ಚಿಟ್ ಫಂಡ್ ಉದ್ಯಮದಿಂದ ಹೆಚ್ಚಿನ ಉದ್ಯೋಗ ಅವಕಾಶ

ಚಿಟ್ ಫಂಡ್ ಉದ್ಯಮದಿಂದ ಹೆಚ್ಚಿನ ಉದ್ಯೋಗ ಅವಕಾಶ

ಶಿವಮೊಗ್ಗ | 13 ಜೂನ್‌ 2025 | ಡಿಜಿ ಮಲೆನಾಡು.ಕಾಂ

ದೇಶ ಆರ್ಥಿಕವಾಗಿ ಪ್ರಗತಿ ಸಾಧಿಸುವಲ್ಲಿ ಚಿಟ್ ಫಂಡ್ ಉದ್ಯಮದ ಕೊಡುಗೆ ಅಪಾರವಾಗಿದೆ ಎಂದು ಸಹ್ಯಾದ್ರಿ ಚಿಟ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಮೇಶ್ ಭಟ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಿಟ್ ಫಂಡ್ ಉದ್ಯಮದ ಕುರಿತು ಮಾತನಾಡಿ, ಜಿಎಸ್‌ಟಿ ತೆರಿಗೆ ರೂಪದಲ್ಲಿ ಹಾಗೂ ಆದಾಯ ತೆರಿಗೆ ರೂಪದಲ್ಲಿ ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿಗಳನ್ನು ಸರ್ಕಾರಕ್ಕೆ ಪಾವತಿಸುತ್ತಿದೆ. ಆರ್ಥಿಕ ದುರ್ಬಲರಿಗೆ, ಶ್ರೀಸಾಮಾನ್ಯರಿಗೆ, ನೌಕರರಿಗೆ ಹಾಗೂ ಉದ್ಯಮಿಗಳಿಗೆ ಚಿಟ್ ಫಂಡ್ ನಿಂದ ತುಂಬಾ ಅನುಕೂಲಕರವಾಗಿದೆ. ಲಕ್ಷಾಂತರ ಜನರಿಗೆ ಉದ್ಯೋಗ ಅವಕಾಶವನ್ನು ನೀಡಿದೆ ಎಂದು ತಿಳಿಸಿದರು.

ಸಹ್ಯಾದ್ರಿ ಚಿಟ್ಸ್ ಸಂಸ್ಥೆಯ ಮಾರುಕಟ್ಟೆ ನಿರ್ದೇಶಕ ಶಿವರಾಜ್ ಉಡುಗಣಿ ಮಾತನಾಡಿ, ಚಿಟ್ ಫಂಡ್ ಹೇಗೆ ನಡೆಯುತ್ತದೆ ಮತ್ತು ಇದರಿಂದ ಆಗುವ ಉಪಯೋಗಗಳ ಬಗ್ಗೆ ವಿವರವಾದ ಮಾಹಿತಿಯನ್ನು ಮತ್ತು ರಿಜಿಸ್ಟರ್ ಚಿಟ್ ಫಂಡ್ ಗಳಿಗೂ ಹಾಗೂ ಅನ್ ರಿಜಿಸ್ಟರ್ ಫಂಡ್ ಗಳಿಗೂ ಇರುವ ವ್ಯತ್ಯಾಸಗಳ ಬಗ್ಗೆ ವಿವರಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಅರುಣ್ ದೀಕ್ಷಿತ್ ಮಾತನಾಡಿ, ನೋಂದಾಯಿತ ಚಿಟ್ ಫಂಡ್ ಸಂಸ್ಥೆಗಳಲ್ಲಿ ಸಿಗುವ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯಮದಲ್ಲಿ ಯಶಸ್ಸು ಸಾಧಿಸಬೇಕು. ಸರಿಯಾದ ಮಾಹಿತಿಯನ್ನು ಪರಿಣಿತರಿಂದ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

Click on below this picture, Like & Follow Facebook Page ” Digi Malenadu “

ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಶಶಿಕಾಂತ್ ನಾಡಿಗ್, ಜಿ.ವಿಜಯಕುಮಾರ್, ವಸಂತ ಹೋಬಳಿದಾರ್, ನಾಗರಾಜ್ ಹಾಗೂ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯ ಸದಸ್ಯರು ಹಾಜರಿದ್ದರು.

ಆರೋಗ್ಯಕರ ಸಮಾಜಕ್ಕೆ ಗಿಡಮೂಲಿಕೆ ಆಧರಿಸಿದ ಔಷಧ ಉತ್ಪನ್ನಗಳು ಅಗತ್ಯ

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!