ನಾಯಕತ್ವ ಗುಣ ವೃದ್ಧಿಸುವಲ್ಲಿ ರೋಟರಿ ಪಾತ್ರ ಮಹತ್ತರ

ನಾಯಕತ್ವ ಗುಣ ವೃದ್ಧಿಸುವಲ್ಲಿ ರೋಟರಿ ಪಾತ್ರ ಮಹತ್ತರ

ಶಿವಮೊಗ್ಗ | 17 ಫೆಬ್ರವರಿ 2025 | ಡಿಜಿ ಮಲೆನಾಡು.ಕಾಂ

ಫಲಾಪೇಕ್ಷೆ ಇಲ್ಲದೆ ಸೇವಾ ಮನೋಭಾವನೆ ಹಾಗೂ ನಾಯಕತ್ವದ ಗುಣಗಳನ್ನು ವೃದ್ಧಿಸುವಲ್ಲಿ ರೋಟರಿ ಸಂಸ್ಥೆ ಪ್ರಮುಖ ಪಾತ್ರ ವಹಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ಶಿವಮೊಗ್ಗ ನಗರದ ಕಾಸ್ಮೋ ಕ್ಲಬ್‌ನಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಆಯೋಜಿಸಿದ್ದ ರೋಟರಿ ನಾಯಕತ್ವ ಪ್ರಶಸ್ತಿ ಪ್ರದಾನ, ರೋಟರಿ ಅಕಾಡೆಮಿ ಫಾರ್ ಹೈಯರ್ ಲೀಡರ್ಶಿಪ್ ಅವಾರ್ಡ್ (ರಹಲಾ) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸು ಗಳಿಸಲು, ಸಾಧನೆ ಮಾಡಲು ನಾಯಕತ್ವ ಗುಣ ಬಹಳ ಮುಖ್ಯ. ರಾಜಕಾರಣದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲು ರೋಟರಿ ಸಂಸ್ಥೆಯಲ್ಲಿ ಕಲಿತ ಸೇವಾ ಮನೋಭಾವ, ನಾಯಕತ್ವದ ಗುಣ ತುಂಬಾ ಸಹಕಾರಿಯಾಗಿದೆ ಎಂದು ತಿಳಿಸಿದರು.

ಎಲ್ಲ ಸಂಘ ಸಂಸ್ಥೆಗಳಿಂದ ರೋಟರಿ ಸಂಸ್ಥೆ ತುಂಬಾ ಭಿನ್ನವಾಗಿದೆ. ಸ್ನೇಹ, ಸೇವೆ ಹಾಗೂ ಓಡನಾಟಕ್ಕಾಗಿ ಸ್ಥಾಪಿತವಾದ ರೋಟರಿ ಸಂಸ್ಥೆ ಪ್ರಪಂಚಾದ್ಯಂತ ನೂರಾರು ದೇಶಗಳಲ್ಲಿ ಅತ್ಯಂತ ಪ್ರಮುಖವಾದ ಸೇವೆಯ ಮುಖಾಂತರ ಜನ ಮಾನಸ ತಲುಪಿದೆ ಎಂದು ನುಡಿದರು.

ರೋಟರಿ ಮಾಜಿ ಜಿಲ್ಲಾ ಗವರ್ನರ್ ಅಭಿನಂದನ್ ಶೆಟ್ಟಿ ಮಾತನಾಡಿ, ಸಂಘ ಸಂಸ್ಥೆಗಳು ಯಶಸ್ವಿಯಾಗಿ ನೂರಾರು ವರ್ಷಗಳ ಕಾಲ ನಡೆಯಬೇಕಾದರೆ ಒಳ್ಳೆಯ ನಾಯಕತ್ವದ ಗುಣ ಇರಬೇಕು. ಈ ನಿಟ್ಟಿನಲ್ಲಿ ಇಂತಹ ತರಬೇತಿಗಳು ರೋಟರಿ ಸದಸ್ಯರಲ್ಲಿ ಬೆಳಕು ಚೆಲ್ಲಿ ಅವರನ್ನು ರೋಟೆರಿಯನ್ ಆಗಿ ಪರಿವರ್ತನೆ ಮಾಡಲು ಸಹಕಾರಿಯಾಗಿದೆ ಎಂದರು.

ಜಿಲ್ಲಾ ಗವರ್ನರ್ ಸಿ.ಎ.ದೇವಾನಂದ್ ಮಾತನಾಡಿ, ಬಹಳ ವರ್ಷಗಳ ನಂತರ ರಹಲ ಕಾರ್ಯಕ್ರಮ ಅತ್ಯಂತ ಹೆಚ್ಚು ಜನ ಸದಸ್ಯರ ನೋಂದಣಿಯೊಂದಿಗೆ ಶಿವಮೊಗ್ಗದಲ್ಲಿ ದಾಖಲೆ ಮಾಡಿದೆ. ಶಿವಮೊಗ್ಗ ಸೆಂಟ್ರಲ್ ಕ್ಲಬ್ ಪದಾಧಿಕಾರಿಗಳು ಹಾಗೂ ಅಧ್ಯಕ್ಷರ ಪರಿಶ್ರಮದಿಂದ ಕಾರ್ಯಕ್ರಮ ಯಶಸ್ವಿಗೊಂಡಿವೆ ಎಂದು ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಕಿರಣ್ ಕುಮಾರ್ ಜಿ ಮಾತನಾಡಿ, ಕ್ಲಬ್ ಮಾಜಿ ಅಧ್ಯಕ್ಷರು, ಪಿಡಿಜಿ ಹಾಗೂ ವಲಯದ ಸಹಾಯಕ ಗವರ್ನರ್‌ಗಳ ಸಹಕಾರ ಕಾರ್ಯಕ್ರಮದ ಯಶಸ್ಸಿಗೆ ಕಾರಣ ಎಂದು ತಿಳಿಸಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

Click on below this picture, Like & Follow Facebook Page ” Digi Malenadu “

ಜಿಲ್ಲಾ ಮಾಜಿ ಗವರ್ನರ್ ರಾಜಾರಾಮ್ ಭಟ್, ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್, ರಹಲಾ ಚೇರ್ಮನ್ ಚಂದ್ರಶೇಖರ್ ಮೆಂಡನ್, ವೈಸ್ ಚೇರ್ಮನ್ ಸಿಸಿ ಸಾವಿನ್, ವಲಯ ಹನ್ನೊಂದರ ಸಹಾಯಕ ಗವರ್ನರ್ ಸುರೇಶ್ ಎಚ್.ಎಂ., ಇವೆಂಟ್ ಚೇರ್ಮನ್ ರವಿ ಕೊಟೋಜಿ, ಜಿ.ಎನ್.ಪ್ರಕಾಶ್, ಈಶ್ವರ್, ಇವೆಂಟ್ ಕಾರ್ಯದರ್ಶಿ ರಮೇಶ್, ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಹಾಗೂ ಕ್ಲಬ್ಬಿನ ಸದಸ್ಯರು ಉಪಸ್ಥಿತರಿದ್ದರು. ಮುಖ್ಯ ಪ್ರಧಾನ ಭಾಷಣಕಾರರಾಗಿ ಸಿಸಿ ಪಾವಟೆ, ಡಾ. ಕೆ ಶ್ರೀಪತಿ ಹಲಗುಂದ, ಎನ್.ಜಿ.ಉಷಾ, ನಾಯಕತ್ವ ಸಾಮರಸ್ಯ ಹಾಗೂ ಸಂಘ ಸಂಸ್ಥೆಗಳ ಓಡನಾಟ ಅಭಿವೃದ್ಧಿ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಚಿಕ್ಕಮಗಳೂರು, ಹಾಸನ, ಉಡುಪಿ ಹಾಗು ಶಿವಮೊಗ್ಗದಿಂದ 450ಕ್ಕೂ ಹೆಚ್ಚು ಸದಸ್ಯರು ಪಾಲ್ಗೊಂಡಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!