ತಂತ್ರಜ್ಞಾನ ಆಧಾರಿತ ಕೌಶಲ್ಯತೆ ಅತ್ಯಂತ ಅವಶ್ಯಕ, ಜೆಎನ್ಎನ್ ಸಿಇ ಸಿಗ್ಮಾ 2024
ಶಿವಮೊಗ್ಗ | 9 ನವೆಂಬರ್ 2024 | ಡಿಜಿ ಮಲೆನಾಡು.ಕಾಂ
ತಂತ್ರಜ್ಞಾನದಿಂದ ಸಿಗುವ ಆವಿಷ್ಕಾರಿ ವಿಚಾರಗಳನ್ನು ಬಳಸಿಕೊಂಡು ಕೌಶಲ್ಯತೆ ವೃದ್ಧಿಸಿಕೊಳ್ಳುವತ್ತ ಯುವ ಸಮೂಹ ಹೆಚ್ಚು ಕೇಂದ್ರಿಕರಿಸಬೇಕು ಎಂದು ಬೆಂಗಳೂರಿನ ಇಂಟಲ್ ಟೆಕ್ನಾಲಜಿಸ್ ಸಂಸ್ಥೆಯ ಸಿಸ್ಟಂ ಪ್ರೊಗ್ರಾಮರ್ ಎಂ.ಎ.ಶ್ರೀವತ್ಸ ಅಭಿಪ್ರಾಯಪಟ್ಟರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ನಗರದ ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದಿಂದ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ತಾಂತ್ರಿಕ ವಿಚಾರಸಂಕಿರಣ ‘ಸಿಗ್ಮಾ 2024’ ಉದ್ಘಾಟಿಸಿ ಮಾತನಾಡಿದರು.
ತಂತ್ರಜ್ಞಾನ ಚಾಲಿತ ಜಗತ್ತಿನಲ್ಲಿ ಸ್ವತಂತ್ರ ಚಿಂತನೆ ಮಹತ್ವವನ್ನು ಯುವ ಸಮೂಹ ಅರಿಯಬೇಕು. ನಾವೀನ್ಯಯುತ ಪ್ರಾಯೋಗಿಕ ಕಲಿಕೆ ಹಾಗೂ ಜ್ಞಾನದ ವಿಕಸನಕ್ಕೆ ಪುಷ್ಟಿ ನೀಡಲು ಇಂತಹ ವಿಚಾರ ಸಂಕಿರಣಗಳು ಬೇಕಿದೆ ಎಂದು ತಿಳಿಸಿದರು.
ಸ್ವಯಂ ಸಂಶೋಧನೆ ಮೂಲಕ ಪಡೆದುಕೊಂಡ ವೈಯಕ್ತಿಕ ಜ್ಞಾನವು ಹೆಚ್ಚು ಕಾಲ ಉಳಿಯುತ್ತದೆ. ನಿಜವಾದ ಪರಿಣತಿಗೆ ಅಡಿಪಾಯವಾಗಿ ಕಾರ್ಯ ನಿರ್ವಹಿಸುತ್ತದೆ. ತಂತ್ರಜ್ಞಾನದ ಜತೆಗೆ ನಮ್ಮಲ್ಲಿನ ನಿಜವಾದ ಸೃಜನಶೀಲ ಕೌಶಲ್ಯತೆಗಳು ನಮ್ಮ ಯಶಸ್ಸಿನ ಹಾದಿಯಾಗಿ ತೆರೆದುಕೊಳ್ಳಲಿದೆ.
| ಎಂ.ಎ.ಶ್ರೀವತ್ಸ
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯದಲ್ಲಿ ಗುಣಮಟ್ಟದ ಉತ್ಪನ್ನಗಳ ಆವಿಷ್ಕಾರ ಮತ್ತು ನಿರ್ವಹಣೆಯತ್ತ ಕೇಂದ್ರಿಕರಿಸಬೇಕು. ಈ ಹಿನ್ನಲೆಯಲ್ಲಿ ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ಉನ್ನತಿಗೆ ಇಂತಹ ವೇದಿಕೆಗಳನ್ನು ಪೂರಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ಕಾಲೇಜಿನ ಪ್ರಾಚಾರ್ಯ ಡಾ. ವೈ.ವಿಜಯಕುಮಾರ್, ಶೈಕ್ಷಣಿಕ ಡೀನ್ ಡಾ. ಪಿ.ಮಂಜುನಾಥ, ಸಂಶೋಧನಾ ಡೀನ್ ಡಾ. ಎಸ್.ವಿ.ಸತ್ಯನಾರಾಯಣ, ಡಾ. ಉಷಾದೇವಿ, ಕಾರ್ಯಕ್ರಮ ಸಂಯೋಜಕರಾದ ಡಾ. ಶಶಿಕಿರಣ್.ಎಸ್, ಡಾ. ಅಶ್ವಿನಿ.ಎಸ್.ಆರ್, ವಿದ್ಯಾರ್ಥಿ ಸಂಯೋಜಕರಾದ ಶ್ರೀನಂದ.ಎಸ್, ವೈಷ್ಣವಿ, ವಂದನ.ಆರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ರಾಜ್ಯದ ವಿವಿಧ ಜಿಲ್ಲೆಗಳ 45ಕ್ಕೂ ಹೆಚ್ಚು ಇಂಜಿನಿಯರಿಂಗ್ ವಿದ್ಯಾರ್ಥಿಗಳ ತಂಡ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ರೊಬೊ ರೇಸ್, ಹ್ಯಾಕಥಾನ್, ಲೈನ್ ಫಾಲೊವರ್, ಅರ್ಡಿನೊ ಕ್ಲಾಷ್ ನಂತಹ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಉತ್ಸುಕರಾಗಿ ಭಾಗವಹಿಸಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/