ಆರೋಗ್ಯವಂತ ಯುವಜನರು ರಕ್ತದಾನಕ್ಕೆ ಮುಂದಾಗಿ

Shivamogga ಶಿವಮೊಗ್ಗ | 30 ಜನವರಿ 2025 | ಡಿಜಿ ಮಲೆನಾಡು.ಕಾಂ
ರಕ್ತದಾನ ಅತ್ಯಂತ ಶ್ರೇಷ್ಠದಾನ ಆಗಿದ್ದು, ರಕ್ತದಾನದಿಂದ ಆತ್ಮತೃಪ್ತಿಯ ಜತೆಗೆ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಜೆಎಸಿ ವೈಸ್ ಚೇರ್ಮನ್ ಶೇಷಗಿರಿ ಡಿ.ಕೆ. ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ನಗರದ ಜೆಪಿಎನ್ ರಸ್ತೆಯಲ್ಲಿರುವ ರೆಡ್ ಕ್ರಾಸ್ ಸಂಜೀವಿನಿ ರಕ್ತನಿಧಿಯಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಶಿವಮೊಗ್ಗ ವತಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಕ್ತದಾನದಿಂದ ಜೀವ ಉಳಿಸಿದ ಪುಣ್ಯ ಲಭಿಸುತ್ತದೆ. ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡಲು ಮುಂದಾಗಬೇಕು ಎಂದು ತಿಳಿಸಿದರು.
ಜೆಸಿಐ ರಾಷ್ಟ್ರೀಯ ಸಂಯೋಜಕ ಸತೀಶ್ ಚಂದ್ರ ಮಾತನಾಡಿ, ರಕ್ತದ ಕೊರತೆ ಇರುವುದರಿಂದ ಸಾಕಷ್ಟು ಜನರು ಜೀವ ಕಳೆದುಕೊಳ್ಳುತ್ತಾರೆ. ರಕ್ತದ ಲಭ್ಯತೆ ಇದ್ದಲ್ಲಿ ತುರ್ತು ಸಂದರ್ಭದಲ್ಲಿರುವವರಿಗೆ ರಕ್ತ ಸಿಗುವ ಜತೆಯಲ್ಲಿ ಅಮೂಲ ಜೀವ ಉಳಿಯುತ್ತದೆ. ಯುವಜನರು ರಕ್ತದಾನ ಮಾಡಬೇಕು ಎಂದು ಹೇಳಿದರು.
ರಕ್ತದಾನ ಶಿಬಿರದ ಅಧ್ಯಕ್ಷತೆ ವಹಿಸಿದ್ದ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಜಿ.ಗಣೇಶ್ ಮಾತನಾಡಿ, ಅಧ್ಯಕ್ಷರಾಗಿ ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿದ್ದು, ವರ್ಷಪೂರ್ತಿ ಸಮಾಜಮುಖಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಿದ್ದು, ಮೊದಲ ಕಾರ್ಯಕ್ರಮವಾಗಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ರಕ್ತದಾನ ಮಾಡುವವುದರಿಂದ ಉತ್ತಮ ಆರೋಗ್ಯ ನಮ್ಮದಾಗುತ್ತದೆ. ಮುಂದಿನ ದಿನಗಳಲ್ಲಿ ಕಾಲೇಜುಗಳಲ್ಲಿ ರಕ್ತದ ಗುಂಪು ತಪಾಸಣೆ, ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ಪ್ರಥಮ ಬಾರಿಗೆ ರಕ್ತದಾನ ಮಾಡಿದ ಸುಮಂತ್ ನಾಯ್ಕ್, ಕುಮಾರ್, 25 ಬಾರಿ ರಕ್ತದಾನ ಮಾಡಿದ ಸುಮಂತ್ ಬಿ.ಟಿ., 56 ಬಾರಿ ರಕ್ತದಾನ ಮಾಡಿದ ಅಲ್ಲಬಕಸ್, 116 ಬಾರಿ ರಕ್ತದಾನ ಮಾಡಿದ ಧರಣೇಂದ್ರ ದಿನಕರ್ ಅವರನ್ನು ಅಭಿನಂದಿಸಲಾಯಿತು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ಮಾಜಿ ಅಧ್ಯಕ್ಷೆ ಬಿಂದು ವಿಜಯಕುಮಾರ್, ರೆಡ್‌ಕ್ರಾಸ್ ಸಂಸ್ಥೆ ನಿರ್ದೇಶಕ ನವೀನ್, ನವೀನ್ ಬಿಲ್ಗುಣಿ, ಡಾ. ರಮೇಶ್ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/
ರಾಷ್ಟ್ರೀಯ ಸ್ಪರ್ಶ್ ಕುಷ್ಠರೋಗ ಜಾಗೃತಿ ಆಂದೋಲನ, ಶಿವಮೊಗ್ಗದಲ್ಲಿ ಸೈಕಲ್ ಜಾಥಾ