ನಾಯಕತ್ವ ಗುಣ ವೃದ್ಧಿಸುವ ಇಂಟರಾಕ್ಟ್ ಕ್ಲಬ್

ನಾಯಕತ್ವ ಗುಣ ವೃದ್ಧಿಸುವ ಇಂಟರಾಕ್ಟ್  ಕ್ಲಬ್

ಶಿವಮೊಗ್ಗ | 23 ಜುಲೈ 2025 | ಡಿಜಿ ಮಲೆನಾಡು.ಕಾಂ

ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಇಂಟರ‍್ಯಾಕ್ಟ್ ಕ್ಲಬ್ ನೆರವಾಗುವ ಜತೆಯಲ್ಲಿ ನಾಯಕತ್ವ ಗುಣವನ್ನು ವೃದ್ಧಿಸುತ್ತದೆ ಎಂದು ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷ ನೆಪ್ಚೂನ್ ಕಿಶೋರ್‌ಕುಮಾರ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ನಗರದ ಸಹ್ಯಾದ್ರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, ಇಂಟರ‍್ಯಾಕ್ಟ್ ಪದಾಧಿಕಾರಿಗಳ ಪದಗ್ರಹಣ, ನೋಟ್‌ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾಭ್ಯಾಸದ ಜೊತೆಗೆ ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವದ ಗುಣ ವೃದ್ಧಿಯಾಗಲು ಇಂಟರ‍್ಯಾಕ್ಟ್ ಕ್ಲಬ್ ತುಂಬಾ ಸಹಕಾರಿಯಾಗಿದೆ ಎಂದು ತಿಳಿಸಿದರು.

ಇನ್ನರ್‌ವ್ಹೀಲ್ ಜಿಲ್ಲಾ ಚೇರ್ಮನ್ ಶಬರಿ ಕಡಿದಾಳ್ ಮಾತನಾಡಿ, ಶ್ರೀನಿಧಿ ಎಜುಕೇಶನ್ ಸೊಸೈಟಿ ವತಿಯಿಂದ ಹೈಸ್ಕೂಲ್ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಪ್ರತಿಭಾ ಪುರಸ್ಕಾರ ನೀಡುತ್ತಿದ್ದೇವೆ. ಎಲ್ಲ ವಿದ್ಯಾರ್ಥಿಗಳು ಅತಿ ಹೆಚ್ಚು ಅಂಕ ಗಳಿಸಬೇಕು ಎಂದು ಹೇಳಿದರು.

ಇನ್ನರ್ ವ್ಹೀಲ್ ಕ್ಲಬ್ ಶಿವಮೊಗ್ಗ ಪೂರ್ವದ ಅಧ್ಯಕ್ಷೆ ವೀಣಾ ಸುರೇಶ್ ಮಾತನಾಡಿ ಎಲ್ಲ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಶಾಲೆಗೆ ಅಗತ್ಯವಾಗಿ ಬೇಕಾದ ಕ್ರೀಡಾ ಸಾಮಗ್ರಿಗಳು, ವಾಲಿಬಾಲ್, ತ್ರೋಬಾಲ್ ನೆಟ್ ಹಾಗೂ ಹಲವಾರು ಸಾಮಗ್ರಿಗಳನ್ನು ವಿತರಿಸಿದರು.

ಸಮುದಾಯ ಸೇವೆಗಳ ನಿರ್ದೇಶಕ ಜಿ.ವಿಜಯಕುಮಾರ್ ಮಾತನಾಡಿ, ಹೈಸ್ಕೂಲ್ ವಿಭಾಗದಲ್ಲಿ ಸ್ಥಾಪಿಸಿರುವ ಇಂಟರ‍್ಯಾಕ್ಟ್ ಕ್ಲಬ್ ಮಕ್ಕಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸುವುದರ ಜತೆಗೆ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ಹಾಗೂ ದೇಶ ವಿದೇಶಗಳಲ್ಲಿ ಇರುವ ಇಂಟರ‍್ಯಾಕ್ಟ್ ಮಕ್ಕಳೊಂದಿಗೆ ಸಂಪರ್ಕ ಬೆಳೆಸಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಡಾ. ಧನಂಜಯ ರಾಂಪುರ ಅವರು ಆರ್ಥಿಕವಾಗಿ ಹಿಂದುಳಿದ ಬಡಮಕ್ಕಳಿಗೆ ನೋಟ್ ಪುಸ್ತಕಗಳನ್ನು ವಿತರಿಸಿದರು. ಶ್ರೀನಿಧಿ ಎಜುಕೇಶನ್ ಸೊಸೈಟಿ ಅಧ್ಯಕ್ಷ ಡಾ. ಕಡಿದಾಳ್ ಗೋಪಾಲ್ ಮಾತನಾಡಿ, ಈಗಾಗಲೇ ಇಂಟರ‍್ಯಾಕ್ಟ್ ಕ್ಲಬ್ ವತಿಯಿಂದ ಹಲವಾರು ಕಾರ್ಯಗಳನ್ನು ಮಾಡುತ್ತ ಬಂದಿರುವುದು ತುಂಬಾ ವಿಶೇಷವಾಗಿದೆ ಎಂದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

Like & Follow Facebook Page ” Digi Malenadu “

ಇಂಟರ‍್ಯಾಕ್ಟ್ ಕ್ಲಬ್ ಜಿಲ್ಲಾ ವೈಸ್ ಚೇರ್ಮನ್ ಮುಸ್ತಾಕ್ ಆಲಿ, ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಶಿಲ್ಪಾ ಗೋಪಿನಾಥ್, ಆಡಳಿತಾಧಿಕಾರಿ ಟಿ.ಪಿ.ನಾಗರಾಜ, ಮಾಜಿ ಅಧ್ಯಕ್ಷ ಗಣೇಶ್, ಕೋಳಿಗೆ ಡಿ ವಾಸಪ್ಪ ಗೌಡ, ಎಂ.ಎಂ.ಮಯೋಧರ, ಟಿ.ಡಿ.ಆರ್.ಶ್ರೀಕಂಠಯ್ಯ, ಬಿಂದು ವಿಜಯ ಕುಮಾರ್, ಆರ್.ಮನೋಹರ್, ಸಲ್ಮಾ, ಜಯಂತಿ ವಾಲಿ, ವೀಣಾ ಹರ್ಷ, ಮಮತಾ ಸುಧೀಂದ್ರ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ನಮ್ಮ ಬಗ್ಗೆ :https://digimalenadu.com/about-us/

ಪ್ರತಿ ನಿತ್ಯ ಯೋಗಾಭ್ಯಾಸ ಮಾಡುವುದು ಅವಶ್ಯ

digimalenadu

ಶಿವಮೊಗ್ಗ
error: Content is protected !!