ರೋಟರಿ ಸಂಸ್ಥೆಯಿಂದ ನಿರಂತರ ಸಮಾಜಮುಖಿ ಕಾರ್ಯ

ಶಿವಮೊಗ್ಗ | 6 ಫೆಬ್ರವರಿ 2025 | ಡಿಜಿ ಮಲೆನಾಡು.ಕಾಂ
ರೋಟರಿ ಸಂಸ್ಥೆಯಲ್ಲಿ ನಿರಂತರ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬಂದಿದ್ದು, ಪ್ರಸ್ತುತ ರೋಟರಿ ಸಂಸ್ಥೆಯಲ್ಲಿ ಉನ್ನತ ಜವಾಬ್ದಾರಿ ದೊರೆತಿದೆ ಎಂದು ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ಶಿವಮೊಗ್ಗ ನಗರದ ಗೋಪಾಳ ಸೆಂಟ್ರಲ್ ಕ್ಲಬ್ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ಪ್ರಪಂಚದಲ್ಲಿ ಹೆಚ್ಚು ಸಾಮಾಜಿಕ ಹಾಗೂ ಮಾನವೀಯ ನೆಲೆಯಲ್ಲಿ ಸೇವೆ ಸಲ್ಲಿಸುವ ಸಂಸ್ಥೆಗಳಲ್ಲಿ ರೋಟರಿ ಸಂಸ್ಥೆ ಪ್ರಮುಖವಾಗಿದೆ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಸೇವಾ ಕಾರ್ಯಗಳನ್ನು ನಡೆಸಿದೆ ಎಂದು ತಿಳಿಸಿದರು.
ರೋಟರಿ ಜಿಲ್ಲಾ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ಮುಂದಿನ ದಿನಗಳಲ್ಲಿ ರೋಟರಿ ಜಿಲ್ಲೆ 3182ಅನ್ನು ಉನ್ನತ ಸ್ಥಾನಕ್ಕೆ ತೆಗೆದುಕೊಂಡು ಹೋಗುವ ಜವಾಬ್ದಾರಿ ನಿಯೋಜಿತ ಗವರ್ನರ್‌ಗಳ ಮೇಲಿದೆ ಎಂದು ತಿಳಿಸಿದರು.
ರೋಟರಿ ವಲಯ 11ರ ಸಹಾಯಕ ಗವರ್ನರ್ ಎಚ್.ಎಂ.ಸುರೇಶ್‌ಕುಮಾರ್ ಮಾತನಾಡಿ, ರೋಟರಿ ಸದಸ್ಯರ ಉತ್ತಮ ಕಾರ್ಯಗಳಿಂದ ರೋಟರಿ ಜಿಲ್ಲೆ 3182 ಎಲ್ಲ ಜಿಲ್ಲೆಗಳಿಗಿಂತ ಮಾದರಿ ಜಿಲ್ಲೆಯಾಗಿ ಉನ್ನತ ಸಾಧನೆ ಮಾಡಲಿ ಎಂದು ಆಶಿಸಿದರು. ಇದೇ ಸಂದರ್ಭದಲ್ಲಿ ವಸಂತ್ ಹೋಬಳಿದಾರ್ ದಂಪತಿಗೆ ಮಾಜಿ ಅಧ್ಯಕ್ಷರು, ಮಾಜಿ ಸಹಾಯಕ ಗವರ್ನರ್, ಸದಸ್ಯರು ಸನ್ಮಾನಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಅರುಣ್ ದೀಕ್ಷಿತ್ ಮಾತನಾಡಿ, ರೋಟರಿ ಜಿಲ್ಲೆ 3182ರ ಮೂಲಕ ಉತ್ತಮ ಸೇವಾ ಕಾರ್ಯಗಳನ್ನು ನಡೆಸಲು ಎಲ್ಲ ರೋಟರಿ ಸದಸ್ಯರ ಸಹಕಾರ ಇರುತ್ತದೆ ಎಂದು ತಿಳಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ಡಾ. ಕಡಿದಾಳ್ ಗೋಪಾಲ್, ಮಾಜಿ ಸಹಾಯಕ ಗವರ್ನರ್ ಚಂದ್ರಹಾಸ ಪಿ.ರಾಯ್ಕರ್, ಡಾ. ಗುಡದಪ್ಪ ಕಸಬಿ, ಬೆನಕಪ್ಪ, ಎನ್.ಎಚ್.ಶ್ರೀಕಾಂತ್, ಚಂದ್ರಶೇಖರಯ್ಯ, ಡಾ. ಪರಮೇಶ್ವರ್ ಶಿಗ್ಗಾವ್, ರಾಮಚಂದ್ರ, ಎಚ್.ಬಿ.ಆದಿಮೂರ್ತಿ, ಎ.ಒ.ಮಹೇಶ್, ಇನ್ನರ್‌ವ್ಹೀಲ್ ಮಾಜಿ ಅಧ್ಯಕ್ಷೆ ಬಿಂದು ವಿಜಯಕುಮಾರ್, ವಿಜಯಾ ರಾಯ್ಕರ್, ಸತೀಶ್ ಚಂದ್ರ, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಶಶಿಕಾಂತ್ ನಾಡಿಗ್, ರೋಟರಿ ಸದಸ್ಯರು, ರಿಪ್ಪನ್‌ಪೇಟೆ, ಕೋಣಂದೂರು, ಶಿವಮೊಗ್ಗದ ವಿವಿಧ ಕ್ಲಬ್‌ಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/