ಪ್ರತಿಯೊಬ್ಬರಲ್ಲೂ ಇರಲಿ ಸೇವಾ ಮನೋಭಾವನೆ
ಶಿವಮೊಗ್ಗ | 14 ಜುಲೈ 2025 | ಡಿಜಿ ಮಲೆನಾಡು.ಕಾಂ
ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಾಗ ಜೀವನದಲ್ಲಿ ಸಾರ್ಥಕ ಭಾವ ಮೂಡುತ್ತದೆ. ಇನ್ನೊಬ್ಬರ ಕಷ್ಟಕ್ಕೆ ಕೈಜೋಡಿಸುವ ಸೇವಾ ಮನೋಭಾವನೆ ಇರಬೇಕು ಎಂದು ನಿಯೋಜಿತ ಜಿಲ್ಲಾ ಗವರ್ನರ್ ಬಿ.ಎಂ.ಭಟ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ಸರ್ಕಾರಿ ನೌಕರರ ಭವನದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಆಯೋಜಿಸಿದ್ದ ಪದವಿ ಪ್ರಧಾನ ಸಮಾರಂಭ ಹಾಗೂ ಮಾನವೀಯ ಸೇವಾ ಕಾರ್ಯಗಳ ಕಾರ್ಯಕ್ರಮದಲ್ಲಿ ಮಾತನಾಡಿ, ರೋಟರಿ ದತ್ತಿ ನಿಧಿಯಿಂದ ಪ್ರಪಂಚಾದ್ಯಂತ ಲಕ್ಷಾಂತರ ಮಾನವೀಯ ಸೇವೆಗಳ ಮುಖಾಂತರ ಅತಿ ಹೆಚ್ಚು ಜನರನ್ನು ಮತ್ತು ಸಮುದಾಯವನ್ನು ತಲುಪುತ್ತಿರುವ ಏಕೈಕ ಸಂಸ್ಥೆ ರೋಟರಿ ಎಂದು ತಿಳಿಸಿದರು.
ಎಲ್ಲರೂ ರೋಟರಿ ದತ್ತಿ ನಿಧಿಗೆ ದೇಣಿಗೆ ನೀಡುವುದರ ಮುಖಾಂತರ ರೋಟರಿ ಫೌಂಡೇಷನ್ ಬಲಪಡಿಸಬೇಕು. ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ರೋಟರಿ ಜಿಲ್ಲೆಯಲ್ಲಿ ಸಾಕಷ್ಟು ಸೇವಾ ಕಾರ್ಯಗಳನ್ನು ಮಾಡುವುದರ ಮುಖಾಂತರ ತನ್ನದೇ ಆದ ಛಾಪು ಮೂಡಿಸಿದೆ ಎಂದರು.
ನಿಯೋಜಿತ ಜಿಲ್ಲಾ ಗವರ್ನರ್ ವಸಂತ ಹೋಬಳಿದಾರ್ ಮಾತನಾಡಿ, ರೋಟರಿ ಸಂಸ್ಥೆಗೆ ಹೊಸದಾಗಿ ಸೇರಿದ 14 ಜನ ಸದಸ್ಯರಿಗೆ ರೋಟರಿ ಲೇಪನ ಪಿನ್ ನೀಡಿ ಪ್ರಮಾಣ ಪತ್ರ ನೀಡಿ ಸಂಸ್ಥೆಗೆ ಬರಮಾಡಿಕೊಂಡು ಗೌರವಿಸಿದರು.
ವಲಯ 11ರ ಸಹಾಯಕ ಗವರ್ನರ್ ಲಕ್ಷ್ಮಣ್ ಗೌಡ ಅವರು ಕ್ಲಬ್ ಮುಖವಾಣಿ ಭಾಸ್ಕರ ಪತ್ರಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದರು. ವಲಯ ಸೇನಾನಿ ಕಿರಣ್ ಕುಮಾರ್ ಅವರು ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಶುಭಾಶಯ ತಿಳಿಸಿದರು.
ರೋಟರಿ ಶಿವಮೊಗ್ಗ ಪೂರ್ವದ ನೂತನ ಅಧ್ಯಕ್ಷರಾಗಿ ನೆಪ್ಚೂನ್ ಕಿಶೋರ್, ಕಾರ್ಯದರ್ಶಿಯಾಗಿ ಡಾ. ಧನಂಜಯ ರಾಂಪುರ ಅಧಿಕಾರ ವಹಿಸಿಕೊಂಡರು. ನಿಕಟಪೂರ್ವ ಅಧ್ಯಕ್ಷ ಅರುಣ್ ದೀಕ್ಷಿತ್, ನಿಕಟಪೂರ್ವ ಕಾರ್ಯದರ್ಶಿ ಶಶಿಕಾಂತ್ ನಾಡಿಗ್ ಹಾಜರಿದ್ದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Click on below this picture, Like & Follow Facebook Page ” Digi Malenadu “
ಆರ್ಥಿಕವಾಗಿ ಹಿಂದುಳಿದ ಫಲಾನುಭವಿಗೆ ಕೃತಕವಾದ ಕಾಲನ್ನ ಜೋಡಿಸಲು ಧನಸಹಾಯ ಮಾಡಲಾಯಿತು. ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಹಾಗೂ ಕ್ಲಬ್ ಮಾಜಿ ಅಧ್ಯಕ್ಷರು, ಸಹಾಯಕ ಗವರ್ನರ್ ಮತ್ತು ಸದಸ್ಯರು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/

