ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷರಾಗಿ ಅರುಣ್ ದೀಕ್ಷಿತ್, ಕಾರ್ಯದರ್ಶಿಯಾಗಿ ಶಶಿಕಾಂತ್ ನಾಡಿಗ್
ಶಿವಮೊಗ್ಗ | 9 ಜುಲೈ 2024 | ಡಿಜಿ ಮಲೆನಾಡು.ಕಾಂ
ರೋಟರಿ ಸಂಸ್ಥೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದು, ಪಲ್ಸ್ ಪೊಲಿಯೋ ನಿರ್ಮೂಲನೆಯಲ್ಲಿ ಮಹತ್ತರ ಪಾತ್ರ ವಹಿಸಿತ್ತು ಎಂದು ನಿಯೋಜಿತ ರೋಟರಿ ಜಿಲ್ಲಾ ಗವರ್ನರ್ ಕೆ.ಪಾಲಾಕ್ಷಪ್ಪ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ಶಿವಮೊಗ್ಗ ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಏರ್ಪಡಿಸಿದ್ದ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯ 2024-25ನೇ ಸಾಲಿನ ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದರು.
ರೋಟರಿ ಸಂಸ್ಥೆಯು ಪ್ರಸ್ತುತ ವರ್ಷದಲ್ಲಿಯೂ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದು, ಪ್ರಮುಖವಾಗಿ ರಸ್ತೆ ಸುರಕ್ಷತೆ, ಆರೋಗ್ಯ ಸ್ವಚ್ಛತೆ, ಶಿಕ್ಷಣ, ಪರಿಸರ ಹಾಗೂ ಜಲ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ವಿಶೇಷ ಅಭಿಯಾನಗಳನ್ನು ನಡೆಸಲಿದೆ ಎಂದು ತಿಳಿಸಿದರು.
ವಲಯ 11ರ ರೋಟರಿ ಸಹಾಯಕ ಗವರ್ನರ್ ಎಚ್.ಎಂ.ಸುರೇಶ್, ನೂತನ ಪದಾಧಿಕಾರಿಗಳು ವರ್ಷಪೂರ್ತಿ ರೋಟರಿ ಸೇವಾ ಆಶಯದ ಕಾರ್ಯಕ್ರಮಗಳನ್ನು ಜಾರಿಗೊಳಿಸಲು ಮುಂದಾಗಬೇಕು. ರೋಟರಿ ಜಿಲ್ಲಾ ಗವರ್ನರ್ ದೇವಾನಂದ್ ಮಾರ್ಗದರ್ಶನದಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು ಎಂದು ಸಲಹೆ ನೀಡಿದರು.
ಜೋನಲ್ ಲೆಫ್ಟಿನೆಂಟ್ ಮಂಜುನಾಥ್ ರಾವ್ ಕದಂ ಮಾತನಾಡಿ, ಜಿಲ್ಲೆಯಲ್ಲಿ ನಮ್ಮ ಸಂಸ್ಥೆ ಒಳ್ಳೆಯ ಕಾರ್ಯಕ್ರಮಗಳನ್ನು ಮಾಡುವಲ್ಲಿ ನಿಮ್ಮೆಲ್ಲರ ಜೊತೆ ಸದಾ ನಾವಿರುತ್ತೇವೆ ಎಂದು ತಿಳಿಸಿದರು.
2024-25ನೇ ಸಾಲಿನ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷರಾಗಿ ಅರುಣ್ ದೀಕ್ಷಿತ್ ಹಾಗೂ ಕಾರ್ಯದರ್ಶಿಯಾಗಿ ಶಶಿಕಾಂತ್ ನಾಡಿಗ್ ಅಧಿಕಾರ ವಹಿಸಿಕೊಂಡರು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
2023-24ನೇ ಸಾಲಿನ ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ, ಕಾರ್ಯದರ್ಶಿ ಡಿ.ಕಿಶೋರ್‌ಕುಮಾರ್, ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ವಸಂತ್ ಹೋಬಳಿದಾರ್, ಎನ್.ಎಚ್.ಶ್ರೀಕಾಂತ್, ಕಡಿದಾಳ್ ಗೋಪಾಲ್, ಎ.ಒ.ಮಹೇಶ್, ಡಾ. ಗುಡದಪ್ಪ ಕಸಬಿ ಹಾಗೂ 2024-25ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರು ಮತ್ತು ರೋಟರಿ, ಇನ್ನರ್‌ವ್ಹೀಲ್ ಸದಸ್ಯರು ಉಪಸ್ಥಿತರಿದ್ದರು.
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/