ಮಕ್ಕಳ ಹಕ್ಕುಗಳ ರಕ್ಷಣೆ ಕಾಯ್ದೆ, ನಿಯಮಗಳ ಬಗ್ಗೆ ತಿಳಿದುಕೊಳ್ಳುವುದು ಮುಖ್ಯ

Shivamogga ಶಿವಮೊಗ್ಗ | 3 ಫೆಬ್ರವರಿ 2025 | ಡಿಜಿ ಮಲೆನಾಡು.ಕಾಂ
ಮಕ್ಕಳ ಮತ್ತು ಅವರ ಹಕ್ಕುಗಳ ರಕ್ಷಣೆ ಮಾಡಬೇಕಾದರೆ ಮುಖ್ಯವಾಗಿ ಮಕ್ಕಳ ಹಕ್ಕುಗಳ ರಕ್ಷಣೆ ಕಾಯ್ದೆ 2016 ಮತ್ತು ಮಕ್ಕಳ ರಕ್ಷಣೆ ನಿಯಮಗಳ ಬಗ್ಗೆ ತಿಳಿದುಕೊಳ್ಳುವುದು ಮುಖ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಅಪರ್ಣಾ ಎಂ ಕೊಳ್ಳ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ಜಿಲ್ಲಾಡಳಿತ, ಜಿಪಂ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದೊಂದಿಗೆ ‘ಶಾಲೆಯಲ್ಲಿದೆ ಶಿಕ್ಷಣದ ಜತೆ ರಕ್ಷಣೆ – ಆರ್ ಟಿ ಇ ಕಾಯ್ದೆ 2009 ಅನುಷ್ಠಾನ ಕುರಿತು ಜಿಲ್ಲಾ ಮಟ್ಟದ ಅಧಿಕಾರಿ, ಸಿಬ್ಬಂದಿಯೊಂದಿಗೆ ಬಾಲ ನ್ಯಾಯ ಮಂಡಳಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ರಾಜ್ಯದಲ್ಲೇ ಹೆಚ್ಚು ಬಾಲ್ಯ ವಿವಾಹ ಪ್ರಕರಣ ವರದಿಯಾಗುತ್ತಿರುವುದು ಆತಂಕಕಾರಿ. ಪೋಕ್ಸೋ ಮತ್ತು ಬಾಲ್ಯ ವಿವಾಹದ ಶೇ.90 ಮಕ್ಕಳು ಸರ್ಕಾರಿ ಶಾಲೆಗಳ ಮಕ್ಕಳಾಗಿರುವುದು ಕೂಡ ಕಳಕಳಕಾರಿ ಎಂದು ತಿಳಿಸಿದರು.
ಶಾಲೆಗಳಲ್ಲಿ ಮಕ್ಕಳ ರಕ್ಷಣಾ ನಿಯಮಗಳು ಸಮರ್ಪಕವಾಗಿ ಅನುಷ್ಠಾನ ಆಗುತ್ತಿಲ್ಲ. ಬಾಲ್ಯ ವಿವಾಹ ನಿಷೇಧ ಕಾಯ್ದೆ ಅನುಷ್ಠಾನದಲ್ಲಿ ಶಿಕ್ಷಣ ಇಲಾಖೆ ನೋಡಲ್ ಇಲಾಖೆಯಾಗಿದೆ. ಆದರೆ ಇಲಾಖೆಯಿಂದ ಈವರೆಗೆ ಒಂದು ಎಫ್‌ಐಆರ್ ಆಗಿಲ್ಲ. ಯಾವುದೇ ಮಗು ಶಾಲೆಗೆ ಬರುತ್ತಿಲ್ಲ ಅಥವಾ ಏನಾದರೂ ಬದಲಾವಣೆ ಆಗಿದೆ ಎಂದರೆ ಮೊದಲು ಶಿಕ್ಷಕರಿಗೆ ಗೊತ್ತಾಗುತ್ತದೆ. ಮಕ್ಕಳ ವಿಷಯದಲ್ಲಿ ಶಿಕ್ಷಕರ ಜವಾಬ್ದಾರಿ ಹೆಚ್ಚಿರುತ್ತದೆ. ಜಿಲ್ಲೆಯಲ್ಲಿ ಬಾಲ್ಯ ವಿವಾಹ ಆಗದಂತೆ ಶಿಕ್ಷಣ ಇಲಾಖೆ, ಸಂಸ್ಥೆಗಳು ಕ್ರಮ ವಹಿಸಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ ಮಾತನಾಡಿ, ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಶಿಕ್ಷಣ ಇಲಾಖೆ ಸಕ್ರಿಯವಾಗಿ ಕೆಲಸ ಮಾಡಬೇಕು. ಬಾಲ್ಯ ವಿವಾಹ ಮತ್ತು ಪೋಕ್ಸೋ ಪ್ರಕರಣ ತಗ್ಗಿಸಲು ಕೈಗೊಳ್ಳಬೇಕಾದ ಕ್ರಮದ ಕುರಿತು ಮುಕ್ತ ಚರ್ಚೆ ಆಗಬೇಕು ಎಂದು ತಿಳಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ಡಯಟ್ ಕಾಲೇಜಿನ ಉಪನ್ಯಾಸಕ ಹರಿಪ್ರಸಾದ್ ಜಿ.ವಿ, ಡಿಡಿಪಿಐ ಎಸ್.ಆರ್.ಮಂಜುನಾಥ್, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಆರ್.ಮಂಜುನಾಥ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ತಾಜುದ್ದೀನ್ ಖಾನ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿ, ಮುಖ್ಯಶಿಕ್ಷಕರು, ಬಿಆರ್‌ಸಿ, ಸಿಆರ್‌ಸಿ, ಅನುದಾನಿಕ ಶಾಲೆ ಶಿಕ್ಷಕರು ಹಾಜರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/