ಹೋಟೆಲ್ ಉದ್ಯಮದಿಂದ ಹೆಚ್ಚು ಉದ್ಯೋಗ ಅವಕಾಶ

ಹೋಟೆಲ್ ಉದ್ಯಮದಿಂದ ಹೆಚ್ಚು ಉದ್ಯೋಗ ಅವಕಾಶ

ಶಿವಮೊಗ್ಗ | 29 ಜುಲೈ 2024 | ಡಿಜಿ ಮಲೆನಾಡು.ಕಾಂ

ಹೋಟೆಲ್ ಉದ್ಯಮ ಒಂದು ಪ್ರಯಾಸಕರ ವ್ಯವಹಾರವಾಗಿದ್ದು, ದೇಶದಲ್ಲಿ ಅತಿ ಹೆಚ್ಚು ಉದ್ಯೋಗ ಅವಕಾಶ ಸೃಷ್ಟಿಸುವ ಉದ್ಯಮ ಹೋಟೆಲ್ ಕ್ಷೇತ್ರ ಎಂದು ಬೃಹತ್ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಶಿವಮೊಗ್ಗ ನಗರದ ಮಥುರಾ ಪಾರಾಡೈಸ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಮಥುರಾ ಪಾರಡೈಸ್ ರಜತೋತ್ಸವ ಸಂಭ್ರಮಾಚರಣೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಶಿಕ್ಷಣ ಪಡೆದವರು, ಪಡೆಯದೇ ಇರುವವರು ಸೇರಿದಂತೆ ಎಲ್ಲ ವರ್ಗದವರಿಗೂ ವಸತಿ, ಊಟದ ಜತೆಗೆ ಸಂಬಳ ನೀಡುವ ಉದ್ಯಮ ಹೋಟೆಲ್ ಆಗಿದೆ ಎಂದು ಅಭಿಪ್ರಾಯಪಟ್ಟರು.

ವಕೀಲ ಕೆ.ಪಿ.ಶ್ರೀಪಾಲ್ ಮಾತನಾಡಿ, ಮಥುರಾ ಹೋಟೆಲ್ ವ್ಯಾಪಾರ ವಹಿವಾಟಿನ ಜತೆಯಲ್ಲಿ ಸಮಾಜಮುಖಿ ವೇದಿಕೆಗಳಿಗೆ ಹೆಚ್ಚಿನ ಅವಕಾಶ ನೀಡುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಪ್ರಸನ್ನಕುಮಾರ್ ಮಾತನಾಡಿ, 25 ವರ್ಷಗಳ ಹಿಂದೆ ಶಿವಮೊಗ್ಗದ ಸಣ್ಣ ನಗರದಲ್ಲಿ ಲಕ್ಷಾಂತರ ರೂಪಾಯಿಗಳನ್ನು ಖರ್ಚು ಮಾಡಿ ಉತ್ತಮ ಹೋಟೆಲ್ ಮತ್ತು ವಸತಿಗೃಹ ಪ್ರಾರಂಭಿಸುವ ಧೈರ್ಯ ಮಾಡಿದ್ದರು. ಸಮಾಜಮುಖಿ ಕಾರ್ಯಕ್ರಮಗಳಿಗೆ ಸಹಕಾರಿಯಾಗುತ್ತಿದ್ದಾರೆ ಗೋಪಿನಾಥ್ ಎಂದು ಹೇಳಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರುದ್ರೇಗೌಡ ಮಾತನಾಡಿ, ಮಥುರಾ ಗೋಪಿನಾಥ್ ಅವರು ಒಬ್ಬ ದೂರದರ್ಶಿ. ನಮ್ಮ ಕನಸಿನ ಶಿವಮೊಗ್ಗ ಎಂಬ ಸಂಸ್ಥೆ ರೂಪಿಸಿ ಹಲವಾರು ಉತ್ತಮ ಯೋಜನೆಗಳನ್ನು ಸಾಕಾರಗೊಳಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ ಎಂದು ತಿಳಿಸಿದರು.

ರಜತೋತ್ಸವ ಸಮಿತಿ ಅಧ್ಯಕ್ಷ ವಸಂತ ಹೋಬಳಿದಾರ್ ಮಾತನಾಡಿ, ಪ್ರತಿಯೊಬ್ಬ ಉದ್ಯಮಿ ತನ್ನ ಉದ್ಯಮದ ಜತೆಗೆ ಸಮಾಜಮುಖಿ ಕಾರ್ಯಗಳನ್ನು ಮಾಡುವುದರ ಮೂಲಕ ಸಮಾಜದ ಶ್ರೇಯೋಭಿವೃದ್ಧಿಗೆ ಕೆಲಸ ಮಾಡಿದಲ್ಲಿ ಎಲ್ಲ ಸಮುದಾಯಗಳು, ನಗರಗಳು ಉತ್ತಮ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹೇಳಿದರು.

ಉತ್ಸವದ ಕಾರ್ಯವನ್ನು 50 ವಿವಿಧ ಸಂಘ ಸಂಸ್ಥೆಗಳು ನೇತೃತ್ವ ವಹಿಸಿರುವುದು ಮಥುರಾ ಗೋಪಿನಾಥ್ ಅವರ ಬಗ್ಗೆ ಇರುವ ಅಭಿಮಾನವಾಗಿದೆ. ಕಾರ್ಯಕ್ರಮ ಸಮಾಜದಲ್ಲಿ ಸೇವೆಯ ಕಾರ್ಯಕ್ಕೆ ನಾಂದಿ ಹಾಡಿ ಹಲವರ ಮನ ಪರಿವರ್ತನೆ ಮಾಡಲಿದೆ ಎಂದು ತಿಳಿಸಿದರು.

ರಜತ ಮಹೋತ್ಸವ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ಶಿವಮೊಗ್ಗ ಜಿಲ್ಲೆಯ 80 ಪ್ರವಾಸಿ ತಾಣಗಳನ್ನು ಸರ್ಕಾರ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲು ಸರ್ಕಾರಕ್ಕೆ ವರದಿ ಸಲ್ಲಿಸಿ ಅನುಷ್ಠಾನ ಮಾಡಲು ಪ್ರಯತ್ನಿಸಲಾಗುವುದು ಎಂದು‌ ವಿವರಿಸಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ಮಥುರಾ ಪಾರಡೈಸ್ ಮಾಲೀಕ ಎನ್.ಗೋಪಿನಾಥ್ ಹಾಗೂ ಡಾ. ಲಕ್ಷ್ಮೀದೇವಿ ಗೋಪಿನಾಥ್ ಅವರಿಗೆ ರಜತೋತ್ಸವ ಸಮಿತಿಯಿಂದ ಸನ್ಮಾನಿಸಲಾಯಿತು. ಶಿವಮೊಗ್ಗ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಶಂಕರನಾರಾಯಣ ಹೊಳ್ಳ, ವಿರೇಂದ್ರ ಕಾಮತ್, ಜಿ.ವಿಜಯಕುಮಾರ್, ಅ.ನಾ.ವಿಜಯೇಂದ್ರ ರಾವ್, ನಾಗಭೂಷಣ್, ಕೆ.ಜಿ.ಕೃಷ್ಣಾನಂದ, ಎನ್.ರಾಜೇಂದ್ರ, ಮೋಹನ್, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!