ರೋಟರಿ ಕ್ಲಬ್ಗಳ ಸಮಾಜಮುಖಿ ಕಾರ್ಯ ಶ್ಲಾಘನೀಯ
ಶಿವಮೊಗ್ಗ | 16 ಜುಲೈ 2025 | ಡಿಜಿ ಮಲೆನಾಡು.ಕಾಂ
ರೋಟರಿ ಸಂಸ್ಥೆಯು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ಕೋಣಂದೂರಿನ ವಿನಾಯಕ ಮಾಂಗಲ್ಯ ಮಂದಿರದಲ್ಲಿ ರೋಟರಿ ಕ್ಲಬ್ ಏರ್ಪಡಿಸಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ, ತೀರ್ಥಹಳ್ಳಿ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೋಣಂದೂರು ರೋಟರಿ ಸಂಸ್ಥೆ ಮಹತ್ತರ ಸೇವಾ ಕಾರ್ಯಗಳನ್ನು ನಡೆಸುತ್ತಿದೆ. ಇಂತಹ ಅಂತರಾಷ್ಟ್ರೀಯ ಸೇವಾ ಸಂಸ್ಥೆಗಳು ಇರುವುದರಿಂದ ಶೈಕ್ಷಣಿಕವಾಗಿ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಹಾಗೂ ಹಲವಾರು ಸೇವಾ ಯೋಜನೆಗಳನ್ನು ಮಾಡುತ್ತಿದೆ ಎಂದು ತಿಳಿಸಿದರು.
ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್ ಮಾತನಾಡಿ, ಸಮಾಜದ ಒಳಿತಿಗೆ ಕೆಲಸ ಮಾಡಲು ಎಲ್ಲರೂ ಕೈಜೋಡಿಸಬೇಕು. ಬೆಳ್ಳಿ ಹಬ್ಬದಲ್ಲಿರುವ ಈ ರೋಟರಿ ಕ್ಲಬ್ನಿಂದ ಬಹುಕಾಲ ನೆನಪಿನಲ್ಲಿ ಉಳಿಯುವ ಕೆಲಸ ಮಾಡಬೇಕು. ಆ ಮೂಲಕ ಜಿಲ್ಲೆಗೆ ಮಾದರಿಯಾಗುವಂತಹ ಕಾರ್ಯ ಆಗಬೇಕು ಎಂದು ಶುಭಹಾರೈಸಿದರು.
ಅಧಿಕಾರ ವಹಿಸಿಕೊಂಡ ನೂತನ ಅಧ್ಯಕ್ಷ ಕೆ.ಆರ್.ಸದಾಶಿವ ಹಾಗೂ ತಂಡದವರಿಗೆ ಸನ್ಮಾನಿಸಿ ಗೌರವಿಸಿದರು. ರೋಟರಿ ಕ್ಲಬ್ ಕೋಣಂದೂರು ನೂತನ ಅಧ್ಯಕ್ಷ ಕೆ.ಆರ್.ಸದಾಶಿವ ಮಾತನಾಡಿ, ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ನಮ್ಮ ಕ್ಲಬ್ನ ಈ ವರ್ಷದ ಕಾರ್ಯ ಚಟುವಟಿಕೆಗಳನ್ನು ಸ್ಮರಣೀಯವಾಗಿಸಬೇಕು ಎಂದು ಹೇಳಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Like & Follow Facebook Page ” Digi Malenadu “
ಡಿ.ಆರ್.ಗಿರೀಶ್, ರೋಟರಿ ಸಹಾಯಕ ಗವರ್ನರ್ ಎಂ.ಬಿ.ಲಕ್ಷ್ಮಣ ಗೌಡ, ಜೋನಲ್ ಲೆಫ್ಟಿನೆಂಟ್ ಭರತ್ ಕುಮಾರ್ ಕೋಡ್ಲು, ಕಾರ್ಯದರ್ಶಿಗಳಾದ ಎಂ.ಟಿ.ಪುಟ್ಟಪ್ಪ, ಬಿ.ಟಿ.ಈಶ್ವರಪ್ಪ, ವಲಯ 11ರ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಡಾ.. ಗುಡದಪ್ಪ ಕಸಬಿ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/
