ಪ್ರಸ್ತುತ ಸಿನಿಮಾಗಳಲ್ಲಿ ಕಥೆ ನಿರ್ಲಕ್ಷ್ಯ, ಕುವೆಂಪು ವಿವಿಯಲ್ಲಿ 15ನೇ ಸಹ್ಯಾದ್ರಿ ಸಿನಿಮೋತ್ಸವ

ಪ್ರಸ್ತುತ ಸಿನಿಮಾಗಳಲ್ಲಿ ಕಥೆ ನಿರ್ಲಕ್ಷ್ಯ, ಕುವೆಂಪು ವಿವಿಯಲ್ಲಿ 15ನೇ ಸಹ್ಯಾದ್ರಿ ಸಿನಿಮೋತ್ಸವ

ಶಿವಮೊಗ್ಗ | 18 ಸೆಪ್ಟೆಂಬರ್‌ 2024 | ಡಿಜಿ ಮಲೆನಾಡು.ಕಾಂ

ಸಮಾಜಕ್ಕೆ ಮಾದರಿಯಾಗಬಲ್ಲ ಪಾತ್ರಗಳ ಕೊರತೆಯೇ ಆಧುನಿಕ ಸಿನಿಮಾಗಳ ಪ್ರಮುಖ ಸಮಸ್ಯೆಯಾಗಿದೆ ಎಂದು ಕುವೆಂಪು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್.ಎಂ.ಗೋಪಿನಾಥ್ ಅಭಿಪ್ರಾಯಪಟ್ಟರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಆಯೋಜಿಸಿರುವ 15ನೇ ಸಹ್ಯಾದ್ರಿ ಚಲನಚಿತ್ರೋತ್ಸವದಲ್ಲಿ ಮಾತನಾಡಿ, ಯುವಜನರಿಗೆ ಸ್ಫೂರ್ತಿ ನೀಡುವ ಮಾದರಿ ಸಿನಿಮಾಗಳ ನಿರ್ಮಾಣ ಅಗತ್ಯವಿದೆ ಎಂದು ತಿಳಿಸಿದರು.

ಶಿವಮೊಗ್ಗ ಚಿತ್ರ ಸಮಾಜ ಸಿನಿಮೊಗೆ ಸಂಚಾಲಕ, ಪತ್ರಕರ್ತ ಎಚ್.ಯು. ವೈದ್ಯನಾಥ ಮಾತನಾಡಿ, ಇಂದಿನ ಸಿನಿಮಾಗಳಲ್ಲಿ ನಾಯಕ, ನಾಯಕಿಯರ ವಿಜೃಂಭಣೆ ಅಧಿಕಗೊಂಡು ಕಥೆ ಗೌಣವಾಗುತ್ತಿದೆ. ಉತ್ತಮ ಬದುಕಿಗೆ ಬೇಕಾದ ಆದರ್ಶಗಳನ್ನು ಬದಿಗೆ ಸರಿಸಲಾಗುತ್ತಿದೆ ಎಂದರು.

ಸಿನಿಮಾ ಮನರಂಜನೆ ಸರಕು ಮಾತ್ರವಲ್ಲ. ಸಾಮಾಜಿಕ, ಸಾಂಸ್ಕೃತಿಕ ಬದುಕು ದಾಖಲಿಸುವ ಮಾಧ್ಯಮ ರೂಪ. ಅಧ್ಯಯನ ದೃಷ್ಟಿಯಿಂದ ಕಾಣಬೇಕು. ಆಚರಣೆ ತೋರಿಕೆಗಿಂತ, ಪಾತ್ರಗಳ ಅನುಭಾವ, ಬದುಕಿನ ಆಳ, ತುಮುಲಗಳನ್ನು ದಾಟಿಸಿಕೊಳ್ಳುವ ಪ್ರಯತ್ನದಲ್ಲಿ ಸಿನಿಮಾ ವೀಕ್ಷಣೆ ಮಾಡಬೇಕು ಎಂದು ಸಲಹೆ ನೀಡಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ವಿಭಾಗದ ಪ್ರೊ. ಎಂ.ಆರ್. ಸತ್ಯಪ್ರಕಾಶ್, ಅಧ್ಯಾಪಕರಾದ ಪ್ರೊ. ವರ್ಗೀಸ್, ಪ್ರೊ. ಸತೀಶ್ ಕುಮಾರ್ ಉಪಸ್ಥಿತರಿದ್ದರು. ಸಿನಿಮೋತ್ಸವದಲ್ಲಿ ವಿವಿಧ ವಿಭಾಗಗಳ ನೂರಕ್ಕೂ ಅಧಿಕ ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು, ಅಧ್ಯಾಪಕರು, ಸಿಬ್ಬಂದಿ ವರ್ಗ ಹಾಜರಿದ್ದರು. ನಿರಾಶ್ರಿತರ ಬಿಕ್ಕಟ್ಟು ವಿಷಯ ಕುರಿತು ಸೆ. 17ರಿಂದ 21ರವರೆಗೆ ವಿವಿಯಲ್ಲಿಸಹ್ಯಾದ್ರು ಚಲನಚಿತ್ರೋತ್ಸವ ನಡೆಯಲಿದೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!