ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ದಾನಿಗಳ ಪಾತ್ರ ಮಹತ್ತರ, ಅಮೃತ್ ನೋನಿ ಅಂಗಸಂಸ್ಥೆಯಿಂದ ಕಟ್ಟಡ ನಿರ್ಮಾಣ

ಶಿವಮೊಗ್ಗ | 27 ಡಿಸೆಂಬರ್ 2024 | ಡಿಜಿ ಮಲೆನಾಡು.ಕಾಂ
ಸರ್ಕಾರಿ ಶಾಲೆಗಳ ಉಳಿಸಿ ಬೆಳೆಸುವಲ್ಲಿ ದಾನಿಗಳ ಪಾತ್ರ ಮಹತ್ತರ ಎಂದು ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ಅಮೃತ್ ನೋನಿ ಅಂಗಸಂಸ್ಥೆಯಾದ ವ್ಯಾಲ್ಯೂ ಸೋಶಿಯಲ್ ವೇಲ್ಫೇರ್ ಟ್ರಸ್ಟ್ ವತಿಯಿಂದ 25 ಲಕ್ಷ ರೂ. ವೆಚ್ಚದಲ್ಲಿ ತಾಲೂಕಿನ ರಾಮೇನಕೊಪ್ಪದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ನಿರ್ಮಾಣದ ಗುದ್ದಲಿ ಪೂಜೆ ಕಾರ್ಯಕ್ರಮ ಮತ್ತು ದತ್ತು ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಾಜ್ಯಾದ್ಯಂತ ಇರುವ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಲು ದಾನಿಗಳು ಮುಂದೆ ಬರಬೇಕು. ಇಂತಹ ಸಮಾಜಮುಖಿ ಕಾರ್ಯಗಳಿಂದ ಸರ್ಕಾರಿ ಶಾಲೆಗಳನ್ನು ಉಳಿಸುವ ಜತೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗಲಿದೆ. ಸರ್ಕಾರಿ ಶಾಲೆಯಲ್ಲಿರುವ ಪ್ರತಿಭಾವಂತ ಮಕ್ಕಳಿಗೆ ಉತ್ತಮ ಅವಕಾಶ ಕಲ್ಪಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದರು.
ಅಮೃತ್ ನೋನಿ ಸಂಸ್ಥೆ ಮ್ಯಾನೇಜಿಂಗ್ ಡೈರೆಕ್ಟರ್ ಡಾ. ಎ.ಕೆ.ಶ್ರೀನಿವಾಸಮೂರ್ತಿ ಮಾತನಾಡಿ, ಅಮೃತ್ ನೋನಿ ಸಂಸ್ಥೆ ಭಾಗವಾಗಿರುವ ವ್ಯಾಲ್ಯೂ ಸೋಶಿಯಲ್ ವೇಲ್ಫೇರ್ ಟ್ರಸ್ಟ್ ಮೂಲಕ ರಾಮೇನಕೊಪ್ಪದಲ್ಲಿನ ಸರ್ಕಾರಿ ಶಾಲೆಯನ್ನು ಐದು ವರ್ಷಗಳ ಅವಧಿಗೆ ದತ್ತು ತೆಗೆದುಕೊಂಡಿದ್ದು, ಶಾಲೆ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಹೇಳಿದರು.
ರಾಮೇನಕೊಪ್ಪದಲ್ಲಿರುವ ಸರ್ಕಾರಿ ಶಾಲೆಯ ಕಟ್ಟಡದ ನಿರ್ಮಾಣವನ್ನು 25 ಲಕ್ಷ ರೂ. ವೆಚ್ಚದಲ್ಲಿ ನಮ್ಮ ಟ್ರಸ್ಟ್ ಮೂಲಕ ಮಾಡಲಾಗುತ್ತಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಒದಗಿಸುವುದು ಮುಖ್ಯ ಉದ್ದೇಶ. ಎಲ್ಲ ಮಕ್ಕಳಿಗೂ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ವ್ಯಾಲ್ಯೂ ಸೋಶಿಯಲ್ ವೇಲ್ಫೇರ್ ಟ್ರಸ್ಟ್ ಮೂಲಕ ಬಸವಾಪುರ ಶಾಲೆಗೆ ಅಗತ್ಯವಿರುವ ಮೂಲಸೌಕರ್ಯ ಒದಗಿಸಲಾಗಿದೆ. ರಾಮೇನಹಳ್ಳಿಯ ಉರ್ದು ಶಾಲೆಗೆ ಶೌಚಗೃಹ ಸೇರಿದಂತೆ ಮೂಲ ಸೌಕರ್ಯದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದು, ಅಗತ್ಯ ವ್ಯವಸ್ಥೆ ಮಾಡಲಾಗುವುದು ಎಂದರು.
ಅಮೃತ್ ನೋನಿ ಸಂಸ್ಥೆಯ ಡೈರೆಕ್ಟರ್ ಅಂಬುಜಾಕ್ಷಿ, ಮುಖ್ಯಸ್ಥ ಶಶಿಕಾಂತ್ ನಾಡಿಗ್, ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್.ದತ್ತಾತ್ರಿ, ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್, ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್, ಅಗಸವಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ, ರಾಮೇನಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಸೋಮಶೇಖರಪ್ಪ ಮತ್ತಿತರರು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/
ಮನಸೂರೆಗೊಂಡ ರೊಬೊಗಳ ಜಿದ್ದಾಜಿದ್ದಿ, ಜೆಎನ್ಎನ್ಸಿಇ ಪ್ಲಾಸ್ಮಾ 2024 ಉದ್ಘಾಟನೆ