ಲೋಕಸಭೆ ಚುನಾವಣೆ ಮತ ಎಣಿಕೆ ದಿನದಂದು ಶಿವಮೊಗ್ಗ ನಗರದಲ್ಲಿ ವಾಹನಗಳ ಮಾರ್ಗ ಬದಲಾವಣೆ

ಲೋಕಸಭೆ ಚುನಾವಣೆ ಮತ ಎಣಿಕೆ ದಿನದಂದು ಶಿವಮೊಗ್ಗ ನಗರದಲ್ಲಿ ವಾಹನಗಳ ಮಾರ್ಗ ಬದಲಾವಣೆ

ಶಿವಮೊಗ್ಗ | 30 ಮೇ 2024 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ನಡೆಯುವುದರಿಂದ ವಾಹನಗಳ ಸಂಚಾರ ನಿಷೇಧ, ವಾಹನ ನಿಲುಗಡೆ ಹಾಗೂ ವಾಹನಗಳ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಗುರದತ್ತ ಹೆಗಡೆ ಆದೇಶಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ಸಹ್ಯಾದ್ರಿ ಕಾಲೇಜಿನ ಸುತ್ತ 100 ಮೀ. ಅಂತರದಲ್ಲಿ ಎಲ್ಲ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧಿಸಲಾಗಿದೆ. ಬೆಂಗಳೂರು, ಭದ್ರಾವತಿ, ಎನ್.ಆರ್.ಪುರ ಕಡೆಯಿಂದ ಬರುವ ಎಲ್ಲ ಭಾರಿ ವಾಹನ ಮತ್ತು ಎಲ್ಲ ಬಸ್‌ಗಳು ಹಾಗೂ ಕಾರು, ದ್ವಿಚಕ್ರ, ತ್ರಿಚಕ್ರ ವಾಹನಗಳು ಬೈಪಾಸ್ ರಸ್ತೆ ಮೂಲಕ ಸಂಚರಿಸುವುದು.

ಚಿತ್ರದುರ್ಗ, ಹೊಳೆಹೊನ್ನೂರು ಕಡೆಯಿಂದ ಬಂದು ಹೋಗುವ ಎಲ್ಲ ಭಾರಿ ವಾಹನ ಮತ್ತು ಬಸ್‌ಗಳು ಬಿ.ಎಚ್.ರಸ್ತೆ ಮಾರ್ಗವಾಗಿ ಬಸ್ ನಿಲ್ದಾಣಕ್ಕೆ ಹೋಗುವುದು. ಹೊನ್ನಾಳಿ ದಾವಣಗೆರೆಯಿಂದ ಬರುವ ಎಲ್ಲ ಭಾರಿ ವಾಹನ, ಎಲ್ಲ ಬಸ್‌ಗಳನ್ನು 100 ಅಡಿರಸ್ತೆ, ವಿನೋಬನಗರ ಮಾರ್ಗವಾಗಿ ಹೋಗುವುದು.

ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಹರಿಹರ, ದಾವಣಗೆರೆಗೆ ಹೋಗುವ ಎಲ್ಲ ಬಸ್‌ಗಳು ಎ. ಎ.ವೃತ್ತ, ಗೋಪಿ ವೃತ್ತ, ಮಹಾವೀರ ವೃತ್ತ, ಕೆಇಬಿ ವೃತ್ತ ಮುಖಾಂತರವಾಗಿ ಹೋಗುವುದು.  ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ, ಎನ್.ಆರ್.ಪುರ ಕಡೆಗೆ ಹೋಗುವ ಎಲ್ಲ ವಾಹನಗಳು ಬೈಪಾಸ್ ರಸ್ತೆ ಮುಖಾಂತರ ಎಂ.ಆರ್.ಎಸ್. ಸರ್ಕಲ್  ಕಡೆಗೆ ಹೋಗುವುದು. ಈ ಎಲ್ಲ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನ, ಅತಿಗಣ್ಯ ವ್ಯಕ್ತಿಗಳ ವಾಹನ, ಅಂಬ್ಯುಲೆನ್ಸ್ ಹಾಗೂ ಮೂಲಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿದೆ.

ಏಜೆಂಟರು ಮತ್ತು ಎಲ್ಲ ಇಲಾಖೆ ಅಧಿಕಾರಿಗಳ ವಾಹನಗಳ ನಿಲುಗಡೆ ಸಹ್ಯಾದ್ರಿ ಸೈನ್ಸ್ ಕಾಲೇಜು ಎದುರು, ವಜ್ರ ಮಹೋತ್ಸವ ಕಟ್ಟಡದ ಎದುರು ಮತ್ತು ಬಿ.ಎಚ್.ರಸ್ತೆಗೆ ಹೊಂದಿಕೊಂಡಂತಿರುವ ಮ್ಯಾಚ್ ಫ್ಯಾಕ್ಟರಿಗೆ ಸೇರಿದ ಮೈದಾನದಲ್ಲಿ ವಾಹನ ಪಾರ್ಕಿಂಗ್‌ಗೆ ಅನುಮತಿಸಿದೆ. ಎಂ.ಆರ್.ಎಸ್. ವೃತ್ತದ ಹತ್ತಿರವಿರುವ ಕೆ.ಇ.ಬಿ ಸಮುದಾಯ ಭವನದ ಹಿಂಭಾಗ ವಾಹನಗಳ ಪಾರ್ಕಿಂಗ್‌ಗೆ ಅನುಮತಿ ನೀಡಿದೆ.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ಸಾರ್ವಜನಿಕರ ಕಾರು ಮತ್ತು ದ್ವಿಚಕ್ರ ವಾಹನಗಳ ನಿಲುಗಡೆ ಎಂಆರ್.ಎಸ್. ನಿಂದ ಎನ್.ಆರ್.ಪುರ ರಸ್ತೆಯ ಎಡಭಾಗದಲ್ಲಿ ಪಾರ್ಕಿಂಗ್ ಮಾಡುವುದು. ಬೈಪಾಸ್ ರಸ್ತೆಗೆ ಹೊಂದಿಕೊಂಡಂತಿರುವ ಸಹ್ಯಾದ್ರಿ ಕಾಲೇಜಿನ ಸ್ವೇಡಿಯಂ ಹತ್ತಿರ ಸಾರ್ವಜನಿಕರ ಎಲ್ಲ ವಾಹನಗಳ ಪಾರ್ಕಿಂಗ್‌ಗೆ ಅನುಮತಿ ನೀಡಿದೆ. ಎಂ.ಆರ್.ಎಸ್. ವೃತ್ತದಿಂದ ಬಿ.ಎಚ್.ರಸ್ತೆ, ವಿದ್ಯಾನಗರ, ಮತ್ತೂರು ಕ್ರಾಸ್‌ವರೆಗೆ ಸಾರ್ವಜನಿಕರ ವಾಹನಗಳು ಓಡಾಡದಂತೆ ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದೆ.

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!