ಸರ್ಕಾರಿ ಶಾಲೆ ಮಕ್ಕಳಿಗೆ ರೋಟರಿ ಸೆಂಟ್ರಲ್‌ನಿಂದ ಲೇಖನ ಸಾಮಾಗ್ರಿ ವಿತರಣೆ

ಸರ್ಕಾರಿ ಶಾಲೆ ಮಕ್ಕಳಿಗೆ ರೋಟರಿ ಸೆಂಟ್ರಲ್‌ನಿಂದ ಲೇಖನ ಸಾಮಾಗ್ರಿ ವಿತರಣೆ

ಶಿವಮೊಗ್ಗ | 20 ಜುಲೈ 2025 | ಡಿಜಿ ಮಲೆನಾಡು.ಕಾಂ

ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದು ಅವಶ್ಯ. ಈ ನಿಟ್ಟಿನಲ್ಲಿ ರೋಟರಿ ಸಂಸ್ಥೆಯು ಸರ್ಕಾರಿ ಶಾಲಾ ಮಕ್ಕಳಿಗೆ ಅಗತ್ಯ ನೆರವು ನೀಡುತ್ತಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಬಸವರಾಜ ಬಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ವಿನೋಬನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಉಚಿತ ಊಟದ ತಟ್ಟೆ ಹಾಗೂ ಕೈ ಲೋಟ ಮತ್ತು ಲೇಖನ ಸಾಮಗ್ರಿ ವಿತರಿಸಿ ಮಾತನಾಡಿ, ಮಕ್ಕಳಿಗೆ ಅಗತ್ಯ ವಸ್ತುಗಳನ್ನು ರೋಟರಿ ಕ್ಲಬ್ ಸೆಂಟ್ರಲ್ ಸದಸ್ಯ ನಾರಾಯಣಮೂರ್ತಿ ನೀಡಿದ್ದು, ಇದೇ ರೀತಿ ಸರ್ಕಾರಿ ಶಾಲೆಗಳ ಮೂಲಸೌಕರ್ಯಕ್ಕೆ ದಾನಿಗಳು ಹೆಚ್ಚಿನ ನೆರವು ನೀಡಬೇಕು ಎಂದು ತಿಳಿಸಿದರು.

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಸದಸ್ಯ ನಾರಾಯಣ ಮೂರ್ತಿ ಮಾತನಾಡಿ, ರೋಟರಿ ಸಂಸ್ಥೆಯಿಂದ ನಿರಂತರ ಸೇವಾ ಕಾರ್ಯಗಳು ನಡೆಯುತ್ತಿದ್ದು, ಇಂತಹ ಅಂತರಾಷ್ಟ್ರೀಯ ಸೇವಾ ಸಂಸ್ಥೆಯಲ್ಲಿ ಸದಸ್ಯರಾಗಿರುವುದು ಹೆಮ್ಮೆ ಎಂದು ತಿಳಿಸಿದರು.

ವಲಯ ಸೇನಾನಿ ಕಿರಣ್ ಕುಮಾರ್ ಜಿ ಮಾತನಾಡಿ, ರೋಟರಿ ಜಿಲ್ಲಾ ಕಾರ್ಯಕ್ರಮವಾದ ಶಿಕ್ಷಣದ ಅಡಿಯಲ್ಲಿ ರೋಟರಿ ಸಂಸ್ಥೆಯು ಸರ್ಕಾರಿ ಶಾಲೆಗಳ ಕುಂದು ಕೊರತೆಗಳನ್ನು ಪರಿಹರಿಸಲು ಶ್ರಮಿಸುತ್ತಿದೆ ಎಂದರು.

ಆನ್ಸ್ ಕ್ಲಬ್ ಅಧ್ಯಕ್ಷೆ ರಾಜಶ್ರೀ ಬಸವರಾಜ ಮಾತನಾಡಿ, ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಲು ಅಗತ್ಯ ಸಹಕಾರ ನೀಡುತ್ತೇವೆ ಎಂದು ತಿಳಿಸಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

Like & Follow Facebook Page ” Digi Malenadu “

ಕಾರ್ಯದರ್ಶಿ ಜಯಶೀಲಶೆಟ್ಟಿ, ಮಾಜಿ ಸಹಾಯಕ ಗವರ್ನರ್ ರವಿ ಕೊಟೊಜಿ, ಧರ್ಮೇಂದ್ರ ಸಿಂಗ್, ಗುರುರಾಜ್, ರಮೇಶ, ಸಂತೋಷ್, ಮೋಹನ್, ಗೀತಾ ಜಗದೀಶ್, ಜ್ಯೋತಿ ಶ್ರೀರಾಮ್, ದೀಪಾ ಶೆಟ್ಟಿ, ವಿನುತ ಅಶ್ವಿನ್ ಹಾಗೂ ಆನ್ ಕ್ಲಬ್ ಕಾರ್ಯದರ್ಶಿ ಮಥುರಾ ಧನಂಜಯ್ ಹಾಗೂ ಶಾಲಾ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ನಮ್ಮ ಬಗ್ಗೆ :https://digimalenadu.com/about-us/

ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ

digimalenadu

ಶಿವಮೊಗ್ಗ
error: Content is protected !!