ಯುವಜನರು ರಕ್ತದಾನಕ್ಕೆ ಮುಂದಾಗಲಿ
ಶಿವಮೊಗ್ಗ | 14 ಜೂನ್ 2025 | ಡಿಜಿ ಮಲೆನಾಡು.ಕಾಂ
ರಕ್ತದಾನ ಜೀವ ಉಳಿಸುವ ಶ್ರೇಷ್ಠ ಕಾರ್ಯವಾಗಿದ್ದು, ರಕ್ತದಾನದಿಂದ ಮಾನಸಿಕ ಹಾಗೂ ದೈಹಿಕ ಸದೃಢತೆ ಹೊಂದಲು ಸಾಧ್ಯ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಶಿವಮೊಗ್ಗ ಜಿಲ್ಲಾ ವಿತರಕರ ಸಂಘದಿಂದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸಕಾಲದಲ್ಲಿ ರಕ್ತ ಸಿಗದೇ ಸಾಕಷ್ಟು ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ರಕ್ತದ ಬೇಡಿಕೆ ಹೆಚ್ಚಿದ್ದು, ಯುವಜನರು ರಕ್ತದಾನ ಮಾಡಲು ಮುಂದಾಗಬೇಕು ಎಂದು ತಿಳಿಸಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್ ಮಾತನಾಡಿ, ಪ್ರತಿಯೊಬ್ಬ ಆರೋಗ್ಯವಂತ ಮನುಷ್ಯ ವರ್ಷದಲ್ಲಿ ಮೂರು ಬಾರಿ ರಕ್ತದಾನ ಮಾಡಬೇಕು. ಸಮಾಜದಲ್ಲಿ ನಿಜವಾದ ಹೀರೋಗಳು ಎಂದರೆ ರಕ್ತದಾನಿಗಳು ಎಂದರು.
ಶಿವಮೊಗ್ಗ ಜಿಲ್ಲಾ ವಿತರಕರ ಸಂಘದ ಅಧ್ಯಕ್ಷ ಸಿ.ಎಂ.ದೇವರಾಜ್ ಮಾತನಾಡಿ, ನಮ್ಮ ಸಂಘದಿಂದ ಈಗಾಗಲೇ ವೃತ್ತಿಯ ಜತೆಗೆ ಹಲವಾರು ಸಮಾಜಮುಖಿ ಸೇವಾ ಕಾರ್ಯಗಳನ್ನು ಮಾಡುವುದರ ಮುಖಾಂತರ ಇಂತಹ ಪವಿತ್ರ ಕಾರ್ಯಗಳನ್ನು ಸಹ ಮಾಡುತ್ತಿದೆ ಎಂದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Like & Follow Facebook Page ” Digi Malenadu “
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ಎ.ಎಂ. ಸುರೇಶ್, ವಿತರಕರ ಸಂಘದ ಉಪಾಧ್ಯಕ್ಷ ಬದ್ರಿನಾಥ್, ಕಾರ್ಯದರ್ಶಿ ಗಿರೀಶ್, ಪ್ರಶಾಂತ್, ಶಿವರಾಜ್ ಉಡುಗಣಿ, ಖಜಾಂಚಿ ಚಂದ್ರು, ಸಂಘದ ನಿರ್ದೇಶಕರು, ಸದಸ್ಯರು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/
