಳು, ಕುವೆಂಪು ವಿವಿ, ಶಂಕರಘಟ್ಟ, ಸಂಯೋಜನಾ ಖಾತೆ ಸಂ.: 54023035811, ಎಸ್.ಬಿ.ಐ, ಜ್ಞಾನ ಸಹ್ಯಾದ್ರಿ ಶಾಖೆ, ಶಂಕರಘಟ್ಟ, (IFSC Code : SBIN0040759) ಗೆ ಜಮಾ ಮಾಡುವಂತೆ ಕುಲಸಚಿವರು, ಕುವೆಂಪು ವಿಶ್ವವಿದ್ಯಾಲಯ, ಜ್ಞಾನಸಹ್ಯಾದ್ರಿ, ಶಂಕರಘಟ್ಟ-577451 ಶಿವಮೊಗ್ಗ ಜಿಲ್ಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/