ಬದುಕಿನಲ್ಲಿ ಸೃಜನಶೀಲತೆ ಸದಾ ಇರಲಿ, ಎನ್ಇಎಸ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜು ಕೌಶಲ್ಯ 2024 ಉದ್ಘಾಟನೆ

ಬದುಕಿನಲ್ಲಿ ಸೃಜನಶೀಲತೆ ಸದಾ ಇರಲಿ, ಎನ್ಇಎಸ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜು ಕೌಶಲ್ಯ 2024 ಉದ್ಘಾಟನೆ

ಶಿವಮೊಗ್ಗ | 17 ನವೆಂಬರ್‌ 2024 | ಡಿಜಿ ಮಲೆನಾಡು.ಕಾಂ

ಕಲೆ, ಸಾಹಿತ್ಯ, ಸಂಸ್ಕೃತಿ ನಮ್ಮ ದೇಶದ ಅಸ್ಮಿತೆ. ದೇಶದಲ್ಲಿ ಪ್ರಾಚೀನ ಕಾಲದಿಂದಲೂ ಶಿಕ್ಷಣಕ್ಕೆ ಸದಾ ಶಕ್ತಿ ತುಂಬುವ ಕಾರ್ಯ ನಡೆಯುತ್ತಿದೆ. ಸಾಂಸ್ಕೃತಿಕ ರಾಷ್ಟ್ರದಲ್ಲಿ ಬಾಳುತ್ತಿರುವ ನಮ್ಮಲ್ಲಿ ಸೃಜನಶೀಲತೆ ಎಂಬುದು ಸದಾ ಪ್ರಕಾಶಿಸುತ್ತಿರಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಾಂಸ್ಕೃತಿಕ  ಮತ್ತು ನಿರ್ವಹಣಾ ಘಟಕಗಳ ವತಿಯಿಂದ ವಿವಿಧ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ರಾಜ್ಯಮಟ್ಟದ ಅಂತರ ಕಾಲೇಜು ಸ್ಪರ್ಧೆ ‘ಕೌಶಲ್ಯ-2024’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪಠ್ಯೇತರ ಚಟುವಟಿಕೆಗಳಿಗೆ ಇಂದಿನ ದಿನಗಳಲ್ಲಿ ಹೆಚ್ಚು ಮಹತ್ವ ಸಿಗುತ್ತಿದೆ.‌ ಅಂತಹ ಚಟುವಟಿಕೆಗಳು ನಮ್ಮಲ್ಲಿ ಅದ್ಭುತ ಆತ್ಮವಿಶ್ವಾಸ ಮೂಡಿಸಲಿದ್ದು, ಶಕ್ತಿಯುತ ವ್ಯಕ್ತಿತ್ವವಾಗಿ ಹೊರಹೊಮ್ಮಲು ಪ್ರೇರಕವಾಗಲಿದೆ ಎಂದು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ಡಿ.ಎಸ್.ಅರುಣ್ ಮಾತನಾಡಿ, ಶಿಕ್ಷಣದ ಜತೆಗೆ ಸೃಜನಶೀಲತೆ ಬೆಳೆಸುವ ಅನೇಕ ವೇದಿಕೆಗಳು ನಿರ್ಮಾಣಗೊಳ್ಳುತ್ತಿರುವುದು ಸಂತೋಷದ ಸಂಗತಿ. ಮಕ್ಕಳ ಆಸಕ್ತ ವಿಷಯಗಳನ್ನು ಅಧ್ಯಯನ ಮಾಡುವಂತಹ ಹಾಗೂ ಹೆಚ್ಚು ತೊಡಗಿಸಿಕೊಳ್ಳವ ಅನೇಕ ಅವಕಾಶ ದೊರೆಯುತ್ತಿದೆ ಎಂದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿ ಡಾ. ಪಿ.ನಾರಾಯಣ್, ನಿರ್ದೇಶಕ ಟಿ.ಆರ್.ಅಶ್ವಥ ನಾರಾಯಣ ಶ್ರೇಷ್ಟಿ, ಪ್ರಾಚಾರ್ಯ ಡಾ.  ಬಿ.ಎಸ್.ಶಿವಪ್ರಸಾದ್ ಉಪಸ್ಥಿತರಿದ್ದರು. ವಿವಿಧ ಜಿಲ್ಲೆಗಳಿಂದ 24ಕ್ಕೂ ಹೆಚ್ಚು ತಂಡಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಬೆಸ್ಟ್ ಸಿಇಓ, ಮೊಬೈಲ್ ಫೋಟೋಗ್ರಫಿ, ಸಾಮಾನ್ಯ ಜ್ಞಾನ, ಸಂಯೋಜಿತ ಆಟಗಳು, ಹಾಡು ಮತ್ತು ನೃತ್ಯ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಉತ್ಸುಕರಾಗಿ ಭಾಗವಹಿಸಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

ತಂತ್ರಜ್ಞಾನ ಆಧಾರಿತ ಕೌಶಲ್ಯತೆ ಅತ್ಯಂತ ಅವಶ್ಯಕ, ಜೆಎನ್ಎನ್ ಸಿಇ ಸಿಗ್ಮಾ 2024

digimalenadu

ಶಿವಮೊಗ್ಗ
error: Content is protected !!