ನಿರಂತರ ಪರಿಶ್ರಮದಿಂದ ಸಾಧನೆ ಸಾಧ್ಯ

ನಿರಂತರ ಪರಿಶ್ರಮದಿಂದ ಸಾಧನೆ ಸಾಧ್ಯ

ಶಿವಮೊಗ್ಗ | 29 ಜುಲೈ 2025 | ಡಿಜಿ ಮಲೆನಾಡು.ಕಾಂ

ಆತ್ಮವಿಶ್ವಾಸ ಹಾಗೂ ನಿರಂತರ ಪರಿಶ್ರಮದಿಂದ ಸಾಧನೆ ಮಾಡಲು ಸಾಧ್ಯವಿದೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಚಿನ್ನದ ಪದಕ ವಿಜೇತೆ ಆರ್.ವಂದನಾ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ, ಗುರು ಹಿರಿಯರ ಮಾರ್ಗದರ್ಶನದಿಂದ ಇಂಜಿನಿಯರಿಂಗ್ ಪದವಿಯಲ್ಲಿ ಪ್ರಥಮ ರ‍್ಯಾಂಕ್ ಪಡೆಯಲು ಸಾಧ್ಯವಾಯಿತು. ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯೂನಿಕೇಷನ್ ವಿಭಾಗದಲ್ಲಿ ಟಾಪರ್ ಆಗಿದ್ದೇನೆ ಎಂದು ತಿಳಿಸಿದರು.

ವಿಟಿಯು ಪರೀಕ್ಷೆಯಲ್ಲಿ ಪ್ರಥಮ ರ‍್ಯಾಂಕ್ ಪಡೆದ ಆರ್.ವಂದನಾ ಅವರನ್ನು ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷ ನೆಪ್ಚೂನ್ ಕಿಶೋರ್‌ಕುಮಾರ್ ಸನ್ಮಾನಿಸಿ ಮಾತನಾಡಿ, ವಂದನಾ ಅವರ ಸಾಧನೆ ಇತರ ವಿದ್ಯಾರ್ಥಿಗಳಿಗೂ ಸ್ಪೂರ್ತಿಯಾಗಿದೆ. ವಂದನಾ ಅವರು ಭವಿಷ್ಯದಲ್ಲಿ ಉನ್ನತ ಸಾಧನೆ ಮಾಡಲಿ ಎಂದು ಶುಭಹಾರೈಸಿದರು.

ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಡಾ. ಧನಂಜಯ ರಾಂಪುರ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಬೆಳೆದು, ಸರ್ಕಾರಿ ಶಾಲೆಯಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿನಿ ವಂದನಾ ಅವರು ಉನ್ನತ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳು ಆಸಕ್ತಿಯಿಂದ ಅಧ್ಯಯನ ಮಾಡಿದರೆ ಸಾಧನೆ ಸುಲಭ ಎಂದು ತಿಳಿಸಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

Like & Follow Facebook Page ” Digi Malenadu “

ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ಇಂತಹ ಪ್ರತಿಭೆ ಎಲ್ಲರಿಗೂ ಮಾದರಿ ಎಂದು ಹೇಳಿದರು. ಇನ್ನರ್‌ವ್ಹೀಲ್ ಮಾಜಿ ಅಧ್ಯಕ್ಷೆ ಬಿಂದು ವಿಜಯಕುಮಾರ್, ನಮ್ಮ ಟಿವಿಯ ಶ್ರೀಕಾಂತ್, ತರುಣ್, ಪ್ರಾಧ್ಯಾಪಕಿ ಡಾ. ಅಶ್ವಿನಿ ಮತ್ತಿತರರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ನಮ್ಮ ಬಗ್ಗೆ :https://digimalenadu.com/about-us/

ಸಂಘ ಸಂಸ್ಥೆಗಳು ಪ್ರಗತಿ ಸಾಧಿಸುವಲ್ಲಿ ಸದಸ್ಯರ ಸಹಕಾರ ಮುಖ್ಯ

digimalenadu

ಶಿವಮೊಗ್ಗ
error: Content is protected !!