ಡಿವಿಎಸ್ ಸ್ವತಂತ್ರ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ
ಶಿವಮೊಗ್ಗ | 19 ಆಗಸ್ಟ್ 2024 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಶಿವಮೊಗ್ಗ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಪದವಿಪೂರ್ವ ( ಸ್ವತಂತ್ರ ) ಕಾಲೇಜು ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಶನಿವಾರ ಮತ್ತು ಭಾನುವಾರ ಆಯೋಜಿಸಿದ್ದ ತಾಲೂಕು ಮಟ್ಟದ ಕ್ರೀಡಾಕೂಟದ ಅಥ್ಲೆಟಿಕ್ಸ್ ವಿಭಾಗಗಳಲ್ಲಿ ಅಸಾಮಾನ್ಯ ಸಾಧನೆ ಮಾಡುವ ಮೂಲಕ ವಿವಿಧ ಸ್ಪರ್ಧೆಗಳಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಗೆಲುವು ಸಾಧಿಸಿದ್ದಾರೆ. ದೈಹಿಕ ಶಿಕ್ಷಕ ಎನ್.ಮಧು ಹಾಗೂ ಕಾಲೇಜಿನ ಕ್ರೀಡಾಪಟುಗಳಿಗೆ ಡಿವಿಎಸ್ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ, ಕಾರ್ಯದರ್ಶಿ ಎಸ್.ರಾಜಶೇಖರ್, ಸ್ವತಂತ್ರ ಪಿಯು ಕಾಲೇಜಿನ ಪ್ರಾಚಾರ್ಯ ಎ.ಇ.ರಾಜಶೇಖರ್ ಹಾಗೂ ಕಾಲೇಜಿನ ಸಿಬ್ಬಂದಿ ಶುಭಕೋರಿದ್ದಾರೆ.
ಬಾಲಕರ ವಿಭಾಗದ ಬೆಸ್ಟ್ ಅಥ್ಲೀಟ್, ಬಾಲಕರ ವಿಭಾಗದ ಸಮಗ್ರ ಪ್ರಶಸ್ತಿ ಹಾಗೂ ಬಾಲಕಿಯರ ವಿಭಾಗದ ಸಮಗ್ರ ಪ್ರಶಸ್ತಿಗಳನ್ನು ಕ್ರೀಡಾಕೂಟದಲ್ಲಿ ಡಿವಿಎಸ್ ಪದವಿಪೂರ್ವ ( ಸ್ವತಂತ್ರ ) ಕಾಲೇಜು ತನ್ನದಾಗಿಸಿಕೊಂಡಿದೆ. ಉತ್ತಮ ಪ್ರದರ್ಶನ ನೀಡಿದ ಕಾಲೇಜಿನ ತಂಡ ವಾಲಿಬಾಲ್ ವಿನ್ನರ್ ಆಗಿ ಹೊರಹೊಮ್ಮಿದೆ.
ಬಾಲಕರ ವಿಭಾಗದಲ್ಲಿ 400 ಮೀ ಓಟದಲ್ಲಿ ಪ್ರಥಮ, ದ್ವಿತೀಯ ಸ್ಥಾನ, 800 ಮೀ ಓಟದಲ್ಲಿ ಪ್ರಥಮ, 1500 ಮೀ ಓಟದಲ್ಲಿ ದ್ವಿತೀಯ, 4*400 ಮೀ ಓಟದಲ್ಲಿ ಪ್ರಥಮ, 4*100 ಮೀ ಓಟದಲ್ಲಿ ಪ್ರಥಮ, ಉದ್ದ ಜಿಗಿತದಲ್ಲಿ ಪ್ರಥಮ, ಟ್ರಿಪಲ್ ಜಂಪ್‌ನಲ್ಲಿ ಪ್ರಥಮ, ಎತ್ತರ ಜಿಗಿತದಲ್ಲಿ ಪ್ರಥಮ, 100 ಮೀ ಹರ್ಡಲ್ಸ್ ನಲ್ಲಿ ಪ್ರಥಮ, 400 ಮೀ ಹರ್ಡಲ್ಸ್ ನಲ್ಲಿ ಪ್ರಥಮ, ಶಾಟ್‌ಪುಟ್‌ನಲ್ಲಿ ಪ್ರಥಮ, 200 ಮೀ ಓಟದಲ್ಲಿ ತೃತೀಯ ಸ್ಥಾನ ಗಳಿಸಿದೆ.
ಬಾಲಕಿಯರ ವಿಭಾಗದಲ್ಲಿ 400 ಮೀ ಓಟದಲ್ಲಿ ಪ್ರಥಮ, ದ್ವಿತೀಯ ಸ್ಥಾನ, 200 ಮೀ ಓಟದಲ್ಲಿ ಪ್ರಥಮ, ದ್ವಿತೀಯ, 100 ಮೀ ಓಟದಲ್ಲಿ ಪ್ರಥಮ, 110 ಮೀ ಹರ್ಡಲ್ಸ್ ನಲ್ಲಿ ದ್ವಿತೀಯ, 400 ಮೀ ಹರ್ಡಲ್ಸ್ ನಲ್ಲಿ ದ್ವಿತೀಯ, 4*400 ಮೀ ಓಟದಲ್ಲಿ ಪ್ರಥಮ, 4*100 ಮೀ ಓಟದಲ್ಲಿ ಪ್ರಥಮ ಹಾಗೂ ಯಾಮರ್ ಥ್ರೋನಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ಡಿವಿಎಸ್ ಪದವಿಪೂರ್ವ ( ಸ್ವತಂತ್ರ ) ಕಾಲೇಜಿನ ಕ್ರೀಡಾಪಟುಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿರುವುದಕ್ಕೆ ಕಾಲೇಜಿನ ಆಡಳಿತ ಮಂಡಳಿ ಅಭಿನಂದಿಸಿದೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/