ಉತ್ತಮ ಶಿಕ್ಷಣದಿಂದ ಜೀವನದಲ್ಲಿ ಯಶಸ್ಸು

ಉತ್ತಮ ಶಿಕ್ಷಣದಿಂದ ಜೀವನದಲ್ಲಿ ಯಶಸ್ಸು

ಶಿವಮೊಗ್ಗ | 29 ಜುಲೈ 2025 | ಡಿಜಿ ಮಲೆನಾಡು.ಕಾಂ

ಉತ್ತಮ ಶಿಕ್ಷಣ ಪಡೆದಲ್ಲಿ ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯವಿದೆ ಎಂದು ವಿಕ್ಟೋರಿಯ ಆಸ್ಪತ್ರೆ ಸಹಾಯಕ ಪ್ರಾಧ್ಯಾಪಕ ಡಾ. ವಿವೇಕ್ ಎಸ್. ರೇವಣ್‌ಕರ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ದೈವಜ್ಞ ಕಲ್ಯಾಣ ಮಂದಿರದಲ್ಲಿ ಆಯೋಜಿಸಿದ್ದ ದೈವಜ್ಞ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಸರ್ವ ಸದಸ್ಯರ ಸಭೆಯಲ್ಲಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿ, ಜ್ಞಾನಕ್ಕಿಂತ ಮಿಗಿಲಾದುದು ಯಾವುದೂ ಇಲ್ಲ. ಶ್ರದ್ಧೆ, ತಾಳ್ಮೆ ಹಾಗೂ ನಿರಂತರ ಪರಿಶ್ರಮ ವಹಿಸಿ ಅಧ್ಯಯನ ಮಾಡಬೇಕು ಎಂದು ತಿಳಿಸಿದರು.

ಸೋಲಿನಿಂದ ಜೀವನದ ಪಾಠಗಳನ್ನು ಕಲಿಯಬೇಕು. ಪ್ರಾಮಾಣಿಕತೆಯಿಂದ ಇರಬೇಕು. ದೇವರನ್ನು ಎಂದಿಗೂ ಮರೆಯಬಾರದು. ಪೋಷಕರು ಮಕ್ಕಳಿಗೆ ಓದುವುದನ್ನು ಮಾತ್ರ ಕಲಿಸದೆ ಜೀವನದ ಪಾಠವನ್ನು ಕಲಿಸಬೇಕು ಎಂದು ಹೇಳಿದರು.

ಸೊಸೈಟಿ ಅಧ್ಯಕ್ಷ ಚಂದ್ರಹಾಸ ಪಿ. ರಾಯ್ಕರ್ ಮಾತನಾಡಿ, ದೈವಜ್ಞ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ವಿವಿಧ ರೀತಿ ಸಾಲಗಳನ್ನು ಕಡಿಮೆ ಬಡ್ಡಿದರದಲ್ಲಿ ನೀಡುತ್ತಿದೆ. ಠೇವಣಿಗಳಿಗೆ ಹೆಚ್ಚಿನ ಬಡ್ಡಿ ನೀಡಲಾಗುತ್ತಿದೆ ಎಂದರು. ಪ್ರತಿಭಾ ಪುರಸ್ಕಾರ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

Like & Follow Facebook Page ” Digi Malenadu “

ಸೊಸೈಟಿ ಉಪಾಧ್ಯಕ್ಷ ಎಸ್. ಪಾಂಡುರಂಗ ಶೇಟ್, ಖಜಾಂಚಿ ಸುಧಾಕರ ವಿ. ಶೇಟ್, ನಿರ್ದೇಶಕರಾದ ಬಿಳಿಕಿ ಕೃಷ್ಣಮೂರ್ತಿ ಬಿ.ಎನ್, ಕಮಲಾಕ್ಷ ಎಸ್.ಡಿ., ಗುರುರಾಜ ಎಂ. ಶೇಟ್, ಮಂಜುನಾಥ ಜಿ. ಶೇಟ್, ನಾಗರಾಜ ಜಿ. ಶೇಟ್, ವಿಜಯೇಂದ್ರ ಜಿ. ವರ್ಣೇಕರ್, ನಿರ್ಮಲಾ ಪಿ. ಶೇಟ್, ಪ್ರತಿಮಾ ದಿನೇಶ ಶೇಟ್ ಹಾಗೂ ಅಚ್ಚುತ ಶ್ರೀಧರ ಶೇಟ್ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ನಮ್ಮ ಬಗ್ಗೆ :https://digimalenadu.com/about-us/

ಸುಧಾರಿತ ಕಾರ್ಡಿಯಾಕ್ ಇಮೇಜಿಂಗ್ ತಂತ್ರಗಳ ಉಪನ್ಯಾಸ

digimalenadu

ಶಿವಮೊಗ್ಗ
error: Content is protected !!