ರಕ್ತದಾನದ ಬಗ್ಗೆ ಜಾಗೃತಿ ಅಗತ್ಯ

ರಕ್ತದಾನದ ಬಗ್ಗೆ ಜಾಗೃತಿ ಅಗತ್ಯ

ಶಿವಮೊಗ್ಗ | 18 ಜೂನ್‌ 2024 | ಡಿಜಿ ಮಲೆನಾಡು.ಕಾಂ

ರಕ್ತದಾನದ ಬಗ್ಗೆ ಜಾಗೃತಿ ಅಗತ್ಯವಿದ್ದು, ಆರೋಗ್ಯವಂತ ಯುವಜನತೆ ರಕ್ತದಾನ ಮಾಡಲು ಮುಂದಾಗಬೇಕು ಎಂದು ಮೆಗ್ಗಾನ್ ಆಸ್ಪತ್ರೆ ರಕ್ತ ಕೇಂದ್ರದ ವೈದ್ಯಾಧಿಕಾರಿ ಡಾ. ಗೀತಾ ಲಕ್ಷ್ಮಿ  ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ಸಹ್ಯಾದ್ರಿ ಕಲಾ ಕಾಲೇಜಿನಲ್ಲಿಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಹ್ಯಾದ್ರಿ ಕಲಾ ಕಾಲೇಜು, ರೆಡ್‌ಕ್ರಾಸ್, ಎನ್‌ಎಸ್‌ಎಸ್ ಘಟಕದ ಆಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ರಕ್ತದಾನಿಗಳ ದಿನಾಚರಣೆಯಲ್ಲಿ ಮಾತನಾಡಿ, ಜೀವ ಉಳಿಸುವ ಶ್ರೇಷ್ಠ ಕಾರ್ಯ ರಕ್ತದಾನದಲ್ಲಿ ಭಾಗಿಯಾಗಬೇಕು ಎಂದು ತಿಳಿಸಿದರು.

23 ಬಾರಿ ರಕ್ತದಾನ ಮಾಡಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಜೆಎನ್‌ಎನ್‌ ಇಂಜಿನಿಯರ್ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ. ಅಶ್ವಿನಿ, ಸಾಮಾನ್ಯವಾಗಿ ರಕ್ತದಾನ ಮಾಡಲು ಮಹಿಳೆಯರು ಹಿಂದೇಟು ಹಾಕುತ್ತಾರೆ. ಎಲ್ಲ ಆರೋಗ್ಯವಂತ ಮಹಿಳೆಯರು ಕೂಡ ರಕ್ತದಾನ ಮಾಡಬಹುದು. ಮಹಿಳಾ ರಕ್ತದಾನಿಗಳ ಸಂಖ್ಯೆ ಹೆಚ್ಚಾಗಬೇಕು. ವಿದ್ಯಾರ್ಥಿನಿಯರು ಸಹ ರಕ್ತದಾನ ಮಾಡಲು ಮುಂದಾಗಬೇಕು ಎಂದರು.

ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ಕೆ.ಎನ್.ಮಂಜುನಾಥ್ ಮಾತನಾಡಿ, ಮುಂಬರುವ ದಿನಗಳಲ್ಲಿ ಸಹ್ಯಾದ್ರಿಯ ಮೂರು ಕಾಲೇಜುಗಳಿಂದ ಎನ್‌ಎಸ್‌ಎಸ್ ಘಟಕ, ರೆಡ್‌ಕ್ರಾಸ್ ನೆರವಿನಲ್ಲಿ ಸಹ್ಯಾದ್ರಿ ಕಾಲೇಜಿನಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗುವುದು ಎಂದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ಜಿಲ್ಲಾ ಕ್ಷಯ ಮತ್ತು ಏಡ್ಸ್ ನಿಯಂತ್ರಣಾಧಿಕಾರಿ ಡಾ. ಜಿ.ಸಿ.ದಿನೇಶ್, ಕುವೆಂಪು ವಿವಿ ಎನ್‌ಎಸ್‌ಎಸ್ ಸಂಯೋಜಕಿ ಡಾ. ಶುಭಾ ಮರವಂತೆ ಮಾತನಾಡಿ, ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಚಾರ್ಯೆ ಡಾ. ಸೈಯ್ಯದ್ ಸನಾವುಲ್ಲಾ, ಎನ್‌ಎಸ್‌ಎಸ್ ಘಟಕ ಅಧಿಕಾರಿಗಳಾದ ಡಾ. ಪ್ರಕಾಶ್ ಮರಗನಳ್ಳಿ, ಡಾ. ಮುದುಕಪ್ಪ, ಡಾ. ಹಾಲಮ್ಮ, ಎನ್.ಎಂ.ಮಂಗಳಾ, ಭರತ್, ಮೋನಿಕಾ ಇದ್ದರು.

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!