ವಿದ್ಯಾರ್ಥಿಗಳು ಅಧ್ಯಯನದಲ್ಲಿ ತೊಡಗಿಸಿಕೊಳ್ಳುವುದು ಅವಶ್ಯ
ಶಿವಮೊಗ್ಗ | 18 ಜುಲೈ 2025 | ಡಿಜಿ ಮಲೆನಾಡು.ಕಾಂ
ಪುಸ್ತಕಗಳು ಮತ್ತು ದಿನಪತ್ರಿಕೆಗಳ ಅಧ್ಯಯನದಲ್ಲಿ ಯುವ ಸಮೂಹ ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ನಗರದ ಎಚ್.ಎಸ್.ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನಿಂದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿ ಸಾಂಸ್ಕೃತಿಕ ಸಂಘ, ಕ್ರೀಡಾ ವೇದಿಕೆ, ಭಾರತ ಸೇವಾದಳ, ಎನ್.ಎಸ್.ಎಸ್ ಘಟಕ, ರೋವರ್ ರೇಂಜರ್ಸ್, ರೆಡ್ ಕ್ರಾಸ್ ಕ್ಲಬ್ಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ದಿನಪತ್ರಿಕೆಗಳು ಹಾಗೂ ಪುಸ್ತಕಗಳು ಬದುಕಿನ ಯಶಸ್ಸಿಗೆ ಮಾರ್ಗದರ್ಶನ ನೀಡುತ್ತವೆ. ಶೈಕ್ಷಣಿಕ ಚಟುವಟಿಕೆಗಳ ಜತೆಗೆ ವಿವಿಧ ವಿದ್ಯಾರ್ಥಿ ವೇದಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಕೌಶಲ್ಯತೆಯುಳ್ಳ ವ್ಯಕ್ತಿತ್ವ ವಿಕಸನ ಸಾಧ್ಯ ಎಂದು ತಿಳಿಸಿದರು.
ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಪ್ಪ ಎಸ್.ಗುಂಡಪಲ್ಲಿ ಮಾತನಾಡಿ, ಒಳ್ಳೆಯ ಕೇಳುಗರು ಉತ್ತಮ ವ್ಯಕ್ತಿತ್ವಗಳಾಗಿ ಬದಲಾಗುತ್ತಾರೆ. ಇಂದಿನ ಯುವ ಸಮೂಹ ಕೇಳುವ ತಾಳ್ಮೆಯನ್ನು ಕಳೆದುಕೊಳ್ಳುತ್ತಿದ್ದಾರೆ. ಹಣದ ಅಪವ್ಯಯಕ್ಕಿಂತ ಸಮಯದ ಅಪವ್ಯಯ ತುಂಬಾ ಕೆಟ್ಟದ್ದು. ವಿದ್ಯಾರ್ಥಿ ಜೀವನದ ಅಮೂಲ್ಯ ಸಮಯವನ್ನು ಕೌಶಲ್ಯ ಪೂರ್ಣವಾಗಿ ಬಳಸಿಕೊಳ್ಳಬೇಕು ಎಂದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Like & Follow Facebook Page ” Digi Malenadu “
ಕಾಲೇಜಿನ ಪ್ರಾಂಶುಪಾಲ ಕೆ.ಅಂಜನಮೂರ್ತಿ, ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ.ಬಿ.ಪಿ, ಎನ್ಇಎಸ್ ನಿರ್ದೇಶಕ ಎಚ್.ಸಿ.ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ದ್ವಿತೀಯ ಪಿಯು ಪರೀಕ್ಷೆಯಲ್ಲಿ 572 ಅಂಕ ಪಡೆದ ವಿದ್ಯಾರ್ಥಿ ಸಮರ್ಥ.ಇ.ಜಿ ಅವರನ್ನು ಸನ್ಮಾನಿಸಲಾಯಿತು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/
