ಗುಣಮಟ್ಟದ ಸಿನಿಮಾಗಳು ಇಂದಿನ ಪೀಳಿಗೆಗೆ ಅವಶ್ಯಕ, ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ
ಶಿವಮೊಗ್ಗ | 1 ಜುಲೈ 2025 | ಡಿಜಿ ಮಲೆನಾಡು.ಕಾಂ
ಸಿನಿಮಾಗಳು ಕೇವಲ ದೃಶ್ಯ ಕಥಾನಕಗಳಲ್ಲ, ಅವು ಜೀವನದ ಸಣ್ಣ ತುಣುಕುಗಳು. ದೃಶ್ಯ, ಧ್ವನಿ, ಸಂಗೀತ, ಪಾತ್ರ ಮತ್ತು ದೃಶ್ಯ ಸಜ್ಜಿಕೆ ಮೂಲಕ ನಿರ್ದೇಶಕ ಕಟ್ಟಿಕೊಡುವ ವಾಸ್ತವಿಕ ಜಗತ್ತು. ಪ್ರೇಕ್ಷಕರ ಅಭಿರುಚಿ ಬೆಳೆಸುವ ಮತ್ತು ಕಲಾತ್ಮಕತೆ ಅನಾವರಣಗೊಳಿಸುವ ಜಾಗತಿಕ ಗುಣಮಟ್ಟದ ಸಿನಿಮಾಗಳು ಇಂದಿನ ಅಗತ್ಯ ಎಂದು ಕುವೆಂಪು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಅಭಿಪ್ರಾಯಪಟ್ಟರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ಕುವೆಂಪು ವಿಶ್ವವಿದ್ಯಾಲಯದ ಜ್ಞಾನಸಹ್ಯಾದ್ರಿ ಆವರಣದಲ್ಲಿ ಪತ್ರಿಕೋದ್ಯಮ ವಿಭಾಗ ಆಯೋಜಿಸಿರುವ 16ನೇ ವರ್ಷದ ಸಹ್ಯಾದ್ರಿ ಸಿನಿಮೋತ್ಸವ ಸೋಮವಾರ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಜಗತ್ತಿನ ಅತ್ಯುತ್ತಮ ಚಲನಚಿತ್ರಗಳು ಪೂರ್ವ ಏಷ್ಯಾದ ಜಪಾನ್, ಹಾಂಕಾಂಗ್, ಕೊರಿಯಾ ದೇಶಗಳಲ್ಲಿ ನಿರ್ಮಾಣವಾಗುತ್ತಿವೆ ಎಂದು ತಿಳಿಸಿದರು.
ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ. ಡಿ.ಎಸ್ ಪೂರ್ಣಾನಂದ ಮಾತನಾಡಿ, ಪೂರ್ವ ಏಷಿಯಾ ಸಿನಿಮಾದ ಮಹತ್ವ ಪ್ರಸ್ತುತ ದಿನಗಳಲ್ಲಿ ಜಪಾನ್, ಕೊರಿಯಾ, ಚೀನಾ, ಹಾಂಕಾಂಗ್ ಸಿನಿಮಾಗಳ ಪ್ರಾಮುಖ್ಯತೆ ಹಾಗೂ ಈ ಪ್ರದೇಶಗಳ ಸಾಂಸ್ಕೃತಿಕ ಮತ್ತು ಭೌಗೋಳಿಕತೆಯ ವಿಶಿಷ್ಠತೆ ಕುರಿತು ವಿವರಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ವರ್ಗೀಸ್ ಪಿ.ಎ , ಪ್ರೊ. ಸತೀಶ್ ಕುಮಾರ್, ಪ್ರೊ. ಸತ್ಯಪ್ರಕಾಶ್. ಎಂ. ಆರ್, ಡಾ. ರುಮಾನ ತನ್ವೀರ್, ವರ್ಣಶ್ರೀ, ರಾಸುಮ, ದೊರೆಸ್ವಾಮಿ, ಸುನಿಲ್ ಮತ್ತು ವಿವಿಧ ವಿಭಾಗದ ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು, ಉಪನ್ಯಾಸಕರು, ಸಿಬ್ಬಂದಿ ಪಾಲ್ಗೊಂಡಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ನೂತನ ಜಿಲ್ಲಾ ಗವರ್ನರ್ ಕೆ.ಪಾಲಾಕ್ಷ ಅವರಿಗೆ ರೋಟರಿ ಶಿವಮೊಗ್ಗ ಪೂರ್ವದಿಂದ ಸನ್ಮಾನ
