ಶಿವಮೊಗ್ಗ ಜಿಲ್ಲೆಯಲ್ಲಿವೆ ನೂರಾರು ಪ್ರವಾಸಿ ತಾಣಗಳು

ಶಿವಮೊಗ್ಗ ಜಿಲ್ಲೆಯಲ್ಲಿವೆ ನೂರಾರು ಪ್ರವಾಸಿ ತಾಣಗಳು

ಶಿವಮೊಗ್ಗ | 14 ಜುಲೈ 2025 | ಡಿಜಿ ಮಲೆನಾಡು.ಕಾಂ

ಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವುದು ಅವಶ್ಯಕ ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ಅಧ್ಯಕ್ಷ ಡಿ.ಎಂ.ಶಂಕರಪ್ಪ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ದಿ ವೇದಿಕೆಯಿಂದ ಆಯೋಜಿಸಿದ್ದ ಒಂದು ದಿನದ ಪ್ರವಾಸಕ್ಕೆ ಚಾಲನೆ ನೀಡಿ ಮಾತನಾಡಿ, 12ನೇ ಶತಮಾನದ ಶರಣರು ನಾಡು ನಮ್ಮ ಜಿಲ್ಲೆ ಶಿವಮೊಗ್ಗ, ಅದರಲ್ಲು ಶಿಕಾರಿಪುರ ತಾಲ್ಲೂಕಿನಲ್ಲಿ ಹಲವಾರು ಶರಣರನ್ನು ಕಾಣಬಹುದು. ಪ್ರತಿಯೊಬ್ಬರಿಗೂ ಜಿಲ್ಲೆಯಲ್ಲಿನ ಪ್ರವಾಸಿ ತಾಣಗಳ ಬಗ್ಗೆ ಅರಿವು ಮೂಡಿಸಬೇಕು. ಈ ನಿಟ್ಟಿನಲ್ಲಿ ಪ್ರತಿ ವಾರ ಒಂದು ದಿನದ ಪ್ರವಾದ ಏರ್ಪಡಿಸುತ್ತಿದ್ದೇವೆ ಎಂದು ತಿಳಿಸಿದರು.

ಬಸ್ ಮಾಲಿಕರ ಸಂಘದ ಅಧ್ಯಕ್ಷ ರಂಗಪ್ಪ ಮಾತನಾಡಿ, ಪ್ರಯಾಣಿಕರ ಸಂತೋಷವೇ ಪ್ರವಾಸೋದ್ಯಮದ ಉನ್ನತಿಗೆ ಕಾರಣವಾಗುತ್ತದೆ ಎಂಬ ನಂಬಿಕೆ ಇದೆ ಎಂದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಪ್ರವಾಸದಿಂದ ಜೀವನೋತ್ಸಾಹ ವೃದ್ಧಿಸುತ್ತದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ವತಿಯಿಂದ ನಾಲ್ಕನೇ ಪ್ರವಾಸವಾಗಿದೆ ಎಂದು ತಿಳಿಸಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

Click on below this picture, Like & Follow Facebook Page ” Digi Malenadu “

ಅಂಜನಾಪುರ, ಶಿಕಾರಿಪುರ, ಬನವಾಸಿ, ಚಂದ್ರಗುತ್ತಿ ಹಾಗೂ ಹಲವಾರು ಐತಿಹಾಸಿಕ ಸ್ಥಳಗಳಿಗೆ ಒಂದು ದಿನದ ಪ್ರವಾಸ ಏರ್ಪಡಿಸಲಾಗಿತ್ತು. ವಾಗೇಶ್, ಲಕ್ಷ್ಮೀ ರಾಜೇಶ್, ಮಹಾದೇವ ಸ್ವಾಮಿ ಇದ್ದರು. 50ಕ್ಕೂ ಹೆಚ್ಚು ಜನ ಪ್ರವಾಸದಲ್ಲಿ ಪಾಲ್ಗೊಂಡಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ನಮ್ಮ ಬಗ್ಗೆ :https://digimalenadu.com/about-us/

ಪ್ರತಿಯೊಬ್ಬರಲ್ಲೂ ಇರಲಿ ಸೇವಾ ಮನೋಭಾವನೆ

digimalenadu

ಶಿವಮೊಗ್ಗ
error: Content is protected !!