ಸತ್ವಯುತ ಸಿನಿಮಾ ರೂಪುಗೊಳ್ಳಲು ಇತಿಹಾಸದ ಸಿನಿಮಾಗಳು ಆಶಾಕಿರಣ

ಸತ್ವಯುತ ಸಿನಿಮಾ ರೂಪುಗೊಳ್ಳಲು ಇತಿಹಾಸದ ಸಿನಿಮಾಗಳು ಆಶಾಕಿರಣ

ಶಿವಮೊಗ್ಗ | 17 ಸೆಪ್ಟೆಂಬರ್‌ 2024 | ಡಿಜಿ ಮಲೆನಾಡು.ಕಾಂ

ಹೊಸ ತಲೆಮಾರಿಗೆ ಅವಶ್ಯಕತೆಯಿರುವ ಸತ್ವಯುತ ಸಿನಿಮಾಗಳು ರೂಪುಗೊಳ್ಳಲು ಇತಿಹಾಸದ ಸಿನಿಮಾಗಳು ಆಶಾಕಿರಣ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ, ಸಿನಿಮೊಗೆ ಶಿವಮೊಗ್ಗ ಚಿತ್ರ ಸಮಾಜ, ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಿನಿಮಾ ವಸ್ತು ನೋಡುವ ಬಗೆ ಮತ್ತು ಶಿಕ್ಷಣ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಸಮಾಜಕ್ಕೆ ಶಿಕ್ಷಣ ನೀಡುತ್ತಿದ್ದ ಅಂದಿನ ಸಿನಿಮಾಗಳು ಸದಾ ಸ್ಮರಣೀಯ. ತುಂಬು ಕುಟುಂಬದ ಅವಶ್ಯಕತೆ, ವ್ಯಕ್ತಿತ್ವ ವಿಕಸನ, ಸಮಾಜಕ್ಕೆ ಕೊಡುಗೆ ನೀಡುವಂತಹ ಪ್ರೇರಣೆ ನೀಡುತ್ತಿದ್ದ ಸಿನಿಮಾಗಳು ಇತಿಹಾಸದ ಪುಟಗಳಲ್ಲಿ ಸೇರಿಹೋಗಿದೆ. ಇಂದು ಕುಟುಂಬ ಸಹಿತ ಸಿನಿಮಾಗಳು ನೋಡಲು ಮುಜುಗರವಾಗುವ ಸಂದರ್ಭ ಸೃಷ್ಟಿಯಾಗುತ್ತಿದೆ ಎಂದು ತಿಳಿಸಿದರು.

ಸಿನಿಮೊಗೆ ಶಿವಮೊಗ್ಗ ಚಿತ್ರಸಮಾಜ  ಸಂಚಾಲಕ ಡಾ. ಎಚ್.ಎಸ್.ನಾಗಭೂಷಣ್ ಮಾತನಾಡಿ, ಸಿನಿಮಾ‌ ಶೈಕ್ಷಣಿಕ ಚೌಕಟ್ಟಿಗೆ ಬಂದಿದೆ. ಸಿನಿಮಾ ನೋಡುವ ಆನಂದಿಸುವ ಹೊರತಾಗಿ ಅಧ್ಯಯನ ನಡೆಸಬೇಕಾದ ಅವಶ್ಯಕತೆಯಿದೆ. ಅನೇಕ ಜನಪ್ರಿಯ ಸಿನಿಮಾಗಳು ಅಧ್ಯಯನ ಮತ್ತು ವಿಶ್ಲೇಷಣೆ ನಡೆಯುವುದೇ ಇಲ್ಲ ಎಂದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎನ್.ಕೆ.ಚಿದಾನಂದ, ರಾಷ್ಟ್ರೀಯ ಶಿಕ್ಷಣ ಸಮಿತಿ ‌ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಸಿನಿಮೊಗೆ ಶಿವಮೊಗ್ಗ ಚಿತ್ರ ಸಮಾಜ ಸಂಚಾಲಕಎಚ್.ಯು. ವೈದ್ಯನಾಥ, ಮೈತ್ರಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಶಾಲಿನಿ, ಅಲ್ ಮೊಹಮದ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಸೋಮಶೇಖರ್, ಕುವೆಂಪು ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯ ಜಿ.ಮಧು, ಸಂಯೋಜಕಿ ಡಾ. ಇ.ಲಾವಣ್ಯ ಉಪಸ್ಥಿತರಿದ್ದರು. ಗಿರೀಶ್ ಕಾಸರವಳ್ಳಿ ನಿರ್ದೇಶನದ ಕನಸೆಂಬ ಕುದುರೆಯನ್ನೇರಿ ಮತ್ತು ಕೂರ್ಮಾವತಾರ ಚಲನಚಿತ್ರಗಳು ಪ್ರದರ್ಶನಗೊಂಡಿತು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!