ಮಕ್ಕಳಿಗೆ ಸಮವಸ್ತ್ರ ವಿತರಿಸಿದ ರೋಟರಿ ಸೆಂಟ್ರಲ್ ಕ್ಲಬ್

ಮಕ್ಕಳಿಗೆ ಸಮವಸ್ತ್ರ ವಿತರಿಸಿದ ರೋಟರಿ ಸೆಂಟ್ರಲ್ ಕ್ಲಬ್

ಶಿವಮೊಗ್ಗ | 1 ಜುಲೈ 2025 | ಡಿಜಿ ಮಲೆನಾಡು.ಕಾಂ

ಕೌಶಲ್ಯದ ಜತೆ ಮನುಕುಲದ ಸೇವೆ ಕಲಿಸುವ ಸ್ಕೌಟ್ಸ್ ಮತ್ತು ಗೈಡ್ಸ್ ಇಂದಿನ ಕಾಲಘಟಕ್ಕೆ ಪ್ರಸ್ತುತ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಸಂಸ್ಥೆ ಅಧ್ಯಕ್ಷ ಕಿರಣ್‌ಕುಮಾರ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ರೋಟರಿ ಶಿವಮೊಗ್ಗ ಸೆಂಟ್ರಲ್ ಕ್ಲಬ್ ವತಿಯಿಂದ ಸ್ಕೌಟ್ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗ್ರಾಮೀಣ ಪ್ರದೇಶದ ಕೊಮ್ಮನಾಳು ಸರ್ಕಾರಿ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಗೆ ಸಮವಸ್ತ್ರ ವಿತರಿಸಿ ಮಾತನಾಡಿ, ಮಕ್ಕಳು ವಿದ್ಯಾಭ್ಯಾಸದ ಜತೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ನಂತಹ ಕ್ರೀಯಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.

ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್ ಮಾತನಾಡಿ, ಕಿರಣ್‌ಕುಮಾರ್ ಅವರು ಅಧ್ಯಕ್ಷರಾಗಿದ್ದ ಒಂದು ವರ್ಷದ ಅವಧಿಯಲ್ಲಿ ಅತ್ಯುತ್ತಮ ಸಮಾಜಮುಖಿ ಸೇವಾಕಾರ್ಯಗಳನ್ನು ನಡೆಸಿದ್ದಾರೆ ಎಂದು ತಿಳಿಸಿದರು.

ರೋವರ್ ಆಯುಕ್ತ ಕೆ.ರವಿ ಮಾತನಾಡಿ, ರೋಟರಿ ಸಂಸ್ಥೆ ಜತೆಗೂಡಿ ಉತ್ತಮ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ಆಯೋಜಿಸಲಾಗುವುದು ಎಂದು ಹೇಳಿದರು. ತರಬೇತಿ ಆಯುಕ್ತೆ ಗೀತಾ ಚಿಕಮಠ್ ಮಾತನಾಡಿ, ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಅಪಾರ ಪ್ರತಿಭೆ ಅಡಗಿರುತ್ತದೆ. ಅವರಿಗೆ ಸಂಘ ಸಂಸ್ಥೆಗಳ ಸಹಕಾರ, ಪ್ರೋತ್ಸಾಹ ಬೇಕು ಎಂದು ತಿಳಿಸಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಮಾತನಾಡಿ, ರೋಟರಿ ಸೇವೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ರೋಟರಿ ಸಂಸ್ಥೆಯು ಮಕ್ಕಳಿಗೆ ಸಮವಸ್ತ್ರ ಹಾಗೂ ಅಗತ್ಯ ಸಾಮಾಗ್ರಿಗಳನ್ನು ನೀಡಿರುವುದು ಅಭಿನಂದನೀಯ ಎಂದು ಹೇಳಿದರು.

ರವಿ ಕೋಟೋಜಿ, ಲಕ್ಷ್ಮೀ ಕೆ.ರವಿ, ಈಶ್ವರ್, ಜಯಶೀಲ್ ಶೆಟ್ಟಿ, ಬಸವರಾಜ್, ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರಯ್ಯ, ಚೂಡಾಮಣಿ ಪವಾರ್, ಧರ್ಮೇಂದ್ರ ಸಿಂಗ್, ಅನ್ಸ್ ಕ್ಲಬ್ ಅಧ್ಯಕ್ಷೆ ಗೀತಾ ಜಗದೀಶ್, ದೀಪಾ ಶೆಟ್ಟಿ ಇತರರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ನಮ್ಮ ಬಗ್ಗೆ :https://digimalenadu.com/about-us/

ಗುಣಮಟ್ಟದ ಸಿನಿಮಾಗಳು ಇಂದಿನ ಪೀಳಿಗೆಗೆ ಅವಶ್ಯಕ, ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ

digimalenadu

ಶಿವಮೊಗ್ಗ
error: Content is protected !!