ರೋಟರಿ ಶಿವಮೊಗ್ಗ ಪೂರ್ವ ಪದವಿ ಸ್ವೀಕಾರ ಸಮಾರಂಭ ಜುಲೈ 5ಕ್ಕೆ

ರೋಟರಿ ಶಿವಮೊಗ್ಗ ಪೂರ್ವ ಪದವಿ ಸ್ವೀಕಾರ ಸಮಾರಂಭ ಜುಲೈ 5ಕ್ಕೆ

ಶಿವಮೊಗ್ಗ | 4 ಜುಲೈ 2024 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ನಗರದ ಸುರ್ವರ್ಣ ಸಂಸ್ಕೃತಿ ಭವನದಲ್ಲಿ ಜುಲೈ 5ರಂದು ಸಂಜೆ 5.30ಕ್ಕೆ ರೋಟರಿ ಶಿವಮೊಗ್ಗ ಪೂರ್ವ 2024-25ನೇ ಸಾಲಿನ ಪದಾಧಿಕಾರಿಗಳ ಪದವಿ ಸ್ವೀಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

2024-25ನೇ ಸಾಲಿನ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷರಾಗಿ ಅರುಣ್ ದೀಕ್ಷಿತ್, ಕಾರ್ಯದರ್ಶಿಯಾಗಿ ಶಶಿಕಾಂತ್ ನಾಡಿಗ್ ಹಾಗೂ ಪದಾಧಿಕಾರಿಗಳು ಅಧಿಕಾರ ವಹಿಸಿಕೊಳ್ಳುವರು. ನಿಯೋಜಿತ ರೋಟರಿ ಜಿಲ್ಲಾ ಗವರ್ನರ್ ಕೆ.ಪಾಲಾಕ್ಷಪ್ಪ ಪ್ರತಿಷ್ಠಾಪನಾಧಿಕಾರಿಯಾಗಿ ಭಾಗವಹಿಸುವರು.

ವಲಯ 11ರ ರೋಟರಿ ಸಹಾಯಕ ಗವರ್ನರ್ ಎಚ್.ಎಂ.ಸುರೇಶ್, ಜೋನಲ್ ಲೆಫ್ಟಿನೆಂಟ್ ಮಂಜುನಾಥ್ ರಾವ್ ಕದಂ, 2023-24ನೇ ಸಾಲಿನ ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ, ಕಾರ್ಯದರ್ಶಿ ಡಿ.ಕಿಶೋರ್‌ಕುಮಾರ್ ಹಾಗೂ 2024-25ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರು ಮತ್ತು ಸದಸ್ಯರು ಉಪಸ್ಥಿತರಿರುವರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!