ತುರ್ತು ಪರಿಸ್ಥಿತಿಯಲ್ಲಿ ಅರಿವಾಗುತ್ತದೆ ರಕ್ತದ ಬೆಲೆ

ತುರ್ತು ಪರಿಸ್ಥಿತಿಯಲ್ಲಿ ಅರಿವಾಗುತ್ತದೆ ರಕ್ತದ ಬೆಲೆ

ಶಿವಮೊಗ್ಗ | 18 ಜೂನ್‌ 2024 | ಡಿಜಿ ಮಲೆನಾಡು.ಕಾಂ

ರಕ್ತದ ಬೆಲೆ ಗೊತ್ತಾಗುವುದು ನಮ್ಮವರಿಗೆ ತುರ್ತು ಅಗತ್ಯವಿದ್ದಾಗ ಮಾತ್ರ. ಜೀವ ಉಳಿಸುವ ಮಹತ್ತರ ಕಾರ್ಯ ಮಾಡುವ ರಕ್ತದಾನಿಗಳು ನಮ್ಮೆಲ್ಲರಿಗೂ ಮಾದರಿ ಎಂದು ಸ್ವಯಂ ಪ್ರೇರಿತ ರಕ್ತದಾನಿಗಳ ಸೇವಾ ಸಂಸ್ಥೆ ಮಾಜಿ ಅಧ್ಯಕ್ಷ ಜಿ.ವಿಜಯಕುಮಾರ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ರಾಜೇಂದ್ರನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ರಕ್ತದಾನಿಗಳನ್ನು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಸಂಘ ಸಂಸ್ಥೆಗಳ ದೊಡ್ಡ ಪಾತ್ರವಿದೆ. ಇದರಿಂದ ನೂರಾರು ಜನರಿಗೆ ಪ್ರೇರಣೆಯಾಗುತ್ತದೆ ಎಂದು ತಿಳಿಸಿದರು.

115 ರಕ್ತದಾನ ಮಾಡಿರುವ ಧರಣೇಂದ್ರ ದಿನಕರ್ ಮಾತನಾಡಿ, ಜೂನ್ 14ರಂದು ವಿಶ್ವಾದ್ಯಂತ ರಕ್ತದಾನಿಗಳ ಆಚರಿಸಲಾಗುತ್ತದೆ. ಪ್ರತಿಯೊಂದು ಮನೆಯಲ್ಲೂ ರಕ್ತದಾನಿ ಇರಬೇಕು. ಆರೋಗ್ಯವಂತ ಜನರು ರಕ್ತದಾನ ಮಾಡಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಐಎಂಎ ಮಾಜಿ ಅಧ್ಯಕ್ಷ ಡಾ. ಪರಮೇಶ್ವರ್ ಶಿಗ್ಗಾವ್ ಮಾತನಾಡಿ, ಕೃತಕವಾಗಿ ರಕ್ತ ಉತ್ಪಾದಿಸಲು ಸಾಧ್ಯವಿಲ್ಲ. ಆದ್ದರಿಂದ ರಕ್ತದಾನ ಮಾಡಬೇಕು. ಇದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

75 ಬಾರಿ ರಕ್ತದಾನ ಮಾಡಿರುವ ಪ್ರಿಯದರ್ಶಿನಿ ಕಾಲೇಜಿನ ಪ್ರಾಚಾರ್ಯ ವೀರೇಶ್, 93 ಬಾರಿ ರಕ್ತದಾನ ಮಾಡಿರುವ ಪರ್ಫೆಕ್ಟ್ ಅಲಾಯ್ಸ್‌ನ ಮಂಜುನಾಥ್ ಹಾಗೂ ಧರಣೇಂದ್ರ ದಿನಕರ್ ಅವರಿಗೆ ಸನ್ಮಾನಿಸಲಾಯಿತು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ನಿಯೋಜಿತ ಅಧ್ಯಕ್ಷ ಅರುಣ್ ದೀಕ್ಷಿತ್, ಮಾಜಿ ಅಧ್ಯಕ್ಷರಾದ ಎನ್.ಎಚ್.ಶ್ರೀಕಾಂತ್, ಕಾರ್ಯದರ್ಶಿ ಕಿಶೋರ್ ಕುಮಾರ್, ನಿವೃತ್ತ ಅಧಿಕಾರಿ ಚಂದ್ರಶೇಖರಯ್ಯ, ಮುಕುಂದೇಗೌಡ, ಸಂಜೀವ್ ಕುಮಾರ್ ರೋಟರಿ ಸದಸ್ಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!