ಯುವಜನರಿಗೆ ಶ್ರೇಷ್ಠ ಪರಂಪರೆ ಅರಿವು ಮೂಡಿಸಿ

ಯುವಜನರಿಗೆ ಶ್ರೇಷ್ಠ ಪರಂಪರೆ ಅರಿವು ಮೂಡಿಸಿ

ಶಿವಮೊಗ್ಗ | 30 ಆಗಸ್ಟ್‌ 2024 | ಡಿಜಿ ಮಲೆನಾಡು.ಕಾಂ

ದೇಶದ ಶ್ರೇಷ್ಠ ಸಾಂಸ್ಕೃತಿಕ ಪರಂಪರೆ ಮಹತ್ವವನ್ನು ಯುವಜನರಿಗೆ ತಿಳಿಸಬೇಕಾದ ಅವಶ್ಯಕತೆ ಇದ್ದು, ಸಂಸ್ಕೃತಿ ಆಚರಣೆಗಳನ್ನು ಮಕ್ಕಳಿಗೆ ಕಲಿಸಬೇಕಿದೆ ಎಂದು ಹೊಸನಗರ ಮೂಲೆಗದ್ದೆ ಸದಾಶಿವ ಆಶ್ರಮದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ ಅಭಿಪ್ರಾಯಪಟ್ಟರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಹೊಸನಗರದ ಮೂಲೆಗದ್ದೆ ಸದಾಶಿವ ಆಶ್ರಮದಲ್ಲಿ ಶಿವಮೊಗ್ಗ ಭಜನಾ ಪರಿಷತ್, ಭಜನಾ ಮಂಡಳಿ, ಸಮನ್ವಯ ಟ್ರಸ್ಟ್ ಪದಾಧಿಕಾರಿಗಳು ಹಾಗೂ ಭಕ್ತರಿಂದ ಆಯೋಜಿಸಿದ್ದ ಲಲಿತಾ ಸಹಸ್ರನಾಮ ಮತ್ತು ಶ್ರಾವಣ ವಿಶೇಷ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಭಾರತೀಯ ಮೌಲ್ಯಯುತ ಆಚರಣೆಗಳಿಂದ ಇಂದಿನ ಯುವಪೀಳಿಗೆ ದೂರಾಗುತ್ತಿದ್ದಾರೆ. ಮಕ್ಕಳಲ್ಲಿ ಧಾರ್ಮಿಕ ಚಿಂತನೆ ಮೂಡಿಸದಿದ್ದರೆ ಮುಂದಿನ ದಿನಗಳಲ್ಲಿ ಕಷ್ಟವಾಗಲಿದೆ. ಸನಾತನ ಸಂಸ್ಕೃತಿ ಆಚರಣೆಗಳನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ ಜವಾಬ್ದಾರಿ ಪಾಲಕರ ಮೇಲಿದೆ ಎಂದು ತಿಳಿಸಿದರು.

ಭಾರತ ದೇಶ ವಿಶ್ವದಲ್ಲಿಯೇ ವಿಶೇಷ ಸ್ಥಾನಮಾನ ಹೊಂದಿದ್ದು, ಶ್ರೇಷ್ಠ ಮೌಲ್ಯಯುತ ಐತಿಹಾಸಿಕ ಪರಂಪರೆ ಹಿನ್ನೆಲೆ ಹೊಂದಿರುವ ಕಾರಣಕ್ಕೆ ಭಾರತ ದೇಶವನ್ನು ವಿಶೇಷ ಗೌರವದಿಂದ ನೋಡುತ್ತಾರೆ. ಸಾಂಸ್ಕೃತಿಕ ಹಾಗೂ ಐತಿಹಾಸಿಕ ಮಹತ್ವದ ಸಂಗತಿಗಳನ್ನು ಮಕ್ಕಳಿಗೆ ತಿಳಿಸಬೇಕು ಎಂದರು. ಶ್ರಾವಣ ಮಾಸ ವಿಶೇಷ ತಿಂಗಳು ಆಗಿದ್ದು, ಧಾರ್ಮಿಕ ಆಚರಣೆಗಳಿಗೆ ವಿಶೇಷ ಪ್ರಾಶಸ್ತ್ಯ ನೀಡಲಾಗುತ್ತದೆ. ಶ್ರಾವಣ ಮಾಸದಲ್ಲಿನ ಧಾರ್ಮಿಕ ಕಾರ್ಯಗಳು ಸೇರಿದಂತೆ ಮನೆಗಳಲ್ಲಿ ದಿನನಿತ್ಯ ಪಾಲಿಸುವ ಪೂಜೆಯ ಕ್ರಮಗಳನ್ನು ಮಕ್ಕಳಿಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ಲಲಿತ ಸಹಸ್ರನಾಮ ಪಾರಾಯಣದಲ್ಲಿ ನೂರಾರು ಮಹಿಳೆಯರು ಭಾಗವಹಿಸಿದ್ದರು. ಕೌಶಲ್ಯ ಅಭಿವೃದ್ಧಿ ಅಧಿಕಾರಿ ಸುರೇಶ್, ಸಹಾಯಕ ನಿರ್ದೇಶಕ ಟೀಕ್ಯಾನಾಯ್ಕ್, ಭಜನಾ ಪರಿಷತ್ ಮುಖ್ಯಸ್ಥ ಶಬರೀಶ್ ಕಣ್ಣನ್, ಸಮನ್ವಯ ಟ್ರಸ್ಟ್ ಅಧ್ಯಕ್ಷೆ ಗಿರಿಜಾದೇವಿ, ನಿರ್ವಾಹಕ ನಿರ್ದೇಶಕ ಸಮನ್ವಯ ಕಾಶಿ ಮತ್ತಿತರರು ಪಾಲ್ಗೊಂಡಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!